ಹೆಬ್ಬಾಲೆ, ಏ. ೭: ಶಿಕ್ಷಣ ಇಲಾಖೆಯಲ್ಲಿ ೨೮ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಶಕುಂತಲಾ ಅಮ್ಮಣಿ ಅವರನ್ನು ಹೆಬ್ಬಾಲೆ ಕ್ಲಷ್ಟರ್ ವತಿಯಿಂದ ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಹೆಚ್.ಎಂ. ವೆಂಕಟೇಶ್ ವಹಿಸಿದ್ದರು. ವೇದಿಕೆಯಲ್ಲಿ ನೆಲ್ಲೂರು ಶಾಲೆಯ ಶಿಕ್ಷಕ ಚಂದ್ರಶೇಖರ್ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಆದರ್ಶ ಪ್ರೌಢಶಾಲಾ ದೈಹಿಕ ಶಿಕ್ಷಕ ಬೋಜೆ ಗೌಡ ೭ನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಸೋಮಯ್ಯ. ಶಿರಂಗಾಲ ಪ್ರೌಢಶಾಲಾ ಮುಖ್ಯ ಶಿಕ್ಷಕ ಲೋಕೇಶ್ ಕೊಡಗು ಜಿಲ್ಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಕರುಂಬಯ್ಯ ಸುರೇಖಾಬಾಯಿ ಉಪಸ್ಥಿತರಿದ್ದರು.

ಶಿಕ್ಷಕಿ ಪುಷ್ಪಾವತಿ ಸ್ವಾಗತಿಸಿದರು. ಹಳೆಕೋಟೆ ಶಾಲೆಯ ಮುಖ್ಯ ಶಿಕ್ಷಕ ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.