ಮಡಿಕೇರಿ, ಏ. ೪: ಜಿಲ್ಲಾಡಳಿತ ವತಿಯಿಂದ ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ‘ಭಗವಾನ್ ಮಹಾವೀರ ಜಯಂತಿ’ಯನ್ನು ಸರಳವಾಗಿ ಆಚರಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರು ಭಗವಾನ್ ಮಹಾವೀರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಕೃಷಿ ಇಲಾಖೆಯ ಉಪ ನಿರ್ದೇಶಕ ಡಾ. ಬಲರಾಜ್ ರಂಗರಾವ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ನಯನ, ಚುನಾವಣಾ ತಹಶೀಲ್ದಾರ್ ರವಿಶಂಕರ, ಎನ್ಐಸಿ ಅಧಿಕಾರಿ ಅಜಿತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ಮಣಜೂರು ಮಂಜುನಾಥ್, ಮಧುಕರ್ ಇತರರು ನಮನ ಸಲ್ಲಿಸಿದರು.