ಸೋಮವಾರಪೇಟೆ, ಏ. ೯: ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ಸೋಮವಾರಪೇಟೆ, ಏ. ೯: ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ಸೋಮವಾರಪೇಟೆ, ಏ. ೯: ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ಅವರ ಮನವೊಲಿಸಲು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಹಿತ ಮುಖಂಡರು ಕಸರತ್ತು ನಡೆಸುತ್ತಿದ್ದಾರೆ.
ಇದರ ಭಾಗವಾಗಿ ಪಟ್ಟಣದಲ್ಲಿರುವ ಹರಪಳ್ಳಿ ರವೀಂದ್ರ ಅವರ ಮನೆಗೆ ಭೇಟಿ ನೀಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ರಾಜ್ಯ ವಕ್ತಾರ ಟಿ.ಪಿ. ರಮೇಶ್, ಮುಖಂಡರಾದ ಹಂಸ ಅವರುಗಳು ರವೀಂದ್ರ ಅವರೊಂದಿಗೆ ಮಾತುಕತೆ ನಡೆಸಿ, ಸಮಾಧಾನಪಡಿಸಲು ಯತ್ನಿಸಿದರು.
ಆದರೆ ನಾಯಕರ ಮನವೊಲಿಸುವ ಮಾತಿಗೆ ಸಹಮತಿ ಸೂಚಿಸದ ರವೀಂದ್ರ ಅವರು, ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಅಗತ್ಯ ತಯಾರಿ ನಡೆಸುತ್ತಿರುವುದಾಗಿ ತಿಳಿಸಿದರು.