ಮಡಿಕೇರಿ, ಏ. ೯: ಕೊಡಗು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿಯ ಕಾರ್ಯದರ್ಶಿ ಯಾಗಿ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾ.ಪಂ. ಸದಸ್ಯ ಬಿ.ಕೆ. ಗೋಪಾಲ್ ಪೂಜಾರಿ ನೇಮಕ ಗೊಂಡಿದ್ದಾರೆ.

ಹಿAದುಳಿದ ವರ್ಗದ ಜಿಲ್ಲಾಧ್ಯಕ್ಷ ಬಾನಂಡ ಪ್ರಥ್ಯುರವರ ಶಿಫಾರಸ್ಸಿನ ಮೇರೆಗೆ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪರವರು ಬಿ.ಕೆ. ಗೋಪಾಲ್ ಪೂಜಾರಿಯವರನ್ನು ಕೊಡಗು ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.