ಸೋಮವಾರಪೇಟೆ, ಏ .೭ : ಸಮೀಪದ ಹಾನಗಲ್ಲು ಶೆಟ್ಟಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಜಾಗ ಕಾಯ್ದಿರಿಸುವ ವಿಚಾರಕ್ಕೆ ಸಂಬAಧಿಸಿದAತೆ ಕಂದಾಯ ಇಲಾಖೆ ಒತ್ತುವರಿದಾರರ ಪರವಾಗಿದ್ದು, ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿರುವ ಹಾನಗಲ್ಲು ಶೆಟ್ಟಳ್ಳಿ ಗ್ರಾಮಕ್ಕೆ ತಾಲೂಕು ತಹಶೀಲ್ದಾರ್ ಎಸ್.ಎನ್. ನರಗುಂದ್ ಅವರು ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು.
ಕಂದಾಯ ಪರಿವೀಕ್ಷಕ ಪ್ರಹ್ಲಾದ್ ಅವರೊಂದಿಗೆ ಸ್ಥಳಕ್ಕೆ ತೆರಳಿದ ತಹಶೀಲ್ದಾರ್ ನರಗುಂದ್ ಅವರು, ಸ್ಮಶಾನದ ಬೇಡಿಕೆಯ ಬಗ್ಗೆ ಸ್ಥಳದಲ್ಲಿದ್ದ ಕೆಲ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು.
ಹಾನಗಲ್ಲು ಶೆಟ್ಟಳ್ಳಿಯಲ್ಲಿ ಈಗಿರುವ ಸರ್ಕಾರಿ ಪೈಸಾರಿ ಜಾಗವನ್ನು ಈರ್ವರು ಒತ್ತುವರಿ ಮಾಡಿಕೊಂಡು ಕಾಫಿ ತೋಟ ನಿರ್ಮಿಸಿದ್ದಾರೆ. ಇದರೊಂದಿಗೆ ಅಕ್ರಮ-ಸಕ್ರಮದಡಿ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬAಧಿತ ಕಡತ ಕಂದಾಯ ಇಲಾಖೆಯಲ್ಲಿದೆ. ಒಂದು ವೇಳೆ ಸ್ಮಶಾನಕ್ಕೆ ಜಾಗ ಬೇಕೇ ಬೇಕು ಎಂದಾದಲ್ಲಿ ಗ್ರಾಮದಲ್ಲಿರುವ ಇತರೆ ಸರ್ಕಾರಿ ಖಾಲಿ ಪೈಸಾರಿ ಜಾಗವನ್ನು ಗುರುತಿಸಿ ಸ್ಮಶಾನಕ್ಕೆ ಮೀಸಲಿರಿಸಲಾಗುವುದು ಎಂದು ತಿಳಿಸಿದರು. ಇದರೊಂದಿಗೆ ಗ್ರಾಮದಲ್ಲಿ ಸದರಿ ವಿಚಾರಕ್ಕೆ ಸಂಬAಧಿಸಿದAತೆ ಯಾವುದೇ ಗಲಾಟೆ, ಘರ್ಷಣೆಗೆ ಆಸ್ಪದ ನೀಡಬಾರದು ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗದAತೆ ನಡೆದುಕೊಳ್ಳಬೇಕು. ಮತದಾನದಲ್ಲಿ ಭಾಗಿಯಾಗಬೇಕು ಎಂದರು.
ಈ ಸಂದರ್ಭ ಗ್ರಾಮಾಧ್ಯಕ್ಷ ಎ.ಜೆ. ಸುರೇಶ್, ಕಾರ್ಯದರ್ಶಿ ಪ್ರಧಾನ್, ಅಪ್ಪಚ್ಚು, ದರ್ಶನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿಗೆ ವರದಿ: ಈ ಬಗ್ಗೆ ತಹಶೀಲ್ದಾರ್ ಅವರು ಜಿಲ್ಲಾಧಿಕಾರಿಗಳ ಕಚೇರಿಗೆ ವರದಿ ಸಲ್ಲಿಸಿದ್ದು, ಹಾನಗಲ್ಲುಶೆಟ್ಟಳ್ಳಿ ಗ್ರಾಮವು ಹಾನಗಲ್ಲು ಮುಖ್ಯ ಕಂದಾಯ ಗ್ರಾಮದ ಉಪ ಗ್ರಾಮವಾಗಿದೆ. ಸದರಿ ಮುಖ್ಯ ಗ್ರಾಮಕ್ಕೆ ಸಂಬAಧಿಸಿದAತೆ ಈಗಾಗಲೆ ಸರ್ಕಾರಿ ಸ.ನಂ ೩೧/ಟಟಎರಲ್ಲಿ ೧.೧೦ ಎಕರೆ ಜಾಗವನ್ನು ಸಾರ್ವಜನಿಕ ಸ್ಮಶಾನದ ಉದ್ದೇಶಕ್ಕಾಗಿ ಕಾಯ್ದಿರಿಸಲಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಿನ ಜಾಗವನ್ನೇ ಕಾಯ್ದಿರಿಸಲಾಗಿದೆ. ಮುಖ್ಯ ಗ್ರಾಮದ ಉಪ ಗ್ರಾಮಕ್ಕೆ ಸ್ಮಶಾನ ಕಾಯ್ದಿರಿಸುವ ಅವಶ್ಯಕತೆ ಕಂಡುಬರುತ್ತಿಲ್ಲ. ಒಂದುವೇಳೆ ಅವಶ್ಯವಿದ್ದಲ್ಲಿ ಮುಂದಿನ ದಿನಗಳಲ್ಲಿ ಒತ್ತುವರಿ ಮುಕ್ತ ಜಾಗ ಗುರುತಿಸಿ ನೀಡಲಾಗುವುದು ಎಂದು ಗ್ರಾಮಸ್ಥರಿಗೆ ತಿಳುವಳಿಕೆ ನೀಡಿ ಮತದಾನ ಮಾಡುವಂತೆ ಗ್ರಾಮಸ್ಥರನ್ನು ಮನವೊಲಿಸಲಾಗಿದೆ. ಇದಕ್ಕೆ ಗ್ರಾಮಸ್ಥರು ಒಪ್ಪಿರುತ್ತಾರೆ ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ.