ಚುನಾವಣಾ ರಾಜಕೀಯದಿಂದ ಈಶ್ವರಪ್ಪ ನಿವೃತ್ತಿ

ಶಿವಮೊಗ್ಗ, ಏ. ೧೧: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ನಿವೃತ್ತರಾಗಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ ಎಂದಿದ್ದಾರೆ. ಕಳೆದ ೪೦ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ-ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ.

ಯುವಕರಿಗಾಗಿ ಹಿರಿಯರು ಜಾಗ ಖಾಲಿ ಮಾಡಬೇಕು:ಸಿಎಂ ಬೊಮ್ಮಾಯಿ

ನವದೆಹಲಿ, ಏ. ೧೧: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ಸಿ. ನಾಗೇಶ್, ಆರ್. ಅಶೋಕ್, ಎಸ್, ಸುರೇಶ್ ಕುಮಾರ್ ಸೇರಿದಂತೆ ೨೨ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಮಾತುಗಳು ಕೇಳಿಬರುತ್ತಿವೆ. ಈ ನಿಟ್ಟಿನಲ್ಲಿ ಪಕ್ಷದ ರಾಷ್ಟಿçÃಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಕೆ.ಎಸ್. ಈಶ್ವರಪ್ಪ, ತಾವು ಚುನಾವಣಾ ರಾಜಕೀಯದಿಂದ ನಿವೃತ್ತಿಗೊಳ್ಳುವುದಾಗಿ ಹೇಳಿದ್ದಾರೆ. ಇನ್ನೂಂದೆಡೆ ಚುನಾವಣೆಯಿಂದ ಹಿಂದೆ ಸರಿಯುವಂತೆ ಹೈಕಮಾಂಡ್ ಹೇಳಿದ್ದರೂ ಚುನಾವಣೆಗೆ ಸ್ಪರ್ಧಿಸುವುದಾಗಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಕುರಿತು ರಾಷ್ಟç ರಾಜಧಾನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಹಿಂದೆಯೂ ಚುನಾವಣೆಯಲ್ಲಿ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಈಶ್ವರಪ್ಪ ಹೇಳಿದ್ದರು.ಆದರೆ ಅವರ ಅನುಭವ ಬೇಕಿರುವುದರಿಂದ ಸ್ಪರ್ಧಿಸುವಂತೆ ಹೇಳಿದ್ದೆವು, ಈಗ ಈ ಬಗ್ಗೆ ಎಲ್ಲರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಂಡಿದ್ದಾರೆ ಎಂದರು. ಹೈಕಮಾಂಡ್ ನಿರ್ಧಾರ ಒಂದು ನಿರ್ದಿಷ್ಟ ವಯಸ್ಸಿನ ನಂತರ ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆದು ಯುವಕರಿಗೆ ಅವಕಾಶ ಮಾಡಿಕೊಡಬೇಕು ಎಂಬ ಸಂದೇಶ ನೀಡಿದೆ. ಇದು ಕೇಂದ್ರ ಹಾಗೂ ರಾಜ್ಯಗಳಲ್ಲಿರುವ ಬಿಜೆಪಿ ಸಂಸ್ಕೃತಿ ಎಂದು ತಿಳಿಸಿದರು.

ಟಿಕೆಟ್ ವಿಚಾರದಲ್ಲಿ ದೇವೇಗೌಡರ ಮಾತೇ ಅಂತಿಮ

ಹೊಳೆನರಸೀಪುರ, ಏ. ೧೧: ಭವಾನಿ ರೇವಣ್ಣ ಹಾಸನ ಕ್ಷೇತ್ರದಿಂದ ಸ್ಪರ್ಧಿಸಿದರೆ ಸೋಲುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಹಾಗೂ ಸಹೋದರ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಯನ್ನು ತಳ್ಳಿ ಹಾಕಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು, ಟಿಕೆಟ್ ವಿಚಾರದಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಮಾತು ಅಂತಿಮ ಎಂದು ಹೇಳಿದ್ದಾರೆ. ಹೊಳೆನರಸೀಪುರ ತಾಲೂಕಿನ ಆನೆಕೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ರಾಜಕೀಯದಲ್ಲಿ ಆರು ದಶಕಗಳ ಅನುಭವವಿರುವ ಗೌಡರು ಉಮೇದುವಾರಿಕೆ ನಿರ್ಧರಿಸಲಿದ್ದಾರೆ. ಈ ವಿಚಾರದಲ್ಲಿ ಹೆಚ್.ಡಿ. ದೇವೇಗೌಡರ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ ಎಂದು ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿಗೆ ದೊಡ್ಡ ಹೊಡೆತ ನೀಡಿದ ಹೆಚ್.ಡಿ. ರೇವಣ್ಣ ಅವರು ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಟಿಕೆಟ್‌ಗಳನ್ನು ಹೆಚ್.ಡಿ. ದೇವೇಗೌಡರು ನಿರ್ಧರಿಸುತ್ತಾರೆ ಎಂದು ಹೇಳಿದರು. ಹೆಚ್.ಡಿ.ಕೆ. ಪ್ರಕಾರ ಪಕ್ಷದ ಕಾರ್ಯಕರ್ತ ಎಂದರೆ ಯಾರು ಎಂದು ಹೆಚ್.ಡಿ ರೇವಣ್ಣ ಪ್ರಶ್ನಿಸಿದ್ದಾರೆ. ದೇವೇಗೌಡರು ಮೂರು ತಿಂಗಳ ಹಿಂದೆಯೇ ಅಭ್ಯರ್ಥಿಯನ್ನು ನಿರ್ಧರಿಸಿದ್ದಾರೆ ಎಂದರು.

ಕಣದಿAದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ; ಶೆಟ್ಟರ್

ಹುಬ್ಬಳ್ಳಿ, ಏ. ೧೧: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಚುನಾವಣೆಯಿಂದ ಹಿಂದೆ ಸರಿಯುವಂತೆ ಹೈಕಮಾಂಡ್ ಸೂಚನೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಗದೀಶ್ ಶೆಟ್ಟರ್ ಅವರು ನಾನು ಚುನಾವಣೆಯಲ್ಲಿ ಸ್ಪರ್ಧಿಸಿಯೇ ತೀರುತ್ತೇನೆ ಎಂದು ಹೇಳಿದ್ದಾರೆ. ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂಬುದನ್ನು ಒಪ್ಪಿಕೊಂಡ ಶೆಟ್ಟರ್, ಹೊಸ ಮುಖಗಳಿಗೆ ಅವಕಾಶ ನೀಡಬೇಕು. ಈ ಹಿನ್ನೆಲೆಯಲ್ಲಿ ಸರಿಯುವಂತೆ ಸೂಚಿಸಿದ್ದಾರೆ ಎಂದರು. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಷ್ಟು ದಿನದಿಂದ ಟಿಕೆಟ್ ನೀಡುವ ಭರವಸೆ ನೀಡಿದ್ದ ಪಕ್ಷ ಇದೀಗ ದಿಢೀರ್ ಅಂತ ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಸೂಚಿಸಿದೆ. ಇದನ್ನು ಎರಡು-ಮೂರು ತಿಂಗಳ ಹಿಂದೆ ನನಗೆ ಹೇಳಬೇಕಿತ್ತು. ಆದರೆ, ಇವತ್ತು ಹೇಳಿದ್ದಾರೆ. ಇದು ನನಗೆ ಬಹಳ ಬೇಸರ ತರಿಸಿದೆ ಎಂದರು. ೩೦ ವರ್ಷ ಪಕ್ಷ ಕಟ್ಟಿದವರಿಗೆ ಹೀಗೆ ಮಾಡಿದ್ದು ಸರಿಯಲ್ಲ. ಹಿರಿಯ ನಾಯಕರಿಗೆ ಗೌರವ ಕೊಡುವ ಕೆಲಸ ಆಗಬೇಕಿದೆ ಎಂದು ಹೇಳಿದರು. ರಾಜಕೀಯ ಜೀವನದಲ್ಲಿ ನನ್ನ ಮೇಲೆ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲ. ಪಕ್ಷ ನಿಷ್ಠನಾಗಿ ಕೆಲಸ ಮಾಡಿದ್ದೇನೆ. ನನ್ನ ಕ್ಷೇತ್ರದ ಜನ ನನ್ನನ್ನು ಅಶೀರ್ವಾದಿಸುತ್ತಾರೆ. ಈ ಬಾರಿಯ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು.

ಡ್ರೋನ್‌ಗಳ ಮೂಲಕ ಅಕ್ರಮ ಶಸ್ತಾçಸ್ತç ಪೂರೈಕೆ

ನವದೆಹಲಿ, ಏ. ೧೧: ಡ್ರೋನ್‌ಗಳನ್ನು ಬಳಸಿ ಗಡಿಯಾಚೆಯಿಂದ ಅಕ್ರಮ ಶಸ್ತಾçಸ್ತçಗಳು ಪೂರೈಕೆಯಾಗುತ್ತಿದ್ದು ಇಂತಹ ಗಂಭೀರ ಸವಾಲು ಎದುರಿಸುತ್ತಿದೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ) ಸಭೆಯಲ್ಲಿ ಭಾರತ ಹೇಳಿದೆ. ಶಸ್ತಾçಸ್ತç ಮತ್ತು ಮಿಲಿಟರಿ ಉಪಕರಣಗಳ ರಫ್ತು ನಿಯಂತ್ರಿಸುವ ಒಪ್ಪಂದಗಳ ಉಲ್ಲಂಘನೆಯಿAದ ಉಂಟಾಗುವ ಅಪಾಯಗಳು ಎಂಬ ವಿಷಯದ ಕುರಿತು ಮುಕ್ತ ಚರ್ಚೆಯಲ್ಲಿ ಮಾತನಾಡಿದ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್, ಡ್ರೋನ್‌ಗಳನ್ನು ಬಳಸಿ ಗಡಿಯಾಚೆಯಿಂದ ಅಕ್ರಮ ಶಸ್ತಾçಸ್ತçಗಳು ಪೂರೈಕೆಯಾಗುತ್ತಿದ್ದು ಇದು ನೆರೆಯ ದೇಶದ ಅಧಿಕಾರಿಗಳ ಸಹಾಯವಿಲ್ಲದೆ ಅಸಾಧ್ಯ ಎಂದು ಪಾಕಿಸ್ತಾನವನ್ನು ಉಲ್ಲೇಖಿಸಿ ಹೇಳಿದರು. ‘ಅಂರ‍್ರಾಷ್ಟಿçÃಯ ಕಾನೂನನ್ನು ಉಲ್ಲಂಘಿಸಿ ಶಸ್ತಾçಸ್ತç ಮತ್ತು ಮಿಲಿಟರಿ ಉಪಕರಣಗಳ ರಫ್ತು ಭೌಗೋಳಿಕ ರಾಜಕೀಯ ಉದ್ವಿಗ್ನತೆಯನ್ನು ಹೆಚ್ಚಿಸುತ್ತದೆ. ಇದನ್ನು ನಿರ್ಲಕ್ಷಿಸಲಾಗುವುದಿಲ್ಲ' ಎಂದು ಅವರು ಹೇಳಿದರು.