ಮಡಿಕೇರಿ, ಏ. ೪: ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಶಾಖೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೊಡಗು ಜಿಲ್ಲೆ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕೊಡಗು, ಮೆಕ್ಗಿಲ್ ವಿಶ್ವವಿದ್ಯಾನಿಲಯ ಕೆನಡಾ ಮತ್ತು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕೊಡಗು ಶಾಖೆ ಹಾಗೂ ಸಮುದಾಯದ ಸಹಭಾಗಿತ್ವ ದೊಂದಿಗೆ ನಗರದ ರೆಡ್ಕ್ರಾಸ್ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆಯಲ್ಲಿ ವಿಶೇಷಚೇತನರ ಅವಶ್ಯಕತೆಗಳ ಅಳವಡಿಕೆಯ ಮಡಿಕೇರಿ, ಏ. ೪: ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಶಾಖೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೊಡಗು ಜಿಲ್ಲೆ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕೊಡಗು, ಮೆಕ್ಗಿಲ್ ವಿಶ್ವವಿದ್ಯಾನಿಲಯ ಕೆನಡಾ ಮತ್ತು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕೊಡಗು ಶಾಖೆ ಹಾಗೂ ಸಮುದಾಯದ ಸಹಭಾಗಿತ್ವ ದೊಂದಿಗೆ ನಗರದ ರೆಡ್ಕ್ರಾಸ್ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆಯಲ್ಲಿ ವಿಶೇಷಚೇತನರ ಅವಶ್ಯಕತೆಗಳ ಅಳವಡಿಕೆಯ ಪ್ರವಾಹದ ಅನುಭವಗಳ ಕುರಿತಾದ ಮಾಹಿತಿಯನ್ನು ಹಂಚಿಕೊAಡರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ.ಕೆ. ವಿಶ್ವನಾಥ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ರೆಡ್ಕ್ರಾಸ್ ಸಭಾಪತಿ ರವೀಂದ್ರ ರೈ, ಕೊಡಗು ಜಿಲ್ಲಾ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನಾ ಸಹಾಯಕ ರಾಜ್ ಕುಮಾರ್, ಸುಂಟಿಕೊಪ್ಪ ಸ್ವಸ್ಥ ಸಂಸ್ಥೆಯ ನಿರ್ದೇಶಕಿ ಆರತಿ ಸೋಮಯ್ಯ, ಕೆನಡಾ ಮೆಕ್ಗಿಲ್ ವಿಶ್ವವಿದ್ಯಾನಿಲಯದ ಮ್ಯಾಥ್ಯೂ ಸೀಮರ್ಡ್, ಕೊಡಗು ಜಿಲ್ಲಾ ವಿಶೇಷಚೇತನರ ಸಂಘದ ಅಧ್ಯಕ್ಷ ಮಹೇಶ್ವರ್, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಸಂಸ್ಥೆಯ ಡಾ. ಸೀತಾರಾಂ ಎಂ.ಆರ್., ಡಾ. ಶೃತಿ, ಕಾರ್ಯಕ್ರಮ ವ್ಯವಸ್ಥಾಪಕರಾದ ಅಂಕಾಚಾರಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.