ಮಡಿಕೇರಿ, ಏ. ೧೪: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ‘ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೨ ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

ನಗರದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿ.ಪಂ. ಸಿಇಓ ಡಾ.ಎಸ್. ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜ್ ಇತರರು ದೀಪ ಬೆಳಗಿ, ಪುಷ್ಪನಮನ ಸಲ್ಲಿಸಿ, ಗೌರವ ಸಲ್ಲಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಅವರು ಮಾತನಾಡಿ, ‘ಶಿಕ್ಷಣ ಪ್ರಬಲ ಮತ್ತು ಪರಿಣಾಮಕಾರಿ ಅಸ್ತç’ ಎಂಬುದನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ಒತ್ತಿ ಹೇಳಿದ್ದಾರೆ. ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ವಿಶ್ವದಲ್ಲಿಯೇ ಮಾದರಿ ಹಾಗೂ ಅತ್ಯಂತ ಶ್ರೇಷ್ಠ ಸಂವಿಧಾನನ್ನು ರಾಷ್ಟçಕ್ಕೆ ಸಮರ್ಪಣೆ ಮಾಡಿದ್ದಾರೆ. ಭಾರತದ ಸಂವಿಧಾನದ ಮೂಲಕ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಸಂವಿಧಾನ ನೀಡಿದ್ದಾರೆ. ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದ್ದಾರೆ. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು, ಬರಹಗಳನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು. ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದ ಆಶಯವನ್ನು ತಿಳಿದುಕೊಳ್ಳುವಂತಾಗ ಬೇಕು ಎಂದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.