ಮಡಿಕೇರಿ, ಏ. ೩: ವಿಧಾನ ಸಭಾ ಚುನಾವಣೆಗೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದಿಂದ ಇದೇ ಪ್ರಥಮ ಬಾರಿಗೆ ಭಾರತೀಯ ಕಮ್ಯುನಿಸ್ಟ್ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದ್ದು, ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿ ಹೆಚ್.ಎಂ. ಸೋಮಪ್ಪ ಅವರ ಹೆಸರನ್ನು ಪಕ್ಷದ ರಾಜ್ಯ ಘಟಕದ ಸಹ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಬಿ.ಅಮ್ಜದ್ ಘೋಷಿಸಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರದ ಶಾಸನ ಸಭೆಗಳಿಗೆ ಆಯ್ಕೆಯಾಗುತ್ತಿರುವವರು ರೈತರ, ಕಾರ್ಮಿಕರ ಮತ್ತು ಜನಸಾಮಾನ್ಯರ ಧ್ವನಿಯಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜನಪರ ಹೋರಾಟದ ಭಾಗವಾಗಿ ಈ ಬಾರಿ ಸಿಪಿಐ ಕೊಡಗಿನ ಮಡಿಕೇರಿ ಸೇರಿದಂತೆ ರಾಜ್ಯದ ಏಳು ಕ್ಷೇತ್ರಗಳಲ್ಲಿ ಅಭ್ಯರ್ಥಿ ಗಳನ್ನು ಕಣಕ್ಕಿಳಿಸುತ್ತಿರುವುದಾಗಿ ತಿಳಿಸಿದರು.
ಪ್ರಸ್ತುತ ರಾಜಕೀಯ ವ್ಯವಸ್ಥೆಯಲ್ಲಿ ಕೋಮುವಾದ, ಭ್ರಷ್ಟಾಚಾರ ಮತ್ತು ದ್ವೇಷ ಸಾಧನೆಯಷ್ಟೆ ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಇದರಿಂದ ಪ್ರಜಾತಂತ್ರ ವ್ಯವಸ್ಥೆ ಶಿಥಿಲವಾಗುತ್ತಿದ್ದು, ಜನಸಾಮಾನ್ಯರ ಮೂಲಭೂತ ಸಮಸ್ಯೆಗಳು ತೆರೆಮರೆಗೆ ಸರಿಯುತ್ತಿದೆ ಎಂದು ವಿಷಾದಿಸಿದರು.
ಕಳೆದ ಏಳೆಂಟು ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಆಡಳಿತದಲ್ಲಿದೆ. ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಆ ಪಕ್ಷ ನೀಡಿರುವ ಭರವಸೆಗಳು ಹುಸಿಯಾಗಿದ್ದು, ನಿತ್ಯೋಪಯೋಗಿ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಬಾರದೆ ಗಗನಕ್ಕೇರುತ್ತಿದೆ. ೨ ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ಸುಳ್ಳಾಗಿದ್ದು, ಇದೀಗ ಉದ್ಯೋಗ ಸೃಷ್ಟಿ ಲಕ್ಷಕ್ಕೆ ಬಂದು ನಿಂತಿದೆ ಎಂದು ಲೇವಡಿ ಮಾಡಿದರು. ಭ್ರಷ್ಟಾಚಾರ ಎಗ್ಗಿಲ್ಲದಂತೆ ನಡೆಯುತ್ತಿದೆ ಎಂದರು. ರೈತರು, ಕಾರ್ಮಿಕರು, ಜನಸಾಮಾನ್ಯರ ಪರವಾಗಿ ಹೋರಾಟಗಳನ್ನು ರೂಪಿಸಿಕೊಂಡು ಬರುತ್ತಿರುವ ಸಿಪಿಐ ಈ ಬಾರಿ ಚುನಾವಣೆಗೆ ಧುಮುಕಿರುವುದಾಗಿ ಸ್ಪಷ್ಟಪಡಿಸಿದರು.
ಪ್ರಮುಖ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ತನ್ನ ಬದ್ಧತೆಯನ್ನು ಉಳಿಸಿಕೊಂಡಿಲ್ಲವೆAದು ಆರೋಪಿಸಿದ ಅಮ್ಜದ್, ಬಿಜೆಪಿಯ ದುರಾಡಳಿತಕ್ಕೆ ಪರ್ಯಾಯವಾಗಿ ಎಡಪಕ್ಷಗಳನ್ನು ಒಳಗೊಂಡAತೆ ಎಲ್ಲಾ ಪಕ್ಷಗಳ ಧ್ರುವೀಕರಣವಾಗಬೇಕೆನ್ನುವ ಸಲಹೆಯನ್ನು ಸಿಪಿಐ ನೀಡಿತ್ತಾದರೂ, ಕಾಂಗ್ರೆಸ್ ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.ಕೋಮವಾದ, ಬೆಲೆ ಏರಿಕೆ ಮೊದಲಾದ ವಿಚಾರಗಳನ್ನು ಕೈಗೆತ್ತಿಕೊಂಡು ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ನಡೆಸಿದರು. ಆದರೆ, ಚುನಾವಣೆಯ ಮಹತ್ವದ ಅವಧಿಯಲ್ಲಿ ಮೌನವಾಗಿ ದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಮಡಿಕೇರಿ ಕ್ಷೇತ್ರದ ಸಿಪಿಐ ಅಭ್ಯರ್ಥಿ ಹಾಗೂ ಪಕ್ಷದ ಜಿಲ್ಲಾ ಸಹ ಕಾರ್ಯದರ್ಶಿ ಹೆಚ್.ಎಂ. ಸೋಮಪ್ಪ ಮಾತನಾಡಿ, ಪಕ್ಷದಿಂದ ಶೋಷಿತ ಸಮುದಾಯಗಳ ಪರವಾಗಿ ನಿರಂತರವಾದ ಹೋರಾಟಗಳನ್ನು ನಡೆಸಿಕೊಂಡು ಬರಲಾಗಿದೆ. ಸೂರಿಲ್ಲ ದವರಿಗಾಗಿ ಸೂರು ಒದಗಿಸುವ ನಿಟ್ಟಿನಲ್ಲಿ ‘ಸೂರಿಗಾಗಿ ಸಮರ’ ಎನ್ನುವ ಆಂದೋಲವನ್ನು ಪಕ್ಷ ರೂಪಿಸಿತ್ತು. ಜಿಲ್ಲೆಯಲ್ಲಿನ ವನ್ಯಜೀವಿ- ಮಾನವ ಸಂಘರ್ಷ, ದುಡಿಯುವ ವರ್ಗದ ಶೋಷಣೆ, ರೈತರು ಹಾಗೂ ಕಾರ್ಮಿಕ ಸಮೂಹದ ಮೂಲಭೂತ ಬೇಡಿಕೆ ಗಳಿಗೆ ಸೂಕ್ತ ಸ್ಪಂದನ ದೊರಕಬೇಕಾ ಗಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಸ್ಪರ್ಧೆಗೆ ಇಳಿದಿರುವುದಾಗಿ ಹೇಳಿದರು.
ಗೋಷ್ಠಿಯಲ್ಲಿ ಸಿಪಿಐ ಜಿಲ್ಲಾ ಕಾರ್ಯದರ್ಶಿ ಕೆ.ವಿ. ಸುನಿಲ್, ಜಿಲ್ಲಾ ಸಹ ಕಾರ್ಯದರ್ಶಿ ರಫೀಕ್ ನವಲಗುಂದ, ಜಿಲ್ಲಾ ಜಂಟಿ ಕಾರ್ಯದರ್ಶಿ ರಮೇಶ್ ಮಾಯಮುಡಿ, ಸೋಮವಾರಪೇಟೆ ತಾಲೂಕು ಕಾರ್ಯದರ್ಶಿ ಎಸ್.ಹೆಚ್. ಶಬಾನ ಉಪಸ್ಥಿತರಿದ್ದರು.