ಸೋಮವಾರಪೇಟೆ, ಏ. ೬: ಅನಾದಿಕಾಲದಿಂದಲೂ ಅನೂಚಾನವಾಗಿ ಆಚರಿಸಿಕೊಂಡು ಬರುತ್ತಿರುವ, ತಾಲೂಕಿನ ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ ಅಂಗವಾಗಿರುವ ಸುಗ್ಗಿ ಉತ್ಸವಗಳು ಮಲೆನಾಡು ಪ್ರದೇಶದಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲ್ಪಡುತ್ತಿದ್ದು, ಪ್ರಸಕ್ತ ಸಾಲಿನ ಸುಗ್ಗಿಯ ಸಂದರ್ಭವೇ ವಿಧಾನ ಸಭಾ ಚುನಾವಣೆಯೂ ಘೋಷಣೆ ಯಾಗಿರುವುದರಿಂದ ಹಬ್ಬದ ಸಂಭ್ರಮದ ಮೇಲೆ ನೀತಿ ಸಂಹಿತೆಯ ಕಾರ್ಮೋಡ ಕವಿದಿದೆ.
ಇನ್ನೇನು ಕೆಲವೇ ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗಿ ಗ್ರಾಮೀಣ ಭಾಗದ ಜನರು ಕೃಷಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುವ ಸಮಯ ಸನ್ನಿಹಿತ ವಾಗುತ್ತಿರುವಾಗಲೇ ಕೃಷಿ ಕಾರ್ಯ ಸೋಮವಾರಪೇಟೆ, ಏ. ೬: ಅನಾದಿಕಾಲದಿಂದಲೂ ಅನೂಚಾನವಾಗಿ ಆಚರಿಸಿಕೊಂಡು ಬರುತ್ತಿರುವ, ತಾಲೂಕಿನ ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ ಅಂಗವಾಗಿರುವ ಸುಗ್ಗಿ ಉತ್ಸವಗಳು ಮಲೆನಾಡು ಪ್ರದೇಶದಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲ್ಪಡುತ್ತಿದ್ದು, ಪ್ರಸಕ್ತ ಸಾಲಿನ ಸುಗ್ಗಿಯ ಸಂದರ್ಭವೇ ವಿಧಾನ ಸಭಾ ಚುನಾವಣೆಯೂ ಘೋಷಣೆ ಯಾಗಿರುವುದರಿಂದ ಹಬ್ಬದ ಸಂಭ್ರಮದ ಮೇಲೆ ನೀತಿ ಸಂಹಿತೆಯ ಕಾರ್ಮೋಡ ಕವಿದಿದೆ.
ಇನ್ನೇನು ಕೆಲವೇ ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗಿ ಗ್ರಾಮೀಣ ಭಾಗದ ಜನರು ಕೃಷಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುವ ಸಮಯ ಸನ್ನಿಹಿತ ವಾಗುತ್ತಿರುವಾಗಲೇ ಕೃಷಿ ಕಾರ್ಯ ದೇವಿಗೆ ಊರಿನ ಎಲ್ಲರೂ ಒಟ್ಟುಸೇರಿ ವರ್ಷಕ್ಕೊಮ್ಮೆ ಪೂಜೆ ಸಲ್ಲಿಸುವ ಆಚರಣೆ ತಲೆತಲಾಂತರದಿAದ ನಡೆದುಕೊಂಡು ಬಂದಿದ್ದು ಈ ಸಂದರ್ಭ ಗ್ರಾಮದ ಹೊರಭಾಗಗಳಲ್ಲಿ ನೆಲೆಸಿರುವ ಮಂದಿಯೂ ಗ್ರಾಮಕ್ಕೆ ಆಗಮಿಸುವ ಹಿನ್ನೆಲೆ ಇಡೀ ಗ್ರಾಮ ಸಂಭ್ರಮದಲ್ಲಿರುತ್ತವೆ.
ಸುಗ್ಗಿ ಉತ್ಸವ ಪ್ರಾರಂಭದ ದಿನದಿಂದ ‘ಸುಗ್ಗಿ ಸಾರು’ ಎಂಬ ಕಟ್ಟುನಿಟ್ಟಿನ ಅಚರಣೆಯನ್ನು ಕೈಗೊಳ್ಳಲಾಗುತ್ತದೆ. ಉತ್ಸವದ ೧೫ದಿನಗಳಲ್ಲಿ ಹಸಿ ಮರ ಕಡಿಯುವುದು, ಒಣಗಿದ ಗಿಡ ಬಳ್ಳಿಗಳನ್ನು ಮುರಿಯದಂತೆ ಎಚ್ಚರ ವಹಿಸುತ್ತಾರೆ. ಹಗಲು ವೇಳೆ ನೆಂಟರಿಷ್ಟರು ಮನೆ ಸೇರದಂತೆ ನಿರ್ಬಂಧ ವಿಧಿಸುತ್ತಾರೆ. ನಕ್ಷತ್ರಗಳು ಕಂಡ ನಂತರವೇ ಮನೆಯೊಳಕ್ಕೆ ಬರಮಾಡಿಕೊಳ್ಳುತ್ತಾರೆ. ಹಗಲಿನ ವೇಳೆ ಹೊರಗಡೆಯಿಂದ ಆಹಾರ ಸಾಮಗ್ರಿಗಳನ್ನು ಖರೀದಿಸುವಂತಿಲ್ಲ. ಇಂತಹ ಕಟ್ಟುಪಾಡುಗಳು ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಸುಗ್ಗಿ ಸಂದರ್ಭ ಚಾಲ್ತಿಯಲ್ಲಿರುತ್ತವೆ.
ಕೂತಿ ನಾಡು ಶ್ರೀ ಸಬ್ಬಮ್ಮ ದೇವಿಯ(ಲಕ್ಷಿö್ಮÃ)ಉತ್ಸವ ಎಂದೇ ಹೆಸರಾಗಿರುವ ನಗರಳ್ಳಿ ಸುಗ್ಗಿ ಹಲವು ವೈಶಿಷ್ಟö್ಯಗಳೊಂದಿಗೆ ನೆರವೇರುತ್ತದೆ. ಕೂತಿನಾಡು ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಕೂತಿ, ಎಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೀಕಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟದಕೊಪ್ಪ, ಹಳ್ಳಿಯೂರು, ಕೊತ್ತನಳ್ಳಿ, ಇನಕನಹಳ್ಳಿ, ಬೆಂಕಳ್ಳಿ, ಕುಡಿಗಾಣ, ನಾಡ್ನಳ್ಳಿ, ತಡ್ಡಿಕೊಪ್ಪ ಹಾಗೂ ಪಕ್ಕದ ಸಕಲೇಶಪುರ ತಾಲೂಕಿನ ಓಡಳ್ಳಿ ಸೇರಿದಂತೆ ಒಟ್ಟು ೧೮ ಗ್ರಾಮಗಳ ಜನರು ಒಂದೆಡೆ ಕಲೆತು ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಅನಾದಿಕಾಲದಿಂದ ನಡೆದು ಬಂದ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸುತ್ತಾರೆ.
ಉತ್ಸವದ ಕೊನೆ ದಿನ ನಗರಳ್ಳಿಯ ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್ ಕಲ್ಲಿನ ಕಂಬದಲ್ಲಿ ೪ಮಂದಿ ದೇವರ ಒಡೆಕಾರರನ್ನು ಬೆತ್ತದ ಉಯ್ಯಾಲೆ ಯಲ್ಲಿ ತೂಗುವ ಜಾನಪದದ ಭಾಗವಂತೂ ಗ್ರಾಮೀಣ ಭಾಗದ ಜನರು ಗ್ರಾಮ ದೇವತೆಯ ಮೇಲಿಟ್ಟಿರುವ ಭಕ್ತಿಭಾವವನ್ನು ಪ್ರಕಟಗೊಳಿಸುವ ಬಹುಮುಖ್ಯ ಕ್ಷಣಗಳಾಗುತ್ತವೆ.
ತೋಳೂರು ಶೆಟ್ಟಳ್ಳಿ ಸಬ್ಬಮ್ಮ ದೇವರ ವಾರ್ಷಿಕ ಸುಗ್ಗಿ ಉತ್ಸವ ಕೂಡ ಈ ವ್ಯಾಪ್ತಿಯಲ್ಲಿ ನಡೆಯುವ ಬಹುದೊಡ್ಡ ಸುಗ್ಗಿ ಉತ್ಸವವಾಗಿದೆ. ಬೀರೇದೇವರ ಹಬ್ಬ ಆಚರಣೆ ಯೊಂದಿಗೆ ಸುಗ್ಗಿ ಪ್ರಾರಂಭ ವಾಗಲಿದ್ದು ಗುಮ್ಮನ ಮರಿ ಪೂಜೆ, ಸಾಮೂಹಿಕ ಭೋಜನ ಊರೊಡೆ ಯನ ಪೂಜೆ, ಬೆಂಕಿಕೊAಡ ಹಾಯುವದು, ಮೊದಲ ಬೇಟೆ ನಂತರ ಊರು ಸುಗ್ಗಿ, ದೇವರ ಗಂಗಾಸ್ನಾನ ಹಾಗೂ ದೊಡ್ಡ ಪೂಜೆಗಳು ಸುಗ್ಗಿ ಉತ್ಸವದ ಪ್ರಮುಖ ಭಾಗಗಳಾಗಿವೆ. ಇದರೊಂದಿಗೆ ಸೋಮವಾರಪೇಟೆ ವ್ಯಾಪ್ತಿಯ ಚೌಡ್ಲು, ಯಡೂರು, ಹಾನಗಲ್ಲು ಶೆಟ್ಟಳ್ಳಿ ಗ್ರಾಮಗಳಲ್ಲೂ ಸುಗ್ಗಿ ಉತ್ಸವ ನಡೆಯುತ್ತವೆ.
ಪ್ರಸ್ತುತ ವರ್ಷದ ಸುಗ್ಗಿ ಹಬ್ಬದ ಸಮಯದಲ್ಲಿಯೇ ರಾಜ್ಯ ವಿಧಾನ ಸಭೆಗೆ ಚುನಾವಣೆಯೂ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದೆ. ಚುನಾವಣಾ ಆಯೋಗವು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಾಮೂಹಿಕ ಆಚರಣೆಗಳ ಮೇಲೆ ನಿಗಾವಹಿಸಿವೆ. ಊರ ಹಬ್ಬಗಳು, ದೇವಾಲಯ ಗಳ ವಾರ್ಷಿಕೋತ್ಸವ, ಸುಗ್ಗಿ ಉತ್ಸವಗಳಲ್ಲಿ ಸಾರ್ವಜನಿಕರು ಒಟ್ಟಾಗಿ ಭಾಗವಹಿಸುವುದರಿಂದ ರಾಜಕೀಯ ಮುಖಂಡರು, ಅಭ್ಯರ್ಥಿಗಳು ಪೂಜಾ ಕಾರ್ಯದಲ್ಲಿ ಭಾಗಿಯಾಗುವುದು ಸಾಮಾನ್ಯ ವಾಗಿದೆ. ಈ ಸಮಯದಲ್ಲಿ ಪ್ರಚಾರ, ಆಮಿಷ, ಓಲೈಕೆಗಳು ನಡೆಯ ಬಹುದೆನ್ನುವ ಕಾರಣದಿಂದ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದ್ದು, ಅನ್ನದಾನಕ್ಕೆ ಅವಕಾಶ ನೀಡದೇ ದೇವರ ಪ್ರಸಾದ ವಿತರಣೆಗೆ ಮಾತ್ರ ಅವಕಾಶ ಕಲ್ಪಿಸಿದೆ. ಇದರಿಂದಾಗಿ ಸುಗ್ಗಿ ಸೇರಿದಂತೆ ವಾರ್ಷಿಕೋತ್ಸವ ಆಯೋಜಕರಲ್ಲಿ ಸಹಜವಾಗಿ ಆತಂಕ ಸೃಷ್ಟಿಸಿದ್ದು, ಈ ನಿಯಮವು ಸುಗ್ಗಿ ಹಬ್ಬದ ಸಂಭ್ರಮದ ಮೇಲೆ ಕಾರ್ಮೋಡ ಕವಿಯುವಂತೆ ಮಾಡಿದೆ. ಬಹುತೇಕ ಸುಗ್ಗಿ ಉತ್ಸವಗಳು ಗ್ರಾಮಸ್ಥರ ಕಾಣಿಕೆ ಮತ್ತು ದಾನಿಗಳ ದೇಣಿಗೆಯಿಂದ ನಡೆಯುತ್ತವೆ. ಹೊರ ಭಾಗ ದಿಂದಲೂ ನೆಂಟರಿಷ್ಟರು, ಪರಿಚಿತ ಸ್ನೇಹಿತರು ಹಬ್ಬಕ್ಕೆ ಆಗಮಿಸುವು ದರಿಂದ ಇಡೀ ಗ್ರಾಮದಲ್ಲಿ ಸಂಭ್ರಮವಿರುತ್ತದೆ. ದೇವಾಲಯ ದಲ್ಲಿ ಭಕ್ತಾದಿಗಳಿಗೆ ದೇವರ ಪ್ರಸಾದದೊಂದಿಗೆ ಅನ್ನದಾನವನ್ನೂ ಮಾಡಿಕೊಂಡು ಬರುತ್ತಿದ್ದೇವೆ. ಆದರೆ ಈ ಬಾರಿ ಚುನಾವಣೆ ಕಾರಣದಿಂದ ಅನ್ನದಾನಕ್ಕೆ ಅವಕಾಶ ವಿಲ್ಲದಿರುವುದು ಆತಂಕಕ್ಕೆ ಎಡೆಮಾಡಿದೆ ಎಂದು ಕೂತಿನಾಡು ಶ್ರೀ ಸಬ್ಬಮ್ಮ ದೇವರ ಸಮಿತಿ ಅಧ್ಯಕ್ಷ ಕೆ.ಬಿ. ಜಗದೀಶ್ ಅಭಿಪ್ರಾಯಿಸಿದ್ದಾರೆ.
- ವಿಜಯ್ ಹಾನಗಲ್