ಮುಳ್ಳೂರು, ಏ. ೬ : ಸಮೀಪದ ನಂದಿಗುAದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಗೊಂಡ ಶಿಕ್ಷಕಿ ಕಾಳಮ್ಮ ಅವರನ್ನು ಶಾಲೆ ಎಸ್ಡಿಎಂಸಿ ವತಿಯಿಂದ ಬೀಳ್ಕೊಡಲಾಯಿತು. ಶಿಕ್ಷಕಿ ಕೆ.ಡಿ .ಕಾಳಮ್ಮ ಅವರು ಒಟ್ಟು ೨೪ ವರ್ಷ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಂದಿಗುAದ ಶಾಲೆಯಲ್ಲಿ ನಿವೃತ್ತಿಗೊಂಡಿದ್ದಾರೆ. ಶಾಲೆಯ ಎಸ್ಡಿಎಂಸಿ ಅಧ್ಯಕ್ಷೆ ಶೇಷಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಿಕ್, ಸದಸ್ಯೆ ವಿಶಾಲಾಕ್ಷಿ, ಪ್ರಮುಖರಾದ ಚಂದ್ರಶೇಖರ್, ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮುಂತಾದವರಿದ್ದರು