ಮುಳ್ಳೂರು, ಏ. ೧೦: ಸಮಿಪದ ಅಂಕನಹಳ್ಳಿ ಶ್ರೀ ತಪೋಕ್ಷೇತ್ರ ಮನೆಹಳ್ಳಿ ಮಠದ ಶ್ರೀ ಗುರುಸಿದ್ಧೇಶ್ವರಸ್ವಾಮಿ ವಾರ್ಷಿಕ ಜಾತ್ರೋತ್ಸವ ಮತ್ತು ಮಹಾರಥೋತ್ಸವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿತು.
ವಾರ್ಷಿಕ ಜಾತ್ರೋತ್ಸವದ ಕಾರ್ಯಕ್ರಮದ ಪ್ರಯುಕ್ತ ಶ್ರೀ ಸ್ವಾಮಿಯವರ ದೊಡ್ಡ ಚಂದ್ರಮAಡಲೋತ್ಸವ ಸೇವೆ ನೆರವೇರಿಸಿದ ಬಳಿಕ ಶ್ರೀ ಸ್ವಾಮಿಯವರ ಪ್ರಾಕಾರ ಪಲ್ಲಕ್ಕಿ ಉತ್ಸವವನ್ನು ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಮಠದಲ್ಲಿ ಹಣತೆಯ ಬೆಳಕಿನಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರೀ ಗುರುಸಿದ್ಧೇಶ್ವರಸ್ವಾಮಿ ಮಹಾರಥೋತ್ಸವವನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.
ರಥೋತ್ಸವದ ಬಳಿಕ ಶ್ರೀ ವೃಷಭಲಿಂಗೇಶ್ವರಸ್ವಾಮಿ ಸನ್ನಿಧಾನದಲ್ಲಿ ಮಹಾಮಂಗಳಾರತಿ ಮತ್ತು ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಶ್ರೀಕ್ಷೇತ್ರ ಮಠಾಧೀಶರಾದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಜಾತ್ರೋತ್ಸವ ಮತ್ತು ಮಹಾರಥೋತ್ಸವ ಕಾರ್ಯಕ್ರಮ ನಡೆಯಿತು.