ಸಿದ್ದಾಪುರ, ಏ. ೩: ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾ.ಪಂ. ವ್ಯಾಪ್ತಿಯ ಆರನೇ ಹೊಸಕೋಟೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ಮಂಜೂರಾತಿ ಮಾಡಿಕೊಡಬೇಕೆಂದು ಅಂಬೇಡ್ಕರ್ ಸೇನೆಯ ಜಿಲ್ಲಾಧ್ಯಕ್ಷ ಸತೀಶ್ ಟಿ.ಆರ್. ನೇತೃತ್ವದಲ್ಲಿ ಕುಶಾಲನಗರ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಪ್ರಕಾಶ್ ಅವರಿಗೆ ಮನವಿ ಪತ್ರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ಧರಾಜು, ಉಪಾಧ್ಯಕ್ಷ ಮಂಜು, ರಾಕೇಶ್ ಇನ್ನಿತರರು ಹಾಜರಿದ್ದರು.