ಸಿದ್ದಾಪುರ, ಏ. ೧೨: ಅಂಗಡಿಯೊಳಗೆ ಅಕ್ರಮವಾಗಿ ಮದ್ಯದ ಪ್ಯಾಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸಿದ್ದಾಪುರ ಪೊಲೀಸರು ಬಂಧಿಸಿ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಚೆನ್ನಯ್ಯನಕೋಟೆ ಗ್ರಾಮದ ನಿವಾಸಿ ಪ್ರಭು (೪೨) ಯಾವುದೇ ಅನುಮತಿ ಇಲ್ಲದೇ ಅಕ್ರಮವಾಗಿ ತನ್ನ ಅಂಗಡಿಯಲ್ಲಿ ಮದ್ಯದ ಪ್ಯಾಕೆಟ್‌ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಸುಳಿವಿನ ಮೇರೆಗೆ ಸಿದ್ದಾಪುರ ಪೊಲೀಸರು ದಾಳಿ ನಡೆಸಿ ಪ್ರಭುವನ್ನು ಬಂಧಿಸಿ, ಮಾರಾಟಕ್ಕೆ ಇಟ್ಟಿದ್ದ ೪೮ ಪ್ಯಾಕೆಟ್ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.