ಮಡಿಕೇರಿ, ಏ. ೫: ದೇಶದ ೪ನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀಯನ್ನು ಜಿಲ್ಲೆಯ ಉಮ್ಮತ್ತಾಟ್ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರಿಗೆ ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಪ್ರದಾನ ಮಾಡಿದರು. ನವದೆಹಲಿಯ ರಾಷ್ಟçಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡವ ಸಾಂಪ್ರದಾಯಿಕ ನೃತ್ಯ ಉಮ್ಮತ್ತಾಟ್ ಕ್ಷೇತ್ರದಲ್ಲಿ ಮಾಡಿದ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪ್ರಶಸ್ತಿ ಸ್ವೀಕರಿಸಿದ ರಾಣಿ ಮಾಚಯ್ಯ ಅವರು ಎಲ್ಲರ ಗಮನ ಸೆಳೆದರು. ಈ ಸಂದರ್ಭ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಷಾ ಸೇರಿದಂತೆ ಇನ್ನಿತರ ಕೇಂದ್ರ ಸಚಿವರುಗಳು ಹಾಜರಿದ್ದರು.
ರಾಣಿ ಮಾಚಯ್ಯ ಅವರ ಪುತ್ರ ಮತ್ತು ಪುತ್ರಿ ಕೂಡ ಸಮಾರಂಭದಲ್ಲಿ ಭಾಗಿಯಾಗಿದ್ದರು.