ವೀರಾಜಪೇಟೆ, ಏ. ೫: ಸಮೀಪದ ಕೆದಮುಳ್ಳೂರು ಗ್ರಾಮದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ ವಿಜೃಂಭಣೆಯಿAದ ನಡೆಯಿತು.

ತಾ. ೧ ರಂದು ಕೊಟ್ಟಿಪಾಡುವುದರೊಂದಿಗೆ ಹಬ್ಬಕ್ಕೆ ಚಾಲನೆ ನೀಡಲಾಯಿತು. ತಾ. ೨ ರಂದು ತಕ್ಕರ ಮನೆಯಿಂದ ಭಂಡಾರ ತರುವುದು, ಮೇಲೇರಿ ಹಾಕುವುದು, ವಿವಿಧ ಕೋಲಗಳು ನಡೆದವು. ತಾ. ೩ ರಂದು ಬೆಳಿಗ್ಗೆ ೭.೩೦ ಗಂಟೆಗೆ ವಿಷ್ಣುಮೂರ್ತಿ ಕೋಲ ಬಳಿಕ ಚಾಮುಂಡಿ ದೇವಿಯ ಕೋಲ ನಡೆಯಿತು.

ಸಂಜೆ ದೇವರು ಬನಕ್ಕೆ ತೆರಳಿ ಅಲ್ಲಿ ಪೂಜಾ ವಿಧಿವಿಧಾನಗಳನ್ನು ಪೂರೈಸಿದ ಬಳಿಕ ವಾರ್ಷಿಕ ತೆರೆ ಮಹೋತ್ಸವಕ್ಕೆ ತೆರೆ ಎಳೆಯಲಾಯಿತು.