ಸೋಮವಾರಪೇಟೆ, ಏ.೧೨ : ವಿಧಾನ ಸಭಾ ಚುನಾವಣೆಯ ಕಣದಿಂದ ರಂಗೇರುತ್ತಿದ್ದು, ದಿನಕ್ಕೊಂದು ಬೆಳವಣಿ ಗೆಗಳು ನಡೆಯುತ್ತಿವೆ. ಟಿಕೆಟ್ ಹಂಚಿಕೆಯಲ್ಲಿ ಒಂದು ಹೆಜ್ಜೆ ಮುಂದಿಟ್ಟಿರುವ ಕಾಂಗ್ರೆಸ್ ಪಕ್ಷ ಕೊಡಗಿನ ಎರಡೂ ವಿಧಾನ ಸಭಾ ಚುನಾವಣೆಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ. ವೀರಾಜಪೇಟೆ ಕ್ಷೇತ್ರದಲ್ಲಿ ಟಿಕೇಟ್ ಹಂಚಿಕೆ ಸಂಬAಧ ಈವರೆಗೆ ಬಂಡಾಯದ ಬೇಗುದಿ
ಇಲ್ಲ. ಆದರೆ ಮಡಿಕೇರಿ ಕ್ಷೇತ್ರಕ್ಕೆ ಸಂಬAಧಿಸಿದAತೆ ಒಂದಿಷ್ಟು ಅಸಮಾಧಾನ ಭುಗಿಲೆದ್ದಿದೆ.
ಇದಕ್ಕೆ ಪೂರಕವೆಂಬAತೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ಹಿರಿಯ ರಾಜಕೀಯ ಮುಖಂಡ, ಮಾಜಿ ಸಚಿವ ಬಿ.ಎ. ಜೀವಿಜಯ ಅವರು ಈ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದೇ ಚುನಾವಣೆಯಲ್ಲಿ ಸ್ಪರ್ಧಿಸಲು. ಆದರೆ ಬದಲಾದ ರಾಜಕೀಯ ಸನ್ನಿವೇಶಗಳಲ್ಲಿ ಇದೀಗ ಟಿಕೆಟ್ ಕೈ ತಪ್ಪಿದ್ದು, ತಮ್ಮ ನಿಲುವನ್ನು ಹೈಕಮಾಂಡ್‌ಗೆ ಬರೆದ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.
ಸ್ಥಳೀಯ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ತಮ್ಮ ಅಭಿಪ್ರಾಯ ತಿಳಿಸಿರುವ ಜೀವಿಜಯ ಅವರ ಪತ್ರಕ್ಕೆ ಹೈಕಮಾಂಡ್ ಮಣೆ ಹಾಕಿಲ್ಲ. ಈ ಹಿನ್ನೆಲೆ ಜೀವಿಜಯ ಅವರ ನಡೆ ಈ ಬಾರಿಯ ಚುನಾವಣೆಯಲ್ಲಿ ಇನ್ನೂ ನಿಗೂಢವಾಗಿಯೇ ಉಳಿದಿದೆ. ಈ ಮಧ್ಯೆ ಹರಪಳ್ಳಿ ರವೀಂದ್ರ ಅವರಿಗೆ ತಾವು ಬೆಂಬಲ ನೀಡುವುದಾಗಿ ತಿಳಿಸಿರುವ ಬಗ್ಗೆಯೂ ಮಾಧ್ಯಮಗಳಲ್ಲಿ ವರದಿಯಾಗಿವೆ.
ಈ ನಡುವೆ ಕಾಂಗ್ರೆಸ್ ಟಿಕೆಟ್ ವಂಚಿತ ಪ್ರಬಲ ಆಕಾಂಕ್ಷಿಯಾಗಿದ್ದ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಜಿಲ್ಲಾ ನಿರ್ದೇಶಕ ಹರಪಳ್ಳಿ ರವೀಂದ್ರ ಅವರಿಗೆ ಜಾತ್ಯತೀತ ಜನತಾದಳದ ಹೈಕಮಾಂಡ್‌ನಿAದ ಬುಲಾವ್ ಬಂದಿದ್ದು, ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಇತರ ಪಕ್ಷಗಳ ಟಿಕೆಟ್ ವಂಚಿತ ಆಕಾಂಕ್ಷಿಗಳನ್ನು ತನ್ನತ್ತ ಸೆಳೆಯುವ ಕಾರ್ಯ ಯೋಜನೆಯನ್ನು ಜೆಡಿಎಸ್ ಪಕ್ಷವು ಈಗಾಗಲೇ ಇತರ ಕ್ಷೇತ್ರಗಳಲ್ಲಿ ಅನುಷ್ಠಾನಗೊಳಿಸುತ್ತಿದೆ. ಇದರ ಮುಂದುವರೆದ ಭಾಗವಾಗಿ ಮಡಿಕೇರಿ ಕ್ಷೇತ್ರದಲ್ಲಿ ಹರಪಳ್ಳಿ ರವೀಂದ್ರ ಅವರಿಗೆ ‘ತೆನೆ ಹೊರೆಸುವ’ ಪ್ರಯತ್ನ ನಡೆದಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
ನಿನ್ನೆ ದಿನ ಬೆಂಗಳೂರಿನಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ಹರಪಳ್ಳಿ ಅವರು ರಾಜಕೀಯ ನಡೆಯ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭ ಕುಮಾರಸ್ವಾಮಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಹುಬ್ಬಳ್ಳಿ ಪ್ರವಾಸದ ನಂತರ ಅಂತಿಮ ರೂಪುರೇಷೆ ಮಾಡುವ ಬಗ್ಗೆ ತಿಳಿಸಿದ್ದಾರೆ.
ಈ ಬಗ್ಗೆ ‘ಶಕ್ತಿ’ಯೊಂದಿಗೆ ಪ್ರತಿಕ್ರಿಯೆ ನೀಡಿದ ಹರಪಳ್ಳಿ ರವೀಂದ್ರ ಅವರು, ಜೆಡಿಎಸ್ ವರಿಷ್ಠರಾದ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗಿದೆ. ಸದ್ಯದಲ್ಲಿಯೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಒಂದು ವೇಳೆ ಹರಪಳ್ಳಿ ರವೀಂದ್ರ ಅವರಿಗೆ ಜೆಡಿಎಸ್ ಟಿಕೇಟ್ ಲಭಿಸಿದರೆ ಜೆಡಿಎಸ್‌ನಿಂದ ಟಿಕೆಟ್ ಆಕಾಂಕ್ಷಿಯಾಗಿರುವ ನಾಪಂಡ ಮುತ್ತಪ್ಪ ಅವರ ನಡೆ ಏನು? ಎಂಬ ಬಗ್ಗೆಯೂ ರಾಜಕೀಯ ಮೊಗಸಾಲೆಯಲ್ಲಿ ಚರ್ಚೆ ನಡೆಯುತ್ತಿದೆ.