ಗೋಣಿಕೊಪ್ಪಲು, ಏ. ೧೩: ಚೆನ್ನಯ್ಯನಕೋಟೆ ವ್ಯಾಪ್ತಿಯ ಬಾಡಗ ಬಾಣಂಗಾಲ, ಬಿಬಿಟಿಸಿ ಕಾಫಿ ತೋಟ ಹಾಗೂ ಸುತ್ತಮುತ್ತಲಿನ ಕಾಫಿ ತೋಟದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳ ಹಿಂಡನ್ನು ಸಮೀಪದ ಅರಣ್ಯ ಪ್ರದೇಶಕ್ಕೆ ಅಟ್ಟುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.

ಈ ಭಾಗದಲ್ಲಿ ನಿರಂತರ ಕಾಡಾನೆಗಳ ಉಪಟಳ ತಾಳಲಾರದೆ ನಾಗರಿಕರು ಕಷ್ಟ ಎದುರಿಸುತ್ತಿದ್ದರು. ಕಾಫಿ ತೋಟಗಳಲ್ಲಿ ಕಾಡಾನೆಗಳು ಹಿಂಡು ನೆಲೆ ಕಂಡುಕೊAಡಿದ್ದವು.

ಈ ಹಿನ್ನೆಲೆಯಲ್ಲಿ ಮುಂಜಾನೆಯ ಸಮಯದಲ್ಲಿ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆಯ ತಿತಿಮತಿ ಭಾಗದ ಆರ್.ಎಫ್.ಓ. ಅಶೋಕ್ ಹಾಗೂ ತಂಡ ಸಂಜೆಯ ವೇಳೆಗೆ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವಲ್ಲಿ ಯಶಸ್ವಿಯಾಗಿದೆ.

ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.