ನಾಪೋಕ್ಲು, ಏ. ೧೧: ಸಮೀಪದ ಪಾಲೂರು ಗ್ರಾಮದ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೋತ್ಸವವು ತಾ. ೧೩ ರಿಂದ ೧೯ ರವರೆಗೆ ನಡೆಯಲಿದೆ. ತಾ ೧೩ರಂದು ಮಹಾಲಿಂಗೇಶ್ವರ ದೇವರ ಮೂಲ ಸ್ಥಾನದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ವಾರ್ಷಿಕ ಹಬ್ಬಕ್ಕೆ ಚಾಲನೆ ನೀಡಲಾಗುವುದು. ತಾ ೧೪ ರಂದು ಗಣ ಹೋಮ ಮತ್ತು ಕೊಡಿಮರ ಏರಿಸುವುದು, ಬೆಳಿಗ್ಗೆ ಮಧ್ಯಾಹ್ನ ಮತ್ತು ರಾತ್ರಿ ಉತ್ಸವಬಲಿ ನಡೆಯಲಿದೆ. ತಾ. ೧೬ ರಂದು ಉತ್ಸವ ಬಲಿ ಮತ್ತು ರಾತ್ರಿ ದೀಪಾರಾಧನೆ ನಡೆಯಲಿದೆ ತಾ. ೧೭ರಂದು ಹಗಲು ನೃತ್ಯಬಲಿ ನಡೆದು ಸಂಜೆ ದೀಪಾರಾಧನೆ ನಡೆಯಲಿದೆ. ೧೮ ರಂದು ಪಟ್ಟಣಿಹಬ್ಬ ಜರುಗಲಿದೆ. ಬೆಳಗ್ಗೆ ತುಲಾಭಾರ, ಮಧ್ಯಾಹ್ನ ಎತ್ತು ಪೋರಾಟ, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಅಪರಾಹ್ನ ಜೋಡಿ ದೇವರ ನೃತ್ಯೋತ್ಸವ ನಡೆಯಲಿದೆ.