ಮಡಿಕೇರಿ, ಏ. ೧೧: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿರುವ ವಿವಿಧ ಪಕ್ಷ ಘೋಷಿಸಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸಜ್ಜಾಗಿದ್ದಾರೆ.
ತಾ. ೧೩ ರಂದು ಎಸ್‌ಡಿಪಿಐ ಪಕ್ಷದ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಅಮೀನ್ ಮೊಹಿಸಿನ್, ತಾ. ೧೭ ರಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಮಂಥರ್ ಗೌಡ ಮಡಿಕೇರಿಯಲ್ಲಿ, ತಾ. ೧೮ ರಂದು ವೀರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ವೀರಾಜಪೇಟೆಯಲ್ಲಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ.
ಈ ವೇಳೆ ಎಲ್ಲರೂ ಅಪಾರ ಸಂಖ್ಯೆಯ ಬೆಂಬಲಿಗರೊಡನೆ ತೆರಳಿ ಚುನಾವಣೆಯ ಮೊದಲ ಪ್ರಕ್ರಿಯೆಯನ್ನು ರಂಗೇರಿಸಲಿದ್ದಾರೆ.