ಮಡಿಕೇರಿ, ಏ. ೬: ಕೊಡವ ನ್ಯಾಷನಲ್ ಕೌನ್ಸಿಲ್‌ನ ಬಹುಕಾಲದ ಬೇಡಿಕೆಯಾಗಿರುವ ಕೊಡವರಿಗೆ ಭೂ ರಾಜಕೀಯ ಸ್ವಾಯತ್ತತೆ ಹಾಗೂ ಜನಾಂಗಕ್ಕೆ ದೊರಕಬೇಕಾಗಿರುವ ಬುಡಕಟ್ಟು ಸ್ಥಾನಮಾನದ ಕುರಿತ ಬೇಡಿಕೆಗಳನ್ನು ಪೂರೈಸಲು ಆಯೋಗ ರಚಿಸುವಂತೆ ಮಾಜಿ ಕೇಂದ್ರ ಕಾನೂನು ಸಚಿವ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಡಾ.ಸುಬ್ರಮಣ್ಯನ್ ಸ್ವಾಮಿ ಅವರು ಕರ್ನಾಟಕ ಉಚ್ಛ ನ್ಯಾಯಾಲ ಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿ.ಐ.ಎಲ್.) ಸಲ್ಲಿಸಿದ್ದಾರೆ.

ಕೊಡವ ಜನಾಂಗಕ್ಕೆ ಸಿಗಬೇಕಾದ ಹಲವು ಬೇಡಿಕೆಗಳನ್ನು ಈಡೇರಿಸಲು ಹಲವು ವರ್ಷಗಳಿಂದ ಸಕ್ರಿಯವಾಗಿ ಮಡಿಕೇರಿ, ಏ. ೬: ಕೊಡವ ನ್ಯಾಷನಲ್ ಕೌನ್ಸಿಲ್‌ನ ಬಹುಕಾಲದ ಬೇಡಿಕೆಯಾಗಿರುವ ಕೊಡವರಿಗೆ ಭೂ ರಾಜಕೀಯ ಸ್ವಾಯತ್ತತೆ ಹಾಗೂ ಜನಾಂಗಕ್ಕೆ ದೊರಕಬೇಕಾಗಿರುವ ಬುಡಕಟ್ಟು ಸ್ಥಾನಮಾನದ ಕುರಿತ ಬೇಡಿಕೆಗಳನ್ನು ಪೂರೈಸಲು ಆಯೋಗ ರಚಿಸುವಂತೆ ಮಾಜಿ ಕೇಂದ್ರ ಕಾನೂನು ಸಚಿವ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಡಾ.ಸುಬ್ರಮಣ್ಯನ್ ಸ್ವಾಮಿ ಅವರು ಕರ್ನಾಟಕ ಉಚ್ಛ ನ್ಯಾಯಾಲ ಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿ.ಐ.ಎಲ್.) ಸಲ್ಲಿಸಿದ್ದಾರೆ.

ಕೊಡವ ಜನಾಂಗಕ್ಕೆ ಸಿಗಬೇಕಾದ ಹಲವು ಬೇಡಿಕೆಗಳನ್ನು ಈಡೇರಿಸಲು ಹಲವು ವರ್ಷಗಳಿಂದ ಸಕ್ರಿಯವಾಗಿ ನೀಡಿದ್ದರು. ಈ ಸಂಬAಧ ಸರ್ವೋಚ್ಛ ನ್ಯಾಯಾಲ ಯದ ಮೊರೆ ಹೋಗುವುದಾಗಿಯೂ ಹೇಳಿದ್ದರು. ಇದೀಗ ವಕೀಲ ಸತ್ಯ ಸಬರ್ವಾಲ್ ಅವರ ಮುಖಾಂತರ ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಕೊಡವರಿಗೆ ದೊರಕಬೇಕಾದ ಭೂ ರಾಜಕೀಯ ಸ್ವಾಯತ್ತತೆ ಹಾಗೂ ಬುಡಕಟ್ಟು ಸ್ಥಾನಮಾನಕ್ಕಾಗಿ ಆಯೋಗ ರಚಿಸಿ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸುವಂತೆ ಮನವಿ ಮಾಡಿದ್ದಾರೆ. ತಾ.೧೭ ರಂದು ನ್ಯಾಯಮೂರ್ತಿ ಪ್ರಸನ್ನ ಬಿ ವರಾಲೆ ಮುಂದೆ ಈ ಸಂಬAಧ ವಿಚಾರಣೆ ನಡೆಸಲಿದ್ದಾರೆ.

ಇಂದು ಬೆಂಗಳೂರಿನಲ್ಲಿ ಅರ್ಜಿ ಸಲ್ಲಿಸುವ ಸಂದರ್ಭ ಸಿ.ಎನ್.ಸಿ ಅಧ್ಯಕ್ಷ ಎನ್.ಯು ನಾಚಪ್ಪ ಸೇರಿದಂತೆ ಇತರ ಪ್ರಮುಖರು ಹಾಜರಿದ್ದರು.