*ಸಿದ್ದಾಪುರ, ಏ. ೮ : ಅಭ್ಯತ್ ಮಂಗಲ ಶ್ರೀ ವೈದ್ಯನಾಥೇಶ್ವರ ದೇವಾಲಯದ ವಾರ್ಷಿಕೋತ್ಸವ ಹಾಗೂ ವಾರ್ಷಿಕ ನೇಮೋತ್ಸವಕ್ಕೆ ಚಾಲನೆ ದೊರೆತಿದೆ.

ಇಂದು ಬೆಳಿಗ್ಗೆ ಶ್ರೀ ವೈದ್ಯನಾಥ ಸ್ವಾಮಿಯ ಭಂಡಾರ ಹೇರಿಕೆ, ರಾತ್ರಿ ಕೋಟೆದ ಬಬ್ಬುಸ್ವಾಮಿ ಮತ್ತು ತಂಗಡಿ ತನ್ನಿಮಾನಿಗ ದೈವಗಳ ನೇಮೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಭಕ್ತರು ಪೂಜಾ ವಿಧಿ ವಿಧಾನಗಳಲ್ಲಿ ಪಾಲ್ಗೊಂಡರು.

ಇAದು ಗುಳಿಗ ನೇಮೋತ್ಸವ

ತಾ.೯ ರಂದು (ಇಂದು) ರಾತ್ರಿ ಶ್ರೀ ಚಾಮುಂಡೇಶ್ವರಿ ಕತ್ತಲಕಾನದ ಗುಳಿಗ ಮತ್ತು ಜಾಗದ ಗುಳಿಗ ಹಾಗೂ ಪಂಜುರ್ಲಿ ಗುಳಿಗ ನೇಮೋತ್ಸವ, ತಾ.೧೦ ರಂದು ಬೆಳಿಗ್ಗೆ ರಾಹುಗುಳಿಗ ನೇಮೋತ್ಸವ ನಡೆಯಲಿದೆ.