ಸೋಮವಾರಪೇಟೆ, ಏ. ೨: ಇಲ್ಲಿನ ರೋಟರಿ ಕ್ಲಬ್ ವತಿಯಿಂದ ಸ್ಥಳೀಯ ಮಹಿಳಾ ಸಮಾಜದ ಸಭಾಂಗಣದಲ್ಲಿ ಅಂರ‍್ರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಡಾ. ಸುಪರ್ಣ ಕೃಷ್ಣಾನಂದ್ ಮಾತನಾಡಿ, ಮಹಿಳೆಯರು ದೈಹಿಕವಾಗಿ ಸಾಕಷ್ಟು ಶ್ರಮಪಡುತ್ತಿರುವ ನಡುವೆ, ತಮ್ಮ ವೈಯಕ್ತಿಕ ಸಮಸ್ಯೆಗಳ ಬಗ್ಗೆ ತೀರಾ ನಿರಾಸಕ್ತಿ ವಹಿಸುತ್ತಿರುವುದರಿಂದ, ಕೆಲವರು ಆರೋಗ್ಯ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಲ ಕಾಲಕ್ಕೆ ತಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮುಂಜಾಗ್ರತೆ ವಹಿಸಬೇಕೆಂದರು.

ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಲೋಕೇಶ್ ವಹಿಸಿದ್ದರು. ವೇದಿಕೆಯಲ್ಲಿ ನಿವೃತ್ತ ಶಿಕ್ಷಕಿ ಎಂ.ಜೆ. ಅಣ್ಣಮ್ಮ ಮತ್ತಿತರರು ಇದ್ದರು. ಇದೇ ಸಂದರ್ಭ ಮಹಿಳಾ ಸದಸ್ಯರಿಂದ ಫ್ಯಾಷನ್ ಶೋ ಮತ್ತು ನೃತ್ಯ ಪ್ರದರ್ಶನ ನಡೆಯಿತು.