ಸಿದ್ದಾಪುರ, ಏ. ೧೦ : ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರ ಭದ್ರತಾ ಹಿತದೃಷ್ಟಿಯಿಂದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಹಾಗೂ ಪೊಲೀಸರ ಸಹಯೋಗದೊಂದಿಗೆ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಥಸಂಚಲನ ನಡೆಸಲಾಯಿತು.
ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ರಾಜ್ ಚಾಲನೆ ನೀಡಿದರು. ಪೊಲೀಸರ ಮೇಲೆ ಗ್ರಾಮಸ್ಥರು ಹೂ ಚೆಲ್ಲಿ ಬರಮಾಡಿಕೊಂಡಿದ್ದು ವಿಶೇಷವಾಗಿತ್ತು.
ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಹುದಿಕೇರಿ, ಸಿದ್ದಾಪುರ, ಪಾಲಿಬೆಟ್ಟ ಮತ್ತು ಚೆÀನ್ನಯ್ಯನಕೋಟೆ ವ್ಯಾಪ್ತಿಯಲ್ಲಿ ಸಂಚಲನ ನಡೆಸಿ ಮತದಾರರಿಗೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಡಿವೈಎಸ್ ಪಿ ಜಗದೀಶ್, ವೃತ್ತ ನಿರೀಕ್ಷಕ ಶಿವಶಂಕರ್, ಸಿದ್ದಾಪುರ ಠಾಣಾಧಿಕಾರಿ ದಿಲೀಪ್ ಹಾಜರಿದ್ದರು.