ಕುಶಾಲನಗರ, ಏ. ೧೧: ಮಂಗಳವಾರ ಕುಶಾಲನಗರ ವಾಹನಗಳ ತಪಾಸಣಾ ಕೇಂದ್ರದಲ್ಲಿ ಚುನಾವಣಾ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದ ವೇಳೆ ರೂ. ೧.೭ ಲಕ್ಷ ಹಣ ಪತ್ತೆಯಾಗಿದ್ದು, ವಶಪಡಿಸಿ ಕೊಳ್ಳಲಾಗಿದೆ. ಕೊಪ್ಪ ಕಡೆಯಿಂದ ಕುಶಾಲನಗರ ಕಡೆಗೆ ಬೈಕ್ ಮೂಲಕ ಸಾಗುವ ಸಂದರ್ಭ ಹಣ ಸಾಗಿಸುತ್ತಿದ್ದು ಈ ಸಂದರ್ಭದಲ್ಲಿ ಅಧಿಕಾರಿಗಳು ಪರಿಶೀಲನೆ ಮಾಡಿ ಕ್ರಮ ಕೈಗೊಂಡರು.

ಕಳೆದ ಎರಡು ವಾರಗಳ ಕಾಲ ನಿರಂತರವಾಗಿ ಕುಶಾಲನಗರ ಗಡಿಭಾಗದಲ್ಲಿ ಮೂರು ಪಾಳಿಗಳಲ್ಲಿ ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡ ವಾಹನಗಳ ತಪಾಸಣೆಯಲ್ಲಿ ತೊಡಗಿಸಿ ಕೊಂಡಿದ್ದಾರೆ. ಇದುವರೆಗೆ ಯಾವುದೇ ಅಕ್ರಮ ಹಣ ಸಾಗಾಟ ಪ್ರಕರಣ ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.

ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಕರ್ತವ್ಯ ನಿಮಿತ್ತ ಕುಶಾಲನಗರ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಕುಶಾಲನಗರ ಗಡಿಭಾಗದ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದರು.