ಮಡಿಕೇರಿ, ಏ. ೬: ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ವತಿಯಿಂದ ವಾರಾಂತ್ಯದಲ್ಲಿ ವಿವಿಧ ಕಾರ್ಯಕ್ರಮ ಗಳನ್ನು ಆಯೋಜಿಸುವ ಸಂಬAಧ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ. ಸಿಇಓ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷÀ ಡಾ. ಎಸ್. ಆಕಾಶ್ ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಸ್ವೀಪ್ ಸಮಿತಿ ವತಿಯಿಂದ ಈಗಾಗಲೇ ಜಾಥ, ಫಲಪುಷ್ಪ ಪ್ರದರ್ಶನ ಸಂದರ್ಭದಲ್ಲಿ ಜಾಗೃತಿ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿದೆ. ಮೇ ೧೦ ರಂದು ಮತದಾನ ನಡೆಯಲಿದ್ದು, ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಮತದಾನ ಹೆಚ್ಚಳಕ್ಕೆ ಯಾವ ಯಾವ ರೀತಿಯ ಕಾರ್ಯ ಕ್ರಮಗಳನ್ನು ಆಯೋಜಿಸಬಹುದು ಎಂಬ ಬಗ್ಗೆ ಸಲಹೆ ನೀಡುವಂತೆ ಕೋರಿದರು.

ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶೇ.೭೪ ರಷ್ಟು ಮತದಾನವಾಗಿತ್ತು. ಈ ಬಾರಿ ಶೇ.೮೦ ಕ್ಕಿಂತ ಹೆಚ್ಚು ಮತದಾನ ಆಗಲು ಹೆಚ್ಚಿನ ಅರಿವು ಮೂಡಿಸಬೇಕಿದೆ. ಆ ನಿಟ್ಟಿನಲ್ಲಿ ಮತದಾನದ ಬಗ್ಗೆ ಅಗತ್ಯ ಜಾಗೃತಿ ಮೂಡಿಸುವಲ್ಲಿ ಸ್ವೀಪ್ ಸಮಿತಿ ಜೊತೆ ವಿವಿಧ ಸಂಘ ಸಂಸ್ಥೆಗಳು ಕೈಜೋಡಿ ಸುವಂತೆ ಮನವಿ ಮಾಡಿದರು.

ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಮಾತನಾಡಿ ಮತದಾನ ಹೆಚ್ಚಳ ಸಂಬAಧಿಸಿದAತೆ ಜಾಗೃತಿ ಮೂಡಿಸುವಲ್ಲಿ ಸಂತೆ ನಡೆಯುವ ದಿನಗಳಂದು ‘ಕರಪತ್ರ’ ಹಂಚುವ ಮೂಲಕ ಹಾಗೂ ಪ್ರವಾಸಿ ಸ್ಥಳಗಳಲ್ಲಿಯೂ ಹೆಚ್ಚಿನ ಅರಿವು ಮೂಡಿಸಬಹುದು ಎಂದು ಸಲಹೆ ಮಾಡಿದರು.

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಬೈಕ್ ರ‍್ಯಾಲಿ, ಸೈಕಲ್ ಜಾಥ, ಚಿತ್ರಕಲಾ ಶಿಬಿರ ಹಾಗೂ ಸಾಮಾಜಿಕ ಜಾಲತಾಣ ಮೂಲಕ ಹೆಚ್ಚಿನ ಪ್ರಚಾರ ಮಾಡಬಹುದು ಎಂದರು.

ಸ್ಕೌಟ್ಸ್ ಮತ್ತು ಗೈಡ್ಸ್ನ ಪ್ರಧಾನ ಆಯುಕ್ತ ಕೆ.ಟಿ. ಬೇಬಿಮ್ಯಾಥ್ಯೂ ಮಾತನಾಡಿ, ಮತದಾನ ಕಡಿಮೆಯಾಗಿರುವ ಮತಗಟ್ಟೆಗಳಲ್ಲಿ ಕಿರುನಾಟಕ ಪ್ರದರ್ಶನ ಮೂಲಕ ಹೆಚ್ಚಿನ ಅರಿವು ಮೂಡಿಸಬಹುದಾಗಿದೆ ಎಂದರು.

ರೋಟರಿ ಸಂಸ್ಥೆಯ ಜಿಲ್ಲಾ ಪಬ್ಲಿಕ್ ಇಮೇಜ್ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಅವರು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೊಬೈಲ್ ಟಾರ್ಚ್ ಮೂಲಕ ಜಾಗೃತಿ. ಹಾಗೆಯೇ ರಾಜಾಸೀಟ್‌ನಲ್ಲಿ ಚಿತ್ರಕಲಾ ಸ್ಪರ್ಧಾ ಕಾರ್ಯಕ್ರಮ ಏರ್ಪಡಿಸಬಹುದಾಗಿದೆ ಎಂದು ಸಲಹೆ ಮಾಡಿದರು.

ಸ್ತಿçÃಶಕ್ತಿ ಒಕ್ಕೂಟಗಳ ಅಧ್ಯಕ್ಷೆ ರೆಹನಾ ಸುಲ್ತಾನ್ ಮಾತನಾಡಿ, ಮತದಾನದಂದು ಕೂಲಿ ಕಾರ್ಮಿಕರು ಮತ ಹಕ್ಕು ಚಲಾಯಿಸುವಂತಾಗಲು ಹೆಚ್ಚಿನ ಅರಿವು ಮೂಡಿಸಬೇಕು ಎಂದು ಕೋರಿದರು.

ಖಾಸಗಿ ಬಸ್‌ಗಳಲ್ಲಿ ಮತದಾರರ ಜಾಗೃತಿ ಸಂಬAಧ ಹೊರತರುವ ಪೋಸ್ಟರ್‌ಗಳನ್ನು ಅಳವಡಿಸಲಾಗು ವುದು ಎಂದು ತಿಳಿಸಿದರು.

ಜಿ.ಪಂ. ಸಿಇಓ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಡಾ. ಎಸ್. ಆಕಾಶ್ ತಾ. ೧೫ ರಂದು ರಾಜಾಸೀಟ್‌ನಲ್ಲಿ ಚಿತ್ರಕಲಾ ಶಿಬಿರ, ತಾ. ೧೬ ರಂದು ಬೈಕ್ ರ‍್ಯಾಲಿ, ತಾ. ೩೦ ರಂದು ಟಾರ್ಚ್ ಡೇ ಆಯೋಜಿಸುವ ಬಗ್ಗೆ ಸಂಬAಧಪಟ್ಟವರು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಕೋರಿದರು.

ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಅಂಬೆಕಲ್ ನವೀನ್, ಚೇಂಬರ್ ಆಫ್ ಕಾಮರ್ಸ್ ಜಿಲ್ಲಾಧ್ಯಕ್ಷ ಎಂ.ಬಿ. ದೇವಯ್ಯ, ಕಾರ್ಯದರ್ಶಿ ಮೋಂತಿ ಗಣೇಶ್, ಜಿ.ಪಂ. ಮುಖ್ಯ ಯೋಜನಾಧಿಕಾರಿ ರಾಜ್‌ಗೋಪಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎನ್. ಮಂಜುನಾಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯಿ, ವಿಕಲಚೇತನರ ಇಲಾಖೆ ಅಧಿಕಾರಿ ವಿಮಲ, ರೋಟರಿ ಸಂಸ್ಥೆಯ ಕಾರ್ಯದರ್ಶಿ ಸೂರನ್ ನಾಣಯ್ಯ, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಜಿಲ್ಲಾ ಸಂಯೋಜಕ ಅಂಕಚಾರಿ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಎ.ಬಿ. ನವೀನ್ ಇತರರು ಇದ್ದರು.