ಮಡಿಕೇರಿ, ಏ. ೧೫: ಮೇ ೧೦ ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಸಂಬAಧ ಚುನಾವಣೆಯ ವಿವಿಧ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳು ನಿಗದಿಪಡಿಸಿರುವ ತರಬೇತಿ ಮತ್ತು ಕರ್ತವ್ಯಕ್ಕೆ ಸಮಯಕ್ಕೆ ಸರಿಯಾಗಿ ತಪ್ಪದೇ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಸೂಚಿಸಿದ್ದಾರೆ.

ಚುನಾವಣೆ ಸಂಬAಧ ಯಾವುದೇ ಕರ್ತವ್ಯಲೋಪವನ್ನು ಗಂಭೀರವಾಗಿ ಪರಿಗಣಿಸಿ ಪ್ರಜಾ ಪ್ರಾತಿನಿಧ್ಯ ಕಾಯ್ದೆ ೧೯೫೧ ರನ್ವಯ ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.