ಮಡಿಕೇರಿ, ಏ. ೫: ನಗರದ ಜನರಿಗೆ ಕುಡಿಯುವ ನೀರು ಸರಬರಾಜು ಆಗುವ ಕೂಟುಹೊಳೆಯಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ನೀರಿನ ಶೇಖರಣೆ ಇಲ್ಲದೆ ಬತ್ತಿ ಹೋಗಿರುವುದರಿಂದ ನೀರಿನ ಹರಿವು ಹೆಚ್ಚಾಗಿ ನೀರು ಶೇಖರಣೆ ಆಗುವವರೆಗೆ ಎಲ್ಲಾ ೨೩ ವಾರ್ಡ್ಗಳಿಗೆ ಏಕಕಾಲದಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ಸಮಸ್ಯೆಯಾಗುತ್ತದೆ. ಇದನ್ನು ಸರಿದೂಗಿಸುವ ನಿಟ್ಟಿನಲ್ಲಿ ದಿನ ಬಿಟ್ಟು ದಿನ ಕುಡಿಯುವ ನೀರನ್ನು ಸರಬರಾಜು ಮಾಡಲಾಗುವುದು. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸ ಬೇಕಾಗಿ ಪೌರಾಯುಕ್ತ ವಿಜಯ ಕೋರಿದ್ದಾರೆ.
ಪೌರಾಯುಕ್ತರ ಭೇಟಿ
ಮಡಿಕೇರಿ ನಗರಕ್ಕೆ ಕುಡಿಯುವ ನೀರು ಸರಬರಾಜುವಿನಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಪೌರಾಯುಕ್ತ ವಿಜಯ ಅವರು ಇಂದು ಕೂಟುಹೊಳೆಗೆ ಭೇಟಿ ನೀಡಿ ಪರಿಶೀಲಿಸಿದರು. ನಗರಸಭೆಯ ಸಹಾಯಕ ಅಭಿಯಂತರರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಭಿಯಂತರರೊAದಿಗೆ ಕೂಟುಹೊಳೆ ಜಾಕ್ವೆಲ್ಗೆ ಹಾಗೂ ಕುಂಡಾಮೇಸ್ತಿç ಜಾಕ್ವೆಲ್ಗೆ ತೆರಳಿ ಪರಿಶೀಲನೆ ನಡೆಸಲಾಯಿತು.
ಮಳೆಯಾಗದ ಕಾರಣ ಕೂಟುಹೊಳೆಯಲ್ಲಿ ನೀರಿನ ಕೊರತೆ ಉಂಟಾದ ಕಾರಣ ಕುಂಡಾಮೇಸ್ತಿçಯಿAದ ನೀರೆತ್ತಿ ಕೂಟುಹೊಳೆ ಮೂಲಕ ನಗರಕ್ಕೆ ನೀರನ್ನು ಒದಗಿಸಲಾಗುತ್ತಿದೆ. ಇದೇ ರೀತಿ ಮಳೆ ಆಗದಿದ್ದಲ್ಲಿ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವುದರಿAದ ಇದನ್ನು ಸರಿದೂಗಿಸುವ ಹಿನ್ನೆಲೆಯಲ್ಲಿ ೨೩ ವಾರ್ಡ್ಗಳಲ್ಲಿ ದಿನ ಬಿಟ್ಟು ದಿನ ನೀರನ್ನು ಪೂರೈಸುವ ಪ್ರಮೇಯ ಬಂದಿದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ.