ದಿ. ಧ್ರುವನಾರಾಯಣ ಪತ್ನಿ ವೀಣಾ ವಿಧಿವಶ
ಮೈಸೂರು, ಏ. ೭: ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ತಾ. ೭ ರಂದು ನಿಧನರಾಗಿದ್ದಾರೆ. ಬ್ರೆöÊನ್ಟ್ಯೂಮರ್ನಿಂದ ಬಳಲುತ್ತಿದ್ದ ಅವರು ಸುಮಾರು ೧೦ ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಇತ್ತೀಚೆಗೆ, ಪತಿ ಧ್ರುವನಾರಾಯಣ ಅವರ ಅಕಾಲಿಕ ಸಾವಿನಿಂದಾಗಿ ನೊಂದಿದ್ದ ಪರಿಣಾಮ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಹಾಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಶುಕ್ರವಾರ ನಿಧನ ರಾಗಿದ್ದಾರೆ. ದರ್ಶನ್ ಸೇರಿದಂತೆ ಇಬ್ಬರು ಪುತ್ರರಿದ್ದಾರೆ. ವಿಜಯನಗರದ ಅವರ ಸ್ವಗೃಹದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಂಜೆ ಚಾಮರಾಜನಗರ ಜಿಲ್ಲೆಯ ಸ್ವಗ್ರಾಮ ಹೆಗ್ಗವಾಡಿಯಲ್ಲಿ ಅಂತ್ಯಕ್ರಿಯೆ ನೆರವೇರಿತು.
ಸಿಲಿಂಡರ್ ಸ್ಫೋಟ - ನಾಲ್ವರು ಸಜೀವ ದಹನ
ಡೆಹ್ರಾಡೂನ್, ಏ. ೭: ಉತ್ತರಾಖಂಡ ರಾಜಧಾನಿ ಡೆಹ್ರಾಡೂನ್ನಿಂದ ೧೫೫ ಕಿ.ಮೀ. ದೂರದಲ್ಲಿರುವ ತುನಿ ಸೇತುವೆ ಬಳಿಯ ಬಹುಮಹಡಿ ಮನೆಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಸಿಲಿಂಡರ್ ಸ್ಫೋಟದಿಂದ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಮನೆ ಸುಟ್ಟು ಕರಕಲಾಗಿದೆ ಮನೆಯಲ್ಲಿದ್ದ ಸಿಲಿಂಡರ್ಗಳು ಒಂದರ ಹಿಂದೆ ಒಂದರAತೆ ಸ್ಫೋಟಗೊಂಡಿವೆ. ಸಂಜೆ ಬಾಡಿಗೆದಾರರಲ್ಲಿ ಒಬ್ಬರಾದ ವಿಕ್ಕಿ ಅವರ ಪತ್ನಿ ಕುಸುಮ್ ಅವರು ಅಡುಗೆ ಕೋಣೆಯಲ್ಲಿ ಎಲ್ಪಿಜಿ ಸಿಲಿಂಡರ್ ಬದಲಾಯಿಸುತ್ತಿದ್ದಾಗ ಏಕಾಏಕಿ ಸಿಲಿಂಡರ್ಗೆ ಬೆಂಕಿ ಹೊತ್ತಿಕೊಂಡಿದೆ. ಕುಸುಮ್ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು, ಆದರೆ ಬೆಂಕಿ ಇಡೀ ಮನೆಗೆ ಆವರಿಸಿದೆ. ಮನೆಯೊಳಗಿದ್ದ ನಾಲ್ವರು ಮಕ್ಕಳು ಬೆಂಕಿಗೆ ಆಹುತಿಯಾಗಿದ್ದಾರೆ. ಮೃತರನ್ನು ತುನಿಯ ಜಕ್ತಾ ನಿವಾಸಿ ತ್ರಿಲೋಕ್ ಎಂಬವರ ಪುತ್ರಿ ಗುಂಜನ್ (೧೦), ಹಿಮಾಚಲ ಪ್ರದೇಶದ ಬಿಕ್ತದ್ನ ಜಯಲಾಲ್ ಎಂಬುವವರ ಪುತ್ರಿ ರಿದ್ಧಿ (೧೦), ವಿಕ್ಕಿ ಚೌಹಾಣ್ ಅವರ ಮಕ್ಕಳಾದ ಆದಿರಾ ಅಲಿಯಾಸ್ ಮಿಶ್ತಿ (೬) ಮತ್ತು ಸೇಜಲ್ (೩) ಎಂದು ಗುರುತಿಸಲಾಗಿದೆ.
ರೈಲಿಗೆ ಬೆಂಕಿ ಇಟ್ಟ ಪ್ರಕರಣ : ಆರೋಪಿಗೆ ನ್ಯಾಯಾಂಗ ಬಂಧನ
ತಿರುವನAತಪುರ, ಏ. ೭: ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿ ಶಾರುಖ್ ಸೈಫಿಗೆ ೧೪ ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶಾರುಖ್ ಎಂದು ಗುರುತಿಸಲಾದ ಶಂಕಿತ ವ್ಯಕ್ತಿಯನ್ನು ಕೇರಳದ ೧,೦೦೦ ಕಿಲೋಮೀಟರ್ ಉತ್ತರಕ್ಕೆ ಮಹಾರಾಷ್ಟçದ ರತ್ನಾಗಿರಿ ಜಿಲ್ಲೆಯಲ್ಲಿ ಬಂಧಿಸಲಾಗಿತ್ತು. ಆರೋಪಿ ಸೈಫಿ (೨೪) ಗಾಯಗೊಂಡಿರುವುದರ ಜೊತೆಗೆ ಆತನ ಬಿಲಿರುಬಿನ್ ಮಟ್ಟಗಳು ಹೆಚ್ಚಾಗಿದ್ದರಿಂದ ಗುರುವಾರ ಮಹಾರಾಷ್ಟçದ ರತ್ನಗಿರಿಯಿಂದ ಕಸ್ಟಡಿಗೆ ತೆಗೆದುಕೊಂಡ ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಸ್ಥಳೀಯ ಮ್ಯಾಜಿಸ್ಟೆçÃಟ್ ಅವರು ಆಸ್ಪತ್ರೆಗೆ ಆಗಮಿಸಿ ಮತ್ತು ಸೈಫಿಗೆ ನ್ಯಾಯಾಂಗ ಬಂಧನ ವಿಧಿಸಿದರು. ಭಾನುವಾರ ರಾತ್ರಿ ೯:೩೦ರ ಸುಮಾರಿಗೆ ರೈಲಿನ ಡಿ೧ ಕಂಪಾರ್ಟ್ಮೆAಟ್ನಲ್ಲಿ ಪ್ರಯಾಣಿಕರೊಬ್ಬರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಇದು ಕಾಲ್ತುಳಿತಕ್ಕೆ ಕಾರಣವಾಗಿತ್ತು. ಬೆಂಕಿಯ ಕೆನ್ನಾಲಿಗೆ ಇತರೆ ಕಂಪಾರ್ಟ್ಮೆAಟ್ಗಳಿಗೂ ಹಬ್ಬಿತ್ತು. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರಿಗೆ ಸುಟ್ಟ ಗಾಯಗಳಾಗಿದ್ದವು.
ಇಂದು ಬಿಜೆಪಿ ಸಂಸದೀಯ ಮಂಡಳಿ ಸಭೆ
ಬೆಂಗಳೂರು, ಏ. ೭: ೨ ದಿನಗಳ ನಡೆಯುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಕ್ರವಾರ ಸಂಜೆ ರಾಷ್ಟç ರಾಜಧಾನಿ ದೆಹಲಿಗೆ ತೆರಳಿದ್ದಾರೆ. ಮೇ ೧೦ ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯ ರಾಜ್ಯ ಚುನಾವಣಾ ಸಮಿತಿಯು ಪ್ರತಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಶಾರ್ಟ್ಲಿಸ್ಟ್ ಮಾಡಿದ್ದು, ತಾ. ೮ ರಂದು (ಇಂದು) ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಸಂಸದೀಯ ಮಂಡಳಿ ಸಭೆ ದೆಹಲಿಯಲ್ಲಿ ನಡೆಯಲಿದೆ. ೨ ದಿನಗಳ ಕಾಲ ನಡೆಯಲಿರುವ ಸಭೆಯಲ್ಲಿ ಚರ್ಚೆ ಪಟ್ಟಿಯ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ
ಯಾದಗಿರಿ, ಏ. ೭: ಜಿಲ್ಲೆಯ ಸುರಪುರ ಕ್ಷೇತ್ರದ ಕೊಡೇಕಲ್ ಗ್ರಾಮದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಘರ್ಷಣೆ ನಡೆದಿದ್ದರಿಂದ ೨ ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಆದೇಶ ನೀಡಿದ್ದಾರೆ. ಸುರಪುರದ ಹಾಲಿ ಶಾಸಕ ರಾಜೂಗೌಡ ಹಾಗೂ ಮಾಜಿ ಶಾಸಕ, ಕಾಂಗ್ರೆಸ್ನ ರಾಜಾ ವೆಂಕಟಪ್ಪ ನಾಯಕರ ನಡುವಿನ ಬಣಗಳ ನಡುವೆ ನಡೆದ ಕಲ್ಲು ತೂರಾಟದಲ್ಲಿ ಹದಿನೈದಕ್ಕೂ ಹೆಚ್ಚು ವಾಹನಗಳು ಜಖಂಗೊAಡಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ಇಡೀ ಸುರಪುರ ವಿಧಾನಸಭಾ ಕ್ಷೇತ್ರದಾದ್ಯಂತ ಖಾಕಿ ಸರ್ಪಗಾವಲಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ ಮೂರು ಕೆಎಸ್ಆರ್ಪಿ ತುಕಡಿ, ೧ ಪ್ಯಾರಾ ಮಿಲಿಟರಿ ಪಡೆ ತುಕಡಿ ಸೇರಿದಂತೆ ಬಿಗಿ ಭದ್ರತೆ ಒದಗಿಸಲಾಗಿದೆ. ಕಲಬುರಗಿ ಈಶಾನ್ಯ ವಲಯ ಐಜಿಪಿ ಅನುಪಮ ಅಗರವಾಲ್ ಹಾಗೂ ಯಾದಗಿರಿ ಎಸ್ಪಿ ಡಾ. ಸಿಬಿ ವೇದಮೂರ್ತಿ ಗ್ರಾಮದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಯತ್ನಿಸಿದ್ದಾರೆ.
ಪರಾರಿಯಾಗಿದ್ದ ನಮೀಬಿಯನ್ ಚೀತಾ ಪತ್ತೆ
ಶಿಯೋಪುರ್, ಏ. ೭: ಇತ್ತೀಚೆಗೆ ಅಭಯಾರಣ್ಯದಿಂದ ಹಾದಿ ತಪ್ಪಿ ಗ್ರಾಮಗಳಿಗೆ ನುಗ್ಗಿದ್ದ ನಮೀಬಿಯನ್ ಚೀತಾ ಮತ್ತೆ ಅಭಯಾರಣ್ಯಕ್ಕೆ ಕರೆತರುವಲ್ಲಿ ಮಧ್ಯ ಪ್ರದೇಶ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಈ ಹಿಂದೆ ಭಾರತಕ್ಕೆ ಬಂದಿದ್ದ ನಮೀಬಿಯಾದ ಗಂಡು ಚಿರತೆಗಳಲ್ಲಿ ಒಂದಾದ ‘ಒಬಾನ್' ಕುನೋ ರಾಷ್ಟಿçÃಯ ಉದ್ಯಾನವನದ ಗಡಿಯಿಂದ ತಪ್ಪಿಸಿಕೊಂಡು ಹೋಗಿ ಸ್ಥಳೀಯ ಗ್ರಾಮಗಳಿಗೆ ನುಗ್ಗಿತ್ತು. ಐದು ದಿನಗಳ ಹಿಂದೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಸಮೀಪದ ಹಳ್ಳಿಯೊಂದರಲ್ಲಿ ಈ ಚೀತಾ ಕಾಣಿಸಿಕೊಂಡಿತ್ತು. ಇದೀಗ ಅಧಿಕಾರಿಗಳ ಹರಸಾಹಸದ ಬಳಿಕ ಕುನೋ ರಾಷ್ಟಿçÃಯ ಉದ್ಯಾನವನಕ್ಕೆ ಹಾದಿ ತಪ್ಪಿದ ಚೀತಾವನ್ನು ಮರಳಿ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮೀಬಿಯಾದ ಚೀತಾವನ್ನು ಗುರುವಾರ ಸಂಜೆ ಶಿವಪುರಿ ಜಿಲ್ಲೆಯ ಅರಣ್ಯದಿಂದ ರಕ್ಷಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಕುನೋ ವನ್ಯಜೀವಿ ವಿಭಾಗದ ಜಿಲ್ಲಾ ಅರಣ್ಯ ಅಧಿಕಾರಿ (ಡಿಎಫ್ಒ) ಪ್ರಕಾಶ್ ಕುಮಾರ್ ವರ್ಮಾ ಅವರು, ‘ಶಿವಪುರಿ ಜಿಲ್ಲೆಯ ಗಡಿಯಲ್ಲಿರುವ ಬೈರಾದ್ ಗ್ರಾಮದ ಸಮೀಪವಿರುವ ಅರಣ್ಯ ಪ್ರದೇಶದಿಂದ ಸಂಜೆ ೪-೫ ರ ಸುಮಾರಿಗೆ ಓಬನ್ ಸಿಕ್ಕಿಬಿದ್ದಿದ್ದು, ಕುನೋ ರಾಷ್ಟಿçÃಯ ಉದ್ಯಾನವನದ ಪಾಲ್ಪುರ ಅರಣ್ಯಕ್ಕೆ ಬಿಡಲಾಗಿದೆ ಎಂದು ತಿಳಿಸಿದ್ದಾರೆ.
ಕೊರೊನಾ ಹೆಚ್ಚಳ : ಎಚ್ಚರಿಕೆ ವಹಿಸುವಂತೆ ಕೇಂದ್ರ ಸೂಚನೆ
ನವದೆಹಲಿ, ಏ. ೭: ದೇಶದಲ್ಲಿ ಮತ್ತೆ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಪರಿಶೀಲನಾ ಸಭೆ ನಡೆಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ರಾಜ್ಯ ಸರ್ಕಾರಗಳು ಕೋವಿಡ್ ಸೂಕ್ತ ನಿರ್ವಹಣೆಗೆ ಸಿದ್ಧರಾಗಬೇಕು ಮತ್ತು ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ. ವರ್ಚುವಲ್ ಮೂಲಕ ರಾಜ್ಯ ಆರೋಗ್ಯ ಸಚಿವರು ಮತ್ತು ಪ್ರಧಾನ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳೊಂದಿಗಿನ ಸಭೆ ನಡೆಸಿದ ಮಾಂಡವಿಯಾ ಅವರು, ಐಎಲ್ಐ ಮತ್ತು ತೀವ್ರತರವಾದ ಉಸಿರಾಟದ ಸೋಂಕಿನ (ಎಸ್ಎಆರ್ಐ) ಪ್ರಕರಣಗಳ ಮೇಲ್ವಿಚಾರಣೆ ಮಾಡುವ ಮೂಲಕ ತುರ್ತು ಹಾಟ್ಸ್ಪಾಟ್ಗಳನ್ನು ಗುರುತಿಸಬೇಕು. ಕೋವಿಡ್ ಪರೀಕ್ಷೆ ಮತ್ತು ಲಸಿಕೆ ನೀಡುವುದನ್ನು ಹೆಚ್ಚಿಸುವಂತೆ ಹಾಗೂ ಆಸ್ಪತ್ರೆಯ ಮೂಲಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸೂಚಿಸಿದ್ದಾರೆ.