ಕುಶಾಲನಗರ, ಏ. ೧೧: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಪಕ್ಷದ ಕಾರ್ಯಕರ್ತರ, ಮುಖಂಡರ ಸಭೆ ನಡೆಯಿತು.
ಬ್ಲಾಕ್ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಕಾರ್ಯಕರ್ತರು ಸಜ್ಜಾಗುವಂತೆ ಮುಖಂಡರು ಕರೆ ನೀಡಿದರು.
ಮಡಿಕೇರಿ ಕ್ಷೇತ್ರ ಅಭ್ಯರ್ಥಿ ಡಾ. ಮಂಥರ್ ಗೌಡ ಮಾತನಾಡಿ, ಪಕ್ಷದ ಮುಖಂಡರು, ಕಾರ್ಯಕರ್ತರ ಶ್ರಮದಿಂದ ಇಡೀ ಕ್ಷೇತ್ರದ ಪರಿಚಯವಾಗಿದೆ. ಬ್ಲಾಕ್ ಸೇರಿದಂತೆ ಕ್ಷೇತ್ರದ ಸಮಸ್ಯೆಗಳನ್ನು ಕೂಡ ಅರಿತುಕೊಳ್ಳಲಾಗಿದೆ. ಎಲ್ಲರ ಸಹಕಾರದಿಂದ ತನಗೆ ಈ ಬಾರಿ ಅವಕಾಶ ದೊರೆತಿದ್ದು ಹಿರಿಯರ ಮಾರ್ಗದರ್ಶನ, ಕಿರಿಯರ ಸಹಕಾರದೊಂದಿಗೆ ಎಲ್ಲರನ್ನೂ ಒಗ್ಗೂಡಿಸಿ ಪಕ್ಷದ ಬೆಳವಣಿಗೆಗೆ ಶ್ರಮಿಸಲಾಗುವುದು. ತನ್ನ ಗೆಲುವಿಗೆ ಎಲ್ಲರ ಸಹಕಾರ ಅಗತ್ಯ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಬ್ಲಾಕ್ ಅಧ್ಯಕ್ಷ ವಿ.ಪಿ. ಶಶಿಧರ್ ಮತ್ತಿತರ ಪ್ರಮುಖರು ಮಾತನಾಡಿದರು. ಪಕ್ಷದ ಮುಖಂಡರು, ಕಾರ್ಯಕರ್ತರು ತಮ್ಮ ಅಭಿಪ್ರಾಯ, ಸಲಹೆ, ಸೂಚನೆಗಳನ್ನು ನೀಡಿದರು.
ಈ ಸಂದರ್ಭ ಪ್ರಮುಖರಾದ ಮಂಜುನಾಥ್ ಗುಂಡುರಾವ್, ಪ್ರಮೋದ್ ಮುತ್ತಪ್ಪ, ಲೋಕೇಶ್, ಸುರಯ್ಯ ಅಬ್ರಾರ್, ಸುನಿತಾ, ಮಿಥುನ್ ಹಾನಗಲ್, ಟಿ.ಪಿ. ಹಮೀದ್, ಗೋವಿಂದರಾಜ್ ದಾಸ್, ಲತೀಫ್, ಅಜಿತ್, ಶಿವಶಂಕರ್, ಕಿರಣ್, ವಿ.ಜೆ. ನವೀನ್, ಚಂದ್ರಶೇಖರ್, ಫಿಲೋಮಿನಾ, ಶಾಜಿ, ಎಂ.ಕೆ. ದಿನೇಶ್, ಕಲೀಮುಲ್ಲಾ ಪಕ್ಷದ ವಿವಿಧ ಘಟಕಗಳ ಪ್ರಮುಖರು ಪಾಲ್ಗೊಂಡಿದ್ದರು.