ಸೋಮವಾರಪೇಟೆ, ಏ. ೬: ಹಿಂದಿನಿAದಲೂ ಸ್ಮಶಾನವನ್ನಾಗಿ ಬಳಸುತ್ತಿದ್ದ ಸರ್ಕಾರಿ ಪೈಸಾರಿ ಜಾಗವನ್ನು ಕೆಲವರು ಒತ್ತುವರಿ ಮಾಡಿ ಕೊಂಡಿದ್ದು, ಇದನ್ನು ತೆರವುಗೊಳಿಸಲು ತಾಲೂಕು ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಈವರೆಗೆ ಯಾವುದೇ ಪ್ರಯೋಜನ ವಾಗಿಲ್ಲ. ಈ ಹಿನ್ನೆಲೆ ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲಾಗುವುದು ಎಂದು ಹಾನಗಲ್ಲು ಶೆಟ್ಟಳ್ಳಿ ಗ್ರಾಮಸ್ಥರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಜೆ. ಸುರೇಶ್ ಅವರು, ಹಾನಗಲ್ಲುಶೆಟ್ಟಳ್ಳಿ ಗ್ರಾಮದ ಸರ್ವೆ ನಂಬರ್ ೭೩/೬೩ರಲ್ಲಿ ೬ ಎಕರೆ ಜಾಗವಿದ್ದು, ಈ ಹಿಂದಿನಿAದಲೂ ಗ್ರಾಮಸ್ಥರು ಸ್ಮಶಾನವನ್ನಾಗಿ ಬಳಕೆ ಮಾಡುತ್ತಿದ್ದರು. ಇತ್ತೀಚಿನ ವರ್ಷಗಳಲ್ಲಿ ಗ್ರಾಮದ ಈರ್ವರು ಒತ್ತುವರಿ ಮಾಡಿಕೊಂಡು ಕಾಫಿ ತೋಟ ಮಾಡಿದ್ದಾರೆ. ಸ್ಮಶಾನಕ್ಕೆ ಜಾಗ ಬಿಟ್ಟುಕೊಡುವಂತೆ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ ಎಂದು ದೂರಿದರು.
ಈ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಈರ್ವರು ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಸಿದ್ದು, ಗ್ರಾಮಸ್ಥರ ತಕರಾರು ಹಿನ್ನೆಲೆ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಹಾನಗಲ್ಲು ಶೆಟ್ಟಳ್ಳಿ ಗ್ರಾಮಸ್ಥರು ಸ್ಮಶಾನವನ್ನಾಗಿ ಬಳಕೆ ಮಾಡುತ್ತಿದ್ದರು. ಇತ್ತೀಚಿನ ವರ್ಷಗಳಲ್ಲಿ ಗ್ರಾಮದ ಈರ್ವರು ಒತ್ತುವರಿ ಮಾಡಿಕೊಂಡು ಕಾಫಿ ತೋಟ ಮಾಡಿದ್ದಾರೆ. ಸ್ಮಶಾನಕ್ಕೆ ಜಾಗ ಬಿಟ್ಟುಕೊಡುವಂತೆ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ ಎಂದು ದೂರಿದರು.
ಈ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಈರ್ವರು ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಸಿದ್ದು, ಗ್ರಾಮಸ್ಥರ ತಕರಾರು ಹಿನ್ನೆಲೆ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಹಾನಗಲ್ಲು ಶೆಟ್ಟಳ್ಳಿ ವೇಳೆ ಸಾವುಗಳು ಸಂಭವಿಸಿದರೆ ತಾಲೂಕು ಕಚೇರಿಯ ಮುಂಭಾಗಕ್ಕೆ ತಂದು ಪ್ರತಿಭಟನೆ ಮಾಡಬೇಕಾಗುತ್ತದೆ. ಸ್ಮಶಾನ ಜಾಗವನ್ನು ತೆರವು ಗೊಳಿಸದಿದ್ದರೆ ಚುನಾವಣೆಯನ್ನು ಬಹಿಷ್ಕಾರ ಮಾಡುತ್ತೇವೆ. ಬೂತ್ ಪೆಟ್ಟಿಗೆ ಗ್ರಾಮದೊಳಗೆ ಬರಲು ಆಸ್ಪದ ನೀಡುವುದಿಲ್ಲ ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಗ್ರಾಮಾಭಿವೃದ್ಧಿ ಸಮಿತಿ ಕಾರ್ಯದರ್ಶಿ ಎಂ.ಪಿ. ಪ್ರಧಾನ್, ಸಮಿತಿ ಸದಸ್ಯರಾದ ಎಲ್.ಎಂ. ಪ್ರಸನ್ನ, ಎಂ.ಪಿ. ಉಮೇಶ್ ಮಧುಸೂದನ್ ಉಪಸ್ಥಿತರಿದ್ದರು.