ಕುಶಾಲನಗರ, ಏ. ೮: ಭಾಗಮಂಡಲದ ನದಿ ಪಾತ್ರದಲ್ಲಿ ನದಿ ನೀರು ಕಲುಷಿತಗೊಳ್ಳುವುದನ್ನು ತಪ್ಪಿಸಲು ತಾ. ೨೦ರ ಒಳಗಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಉಚ್ಚ ನ್ಯಾಯಾಲಯ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಆದೇಶ ನೀಡಿದೆ.

ಕಾವೇರಿ ಮತ್ತು ಕನ್ನಿಕೆ ಸಂಗಮ ಕುಶಾಲನಗರ, ಏ. ೮: ಭಾಗಮಂಡಲದ ನದಿ ಪಾತ್ರದಲ್ಲಿ ನದಿ ನೀರು ಕಲುಷಿತಗೊಳ್ಳುವುದನ್ನು ತಪ್ಪಿಸಲು ತಾ. ೨೦ರ ಒಳಗಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಉಚ್ಚ ನ್ಯಾಯಾಲಯ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಆದೇಶ ನೀಡಿದೆ.

ಕಾವೇರಿ ಮತ್ತು ಕನ್ನಿಕೆ ಸಂಗಮ ಆದರೆ ನಂತರದ ಪ್ರಕೃತಿ ವಿಕೋಪ ಸಂದರ್ಭ ನದಿಯಲ್ಲಿ ಮತ್ತೆ ಹೂಳು ತುಂಬಿದೆ. ಗುಣಮಟ್ಟದ ಕಾಮಗಾರಿ ನಡೆಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಆದೇಶ ನೀಡುವಂತೆ ಸ್ಥಳೀಯ ನಿವಾಸಿ ಎಸ್ ಈ ಜಯಂತ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಧಾವೆ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾದ ಪಿ.ಬಿ. ವರಾಳೆ ನೇತೃತ್ವದ ವಿಭಾಗಿಯ ಪೀಠ ಆದೇಶ ನೀಡಿದೆ. ಮೂಲತಃ ಭಾಗಮಂಡಲದ ನಿವಾಸಿ ಆಗಿರುವ ಹೈಕೋರ್ಟ್ ಹಿರಿಯ ವಕೀಲರಾದ ಮೊಟ್ಟನ ರವಿಕುಮಾರ್ ಅವರು ವಾದ ಮಂಡಿಸಿದ್ದಾರೆ.

ಈ ನಡುವೆ ಕಳೆದ ಕೆಲವು ವರ್ಷಗಳಿಂದ ಭಾಗಮಂಡಲದಲ್ಲಿ ಮೇಲ್ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ನದಿ ಸಂಪೂರ್ಣ ಕಲುಷಿತಗೊಳ್ಳುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು . ಕಾವೇರಿ ನೀರಾವರಿ ನಿಗಮದ ಪರ ವಕೀಲರು ೧೫ ದಿವಸದ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ ಹೈಕೋರ್ಟ್ ವಕೀಲರಾದ ಮೊಟ್ಟನ ರವಿಕುಮಾರ್ ತಿಳಿಸಿದ್ದಾರೆ.

- ಚಂದ್ರಮೋಹನ್