ಸೋಮವಾರಪೇಟೆ, ಏ. ೧೫: ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಮಂಥರ್ ಗೌಡ ಅವರ ಪರವಾಗಿ ಪತ್ನಿ ದಿವ್ಯಾ ಮಂಥರ್ ಅವರು ಸೋಮವಾರಪೇಟೆ ಪಟ್ಟಣದಲ್ಲಿ ಮತಯಾಚಿಸಿದರು.

ಕಾಂಗ್ರೆಸ್‌ನ ಸ್ಥಳೀಯ ಮುಖಂಡರೊAದಿಗೆ ಪಟ್ಟಣದ ಅಂಗಡಿ ಮುಂಗಟ್ಟುಗಳಿಗೆ ತೆರಳಿ, ವರ್ತಕರು ಹಾಗೂ ಗ್ರಾಹಕರಲ್ಲಿ ಮತಯಾಚಿಸಿದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ನಗರಾಧ್ಯಕ್ಷ ನಾಗರಾಜ್, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಹಾನಗಲ್ಲು, ಹಿಂದುಳಿದ ಘಟಕದ ಪ್ರಧಾನ ಕಾರ್ಯದರ್ಶಿ ಇಂದ್ರೇಶ್, ಬಿ.ಸಿ. ವೆಂಕಟೇಶ್, ಮಹಿಳಾ ಘಟಕದ ಶೀಲಾ ಡಿಸೋಜ ಸೇರಿದಂತೆ ಇತರರು ಉಪಸ್ಥಿತರಿದ್ದರು.