ಚೆಯ್ಯಂಡಾಣೆ, ಏ. ೨: ಅಂರ‍್ರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ಚೆಯ್ಯಂಡಾಣೆಯ ಸಂಜೀವಿನಿ ಒಕ್ಕೂಟದಿಂದ ಸ್ಥಳೀಯ ಮಹಿಳಾ ಸಮಾಜದಲ್ಲಿ ಆಟೋಟ ಸ್ವರ್ಧೆ ಹಾಗೂ ವಾರ್ಷಿಕ ಸಭೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ರತ್ತು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಸ್ಥಳೀಯ ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ಚೇತನ್, ಮಹಿಳೆಯರು ಆಟೋಟಗಳಲ್ಲಿ ಭಾಗವಹಿಸುವುದು ಮುಖ್ಯ ಸೋಲು-ಗೆಲುವು ಮುಖ್ಯವಲ್ಲ ಎಂದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಮಾತನಾಡಿ, ಮಹಿಳೆಯರು ಸ್ವಾವಲಂಬಿಗಳಾಗಿ ಜೀವಿಸಲು ಸರಕಾರ ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದರ ಸದುಪಯೋಗ ಎಲ್ಲ ಸಂಜೀವಿನಿ ಒಕ್ಕೂಟದ ಸದಸ್ಯರು ಪಡೆದುಕೊಂಡು ಚೆಯ್ಯಂಡಾಣೆ ಸಂಜೀವಿನಿ ಒಕ್ಕೂಟ ಉತ್ತಮ ಸಂಘವಾಗಿ ಕಾರ್ಯಾಚರಿಸಲಿ ಎಂದರು.

ಆಟೋಟ ಸ್ವರ್ಧೆಯಲ್ಲಿ ವಿಜೇತರಾದವರಿಗೆ ಹಾಗೂ ಕಳೆದ ಸಾಲಿನಲ್ಲಿ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬಿ.ಎಸ್. ಪುಷ್ಪ, ಗ್ರಾ.ಪಂ. ಸದಸ್ಯರಾದ ಮಂಜುಳಾ, ಪೆಮ್ಮಂಡ ಕಾವೇರಮ್ಮ, ವಾಣಿ, ಬೀನ ಕುಮಾರಿ, ವಸಂತಿ, ನಳಿನಿ, ಮೀನಾಕ್ಷಿ, ಸಂಜೀವಿನಿ ಒಕ್ಕೂಟದ ಸದಸ್ಯರು ಇದ್ದರು. ಸ್ವಾಗತವನ್ನು ವಸಂತಿ ಹಾಗೂ ವರದಿಯನ್ನು ನಳಿನಿ ಮಂಡಿಸಿದರು.