ಸುಂಟಿಕೊಪ್ಪ, ಏ. ೭: ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರುತಿ ನಗರದ ಆಂಜನೇಯ ದೇವಸ್ಥಾನದ ೧೧ನೇ ವರ್ಷದ ವಾರ್ಷಿಕೋತ್ಸವ ಅದ್ಧೂರಿಯಾಗಿ ನಡೆಯಿತು. ನವಗ್ರಹ ಪೂಜೆ, ಗಣಪತಿ ಹೋಮ, ಆಂಜನೇಯ ದೇವರಿಗೆ ಅಭಿಷೇಕ ಮಹಾ ಮಂಗಳಾರತಿ ನಂತರ ನೆರೆದಿದ್ದ ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು.
ಕೊಡಗರಹಳ್ಳಿ, ಸುಂಟಿಕೊಪ್ಪ, ಎಮ್ಮೆಗುಂಡಿ, ಹೊಸಕೋಟೆ ಸುತ್ತ ಮುತ್ತಲ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಗ್ರಾಮದ ಜನತೆಯು ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡಿತು. ಪೂಜಾ ಕೈಂಕರ್ಯವನ್ನು ಅರ್ಚಕರಾದ ಮಂಜುನಾಥ್ ಶರ್ಮ, ನರಸಿಂಹ ಭಟ್, ರಾಧಾ ಕೃಷ್ಣ ಭಟ್ ನೆರವೇರಿಸಿದರು.