ಗೋಣಿಕೊಪ್ಪಲು, ಏ. ೧೩: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಯಾಗಿರುವ ಕೆ. ಜಿ. ಬೋಪಯ್ಯ ಅವರು ತಾ. ೧೭ ರಂದು ಬೆಳಿಗ್ಗೆ ೧೧ ಗಂಟೆಗೆ ವೀರಾಜಪೇಟೆಯ ಚುನಾವಣಾಧಿಕಾರಿ ಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಪಕ್ಷದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಪ್ರವಾಸ ಪ್ರಮುಖ್ ಗುಮ್ಮಟೀರ ಕಿಲನ್ ಗಣಪತಿ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ ೧೦ ಗಂಟೆಗೆ ವೀರಾಜ ಪೇಟೆಯ ತೆಲುಗರ ಬೀದಿಯ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರೊಂದಿಗೆ ಮುಖ್ಯ ರಸ್ತೆಯ ಮೂಲಕ ಮೆರವಣಿಗೆ ಸಾಗಿ, ಗಡಿಯಾರ ಕಂಬದ ಬಳಿಯ ಶ್ರೀ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.