ಚೆಟ್ಟಳ್ಳಿ, ಏ. ೧೦: ವಿದ್ಯಾರ್ಥಿಗಳು ಸಾರ್ವಜನಿಕ ಸಭೆ ಮತ್ತು ವೇದಿಕೆಗಳಲ್ಲಿ ಮುಕ್ತವಾಗಿ ಮಾತನಾಡುವ ನಾಯಕತ್ವದ ಗುಣವನ್ನು ಬೆಳೆಸಿ ಕೊಳ್ಳಬೇಕು ಎಂದು ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ದಯಾನಂದ ಕೆ.ಸಿ. ಸಲಹೆಯಿತ್ತರು.

ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಮತ್ತು ಉದ್ಯೋಗ ಕೋಶ ಸಮಿತಿ ಹಾಗೂ ಜೆಸಿಐ ಪೊನ್ನಂಪೇಟೆ ನಿಸರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಣಾಮಕಾರಿ ಭಾಷಣ ಕಲೆ ಮತ್ತು ಸಂಸತ್ತಿನ ನಡವಳಿ ಕುರಿತ ಒಂದು ದಿನದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ದಿಸೆಯಲ್ಲಿಯೇ ನಾಯಕತ್ವದ ಗುಣ ಮತ್ತು ಪ್ರತಿಭಟಿಸುವ ಮನೋಭಾವವನ್ನು ವಿದ್ಯಾರ್ಥಿಗಳು ರೂಡಿಸಿಕೊಳ್ಳ ಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಉದ್ಘಾಟನೆ ಯನ್ನು ನೆರವೇರಿಸಿದ ಜೆಸಿಐ ಪೊನ್ನಂಪೇಟೆ ನಿಸರ್ಗದ ಅಧ್ಯಕ್ಷ ನೀತ್ ಅಯ್ಯಪ್ಪ ಮಾತನಾಡಿ, ಸಮಾಜದ ಕಲ್ಯಾಣಕ್ಕಾಗಿ ನಮ್ಮ ಸಂಸ್ಥೆಯು ಅನೇಕ ಕಾರ್ಯಕ್ರಮಗಳನ್ನು ಆಯೋಜಿ ಸುತ್ತಿದ್ದು, ಸಮಾಜ ಸೇವೆಯೇ ನಮ್ಮ ಗುರಿಯಾಗಿದೆ ಎಂದರು.

ವೇದಿಕೆಯಲ್ಲಿ ಜೆಸಿಐನ ಕಾರ್ಯದರ್ಶಿ ಶರತ್ ಸೋಮಣ್ಣ ಮತ್ತು ಕಾಲೇಜಿನ ಉದ್ಯೋಗ ಕೋಶ ಸಮಿತಿಯ ಸಂಚಾಲಕ ರಘುರಾಜ್ ಆರ್. ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ ಜೆಸಿಐ ಇಂಡಿಯಾದ ಪ್ರಧಾನ ತರಬೇತುದಾರ ಸಂದೀಪ್ ವಿಜಯನ್ ಪರಿಣಾಮಕಾರಿ ಭಾಷಣ ಕಲೆ ಮತ್ತು ಸಂವಹನ ಕೌಶಲ್ಯ ಕುರಿತು ತರಬೇತಿ ನೀಡಿದರು. ಮತ್ತೋರ್ವ ತರಬೇತುದಾರ ರಾಜೀವ್ ಅವರು ನಾಯಕತ್ವದ ಗುಣ ಮತ್ತು ಸಂಸತ್ತಿನ ಸಭಾ ನಡಾವಳಿ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.