ಮಡಿಕೇರಿ, ಏ. ೪: ಮಡಿಕೇರಿ ನಿವಾಸಿಯಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಶುಶ್ರೂಷಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಬಡ್ತಿ ಹೊಂದಿ ಪ್ರಸ್ತುತ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಹಿರಿಯ ಶುಶ್ರೂಷಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಬಂಗಾಡುಮನೆ ವಸಂತಿ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ನಡೆದ ರಾಷ್ಟçಮಟ್ಟದ ಅಥ್ಲೆಟಿಕ್ಸ್ನ ೪೦೦ ಮೀಟರ್ ಓಟದಲ್ಲಿ ಬೆಳ್ಳಿ ಪದಕ ಮತ್ತು ೧೦೦ ಮೀಟರ್ ಓಟದಲ್ಲಿ ಕಂಚಿನ ಪದಕ ಗಳಿಸಿ ಅಂರ‍್ರಾಷ್ಟಿçÃಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ ಮೈಸೂರಿನ ಚಾಮುಂಡೇಶ್ವರಿ ಕ್ರೀಡಾಂಗಣದಲ್ಲಿ ನಡೆದ ಸರಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ೧೦೦ ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗಳಿಸಿ ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.