ಮಡಿಕೇರಿ, ಏ. ೯: ನಗರದ ಕೊಡಗು ವಿದ್ಯಾಲಯದಲ್ಲಿ ಸಮಾಗಮ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ರಾಘವ. ಬಿ. ಜ್ಯೋತಿ ಬೆಳಗುವುದರ ಮೂಲಕ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕ್ರೀಡಾ ಅಧ್ಯಕ್ಷ ರಘು ಮಾದಪ್ಪ, ಶಾಲಾ ಆಡಳಿತ ಸದಸ್ಯರುಗಳಾದ ನಿಯತಾ ದೇವಯ್ಯ, ಗುರುದತ್, ಪ್ರಾಂಶುಪಾಲೆ ಸುಮಿತ್ರಾ ಕೆ.ಎಸ್, ಆಡಳಿತ ವ್ಯವಸ್ಥಾಪಕ ರವಿ ಪಿ. ಪೋಷಕರು, ವಿವಿಧ ಶಾಲೆಯ ವಿದ್ಯಾರ್ಥಿಗಳು ನೆರೆದಿದ್ದರು.