ಕುಶಾಲನಗರ, ಏ. ೧೫: ಮಡಿಕೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸೋಮವಾರ ಬೆಳಗ್ಗೆ ಕುಶಾಲನಗರ ಗಣಪತಿ ದೇವಾಲಯ ಮತ್ತು ಆಂಜನೇಯ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಂಜನ್ ಅವರು, ಸೋಮವಾರ ಮಡಿಕೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು, ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿರುವುದಾಗಿ ಹೇಳಿದರು.
ಈ ಸಂದರ್ಭ ಸ್ಥಳೀಯ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಇದ್ದರು.