ಮಡಿಕೇರಿ, ಏ. ೯: ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಪಕ್ಷದ ಅಭ್ಯರ್ಥಿ ಅಮೀನ್ ಮೊಹ್ಸಿನ್‌ಗೆ ಚುನಾವಣಾಧಿಕಾರಿ ನೋಟೀಸ್ ನೀಡಿದ್ದಾರೆ.
ಫೇಸ್‌ಬುಕ್ ಖಾತೆಯಲ್ಲಿ ರಾಜಕೀಯ ಪ್ರೇರಿತ ಹೇಳಿಕೆಯನ್ನು ಅಮೀನ್ ಹಂಚಿಕೊAಡ ಹಿನ್ನೆಲೆ ಚುನಾವಣಾಧಿಕಾರಿ ಡಾ. ಯತೀಶ್ ಉಲ್ಲಾಳ್ ನೋಟೀಸ್ ಜಾರಿಗೊಳಿಸಿ ೨೪ ಗಂಟೆಯೊಳಗೆ ಸೂಕ್ತ ಉತ್ತರ ನೀಡುವಂತೆ ಸೂಚಿಸಿದ್ದಾರೆ. ಉತ್ತರ ನೀಡದಿದ್ದಲ್ಲಿ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.