ಕುಶಾಲನಗರ, ಏ. ೯: ಕುಶಾಲನಗರ ಗಡಿ ಭಾಗದಲ್ಲಿ ವಾಹನಗಳ ತಪಾಸಣೆ ಮಾಡುವ ಸಂದರ್ಭ ಚುನಾವಣಾ ಅಧಿಕಾರಿಗಳ ತಂಡ ದಾಖಲೆ ಇಲ್ಲದ ರೂ.೧.೧೪ ಲಕ್ಷ ಪತ್ತೆ ಹಚ್ಚಿ ವಶಪಡಿಸಿಕೊಂಡಿದೆ.

ಮೈಸೂರು ಕಡೆಯಿಂದ ಕುಶಾಲನಗರ ಕಡೆಗೆ ಬೈಕ್‌ನಲ್ಲಿ ವ್ಯಕ್ತಿಯೊಬ್ಬ ಬರುತ್ತಿದ್ದ ಸಂದರ್ಭ ತಂಡದ ಅಧಿಕಾರಿ ಸಿಬ್ಬಂದಿಗಳು ಪರಿಶೀಲಿಸಿ ದಾಖಲೆ ರಹಿತ ಹಣವನ್ನು ವಶಕ್ಕೆ ತೆಗೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕುಶಾಲನಗರ ಮತ್ತು ಮೈಸೂರು ಜಿಲ್ಲೆಯ ಕೊಪ್ಪ ತಪಾಸಣಾ ಕೇಂದ್ರಗಳಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಕುಶಾಲನಗರದ ಬೈಚನಹಳ್ಳಿಯಿಂದ ಮೈಸೂರು ಜಿಲ್ಲೆಯ ಬೈಲುಕುಪ್ಪೆವರೆಗೂ ಭಾನುವಾರ ಬೆಳಗ್ಗೆಯಿಂದ ಸಂಜೆ ತನಕ ಹೆದ್ದಾರಿಯಲ್ಲಿ ಉದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡು ಬಂತು. ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಡಿವೈಎಸ್ಪಿ ಗಂಗಾಧರಪ್ಪ ಮತ್ತು ಅಧಿಕಾರಿಗಳ ನೇತೃತ್ವದಲ್ಲಿ ಯಾವುದೇ ಸಮಸ್ಯೆಗಳು ಉಂಟಾಗದAತೆ ಸಿಬ್ಬಂದಿಗಳನ್ನು ನಿಯೋಜಿಸಿದ್ದು ಕಂಡು ಬಂತು.