ಕಾಂಗ್ರೆಸ್ ೩ನೇ ಪಟ್ಟಿ : ಅಥಣಿ ಟಿಕೆಟ್ ಸವದಿಗೆ,
ಕೋಲಾರಕ್ಕೆ ಕೊತ್ತೂರು ಮಂಜುನಾಥ್
ಬೆAಗಳೂರು, ಏ. ೧೫: ಕರ್ನಾಟಕ ವಿಧಾನಸಭೆ ಚುನಾವಣೆ ನಿಮಿತ್ತ ನಿರೀಕ್ಷೆಯಂತೆಯೇ ಶನಿವಾರ ಕಾಂಗ್ರೆಸ್ ಪಕ್ಷ ತನ್ನ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ನಿನ್ನೆಯಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಲಕ್ಷ್ಮಣ್ ಸವದಿಗೆ ಅಥಣಿ ಟಿಕೆಟ್ ನೀಡಲಾಗಿದ್ದು, ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕೋಲಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಆಪ್ತ ಕೊತ್ತೂರು ಮಂಜುನಾಥ್ಗೆ ಟಿಕೆಟ್ ನೀಡಲಾಗಿದೆ. ವಿಧಾನಸಭಾ ಚುನಾವಣೆಗೆ ೪೩ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಇಂದು ಪ್ರಕಟಿಸಿದ್ದು, ಅರಸಿಕೆರೆಯಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಬಂದಿರುವ ಶಿವಲಿಂಗೇಗೌಡ ಅವರನ್ನು ಕಣಕ್ಕಿಳಿಸಲಾಗಿದೆ ಉಳಿದಂತೆ ತೇರದಾಳ ಕ್ಷೇತ್ರದಿಂದ ಮಾಜಿ ಸಚಿವೆ, ನಟಿ ಉಮಾಶ್ರೀ ಅವರು ಆಕಾಂಕ್ಷಿಯಾಗಿದ್ದರು. ಆದರೆ, ಅವರಿಗೆ ಟಿಕೆಟ್ ಕೈತಪ್ಪಿದ್ದು, ಸಿದ್ದಪ್ಪ ರಾಮಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಹಾಸನದಿಂದ ಬನವಾಸಿ ರಂಗಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ. ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದಿಂದ ಆರ್.ವಿ.ದೇವರಾಜ್ಗೆ ಟಿಕೆಟ್ ನೀಡಲಾಗಿದೆ. ಚಿಕ್ಕಪೇಟೆ ಆಕಾಂಕ್ಷಿಯಾಗಿದ್ದ ಮಾಜಿ ಮೇಯರ್ ಗಂಗಾAಬಿಕೆ ಅವರಿಗೆ ನಿರಾಸೆಯಾಗಿದ್ದು, ಟಿಕೆಟ್ ದೊರೆಯುವ ವಿಶ್ವಾಸದಲ್ಲಿದ್ದ ಅವರು ಈಗಾಗಲೇ ನಾಮಪತ್ರವನ್ನೂ ಸಲ್ಲಿಸಿದ್ದಾರೆ. ೨೨೪ ವಿಧಾನಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಈವರೆಗೆ ೨೦೯ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಇನ್ನು ೧೫ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಬಾಕಿ ಉಳಿದಿದೆ. ಈ ಪೈಕಿ ಬಿಜೆಪಿಯಿಂದ ಮುನಿಸಿಕೊಂಡಿರುವ ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರಕ್ಕೆ ಕೂಡ ಟಿಕೆಟ್ ಘೋಷಣೆ ಮಾಡದೇ ಇರುವುದು ತೀವ್ರ ಕುತೂಹಲ ಕೆರಳಿಸಿದೆ. ಒಂದು ವೇಳೆ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ಮಿಸ್ ಆದರೆ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
‘ನನಗೆ ಟಿಕೆಟ್ ನಿರಾಕರಿಸಿದರೆ ರಾಜ್ಯದಲ್ಲಿ ೨೦-೨೫ ಸ್ಥಾನಗಳ ಮೇಲೆ ಪರಿಣಾಮ ಬೀರಲಿದೆ: ಬಿಜೆಪಿಗೆ ಶೆಟ್ಟರ್ ಎಚ್ಚರಿಕೆ
ಹುಬ್ಬಳ್ಳಿ, ಎ. ೧೫: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ ಬಿಟ್ಟುಕೊಡುವಂತೆ ಬಿಜೆಪಿ ಹೈಕಮಾಂಡ್ ಕೇಳಿದ್ದಕ್ಕೆ ಬಂಡಾಯದ ಧ್ವನಿಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಒಂದು ವೇಳೆ ನನಗೆ ಟಿಕೆಟ್ ನಿರಾಕರಿಸಿದರೆ ಕನಿಷ್ಟ ೨೦ ರಿಂದ ೨೫ ಸ್ಥಾನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ವಿಚಾರದಲ್ಲಿ ಪಕ್ಷದ ನಿರ್ಧಾರಕ್ಕಾಗಿ ಭಾನುವಾರದವರೆಗೂ ಕಾಯುತ್ತೇನೆ. ನಂತರ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸೇರಿದಂತೆ ೧೨ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಇನ್ನೂ ಬಿಡುಗಡೆ ಮಾಡಿಲ್ಲ, ಭಾನುವಾರದವರೆಗೆ ಕಾದು ನಂತರ ಮುಂದಿನ ನಡೆ ನಿರ್ಧರಿಸುತ್ತೇನೆ ಎಂದು ಶೆಟ್ಟರ್ ಹೇಳಿದರು. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಹಲವು ಕೌನ್ಸಿಲರ್ಗಳು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರಿಗೆ ನೋವಾಗಿದೆ. ಆದ್ದರಿಂದ ರಾಜೀನಾಮೆ ನೀಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಪಾಲಿಕೆ ಸದಸ್ಯರ ಅಭಿಪ್ರಾಯಗಳನ್ನು ಗಮನಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಶೆಟ್ಟರ್ ಹೇಳಿದರು. ಶೆಟ್ಟರ್ ಅವರಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಬಿಜೆಪಿಯ ಕೆಲವು ಪ್ರಮುಖರು ಹೇಳುತ್ತಿರುವ ಮಾತಿಗೆ ಉತ್ತರಿಸಿದ ಶೆಟ್ಟರ್, ಇಂತಹ ಹೇಳಿಕೆಗಳ ಬಗ್ಗೆ ತಿಳಿದಿದೆ. ಆದರೆ ಫಲಿತಾಂಶ ಬೇಕು ಎಂದರು.
ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಾಶ್ವತ ವಿನಾಯಿತಿ
ಥಾಣೆ, ಏ. ೧೫: ರಾಷ್ಟಿçÃಯ ಸ್ವಯಂ ಸೇವಕ ಸಂಘದ ಪದಾಧಿಕಾರಿಯೊಬ್ಬರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬAಧಿಸಿದAತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖುದ್ದು ಹಾಜರಾತಿಯಿಂದ ಶಾಶ್ವತ ವಿನಾಯಿತಿ ನೀಡಿ ಮಹಾರಾಷ್ಟçದ ಥಾಣೆ ಜಿಲ್ಲೆಯ ನ್ಯಾಯಾಲಯವೊಂದು ಶನಿವಾರ ಆದೇಶ ಹೊರಡಿಸಿದೆ. ರಾಹುಲ್ ಗಾಂಧಿ ಪರ ವಕೀಲ ನಾರಾಯಣ ಅಯ್ಯರ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಭೀವಂಡಿ ಪ್ರಥಮ ದರ್ಜೆ ಜ್ಯೂಡಿಷಿಯಲ್ ಮ್ಯಾಜಿಸ್ಟೆçÃಟ್ ಸಿ ವಾಡಿಕರ್, ಕಾಂಗ್ರೆಸ್ ನಾಯಕ ಶಾಶ್ವತ ವಿನಾಯಿತಿಗೆ ಅರ್ಹರು ಎಂದು ಆದೇಶ ನೀಡಿದರು. ಸ್ಥಳೀಯ ಆರ್ಎಸ್ಎಸ್ ಕಾರ್ಯಕರ್ತ ರಾಜೇಶ್ ಕುಂಟೆ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ ಸಾಕ್ಷö್ಯವನ್ನು ದಾಖಲಿಸಲು ಮ್ಯಾಜಿಸ್ಟೆçÃಟ್ ಜೂನ್ ೩ ದಿನಾಂಕವನ್ನು ನಿಗದಿಪಡಿಸಿತು. ಮಹಾತ್ಮ ಗಾಂಧಿ ಅವರ ಹತ್ಯೆಯಲ್ಲಿ ಆರ್ಎಸ್ಎಸ್ ಕೈವಾಡವಿದೆ ಎಂದು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಆರೋಪಿಸಿದ್ದಾರೆ ಎಂದು ರಾಜೇಶ್ ಕುಂಟೆ ೨೦೧೪ರಲ್ಲಿ ಭಿವಂಡಿ ಮ್ಯಾಜಿಸ್ಟೆçÃಟ್ ಕೋರ್ಟ್ನಲ್ಲಿ ಖಾಸಗಿ ದೂರು ದಾಖಲಿಸಿದ್ದರು. ೨೦೧೮ ಜೂನ್ ನಲ್ಲಿ ನ್ಯಾಯಾಲಯದ ಮುಂದೆ ಹಾಜರಾದ ರಾಹುಲ್ ಗಾಂಧಿ ತಾನು ನಿರಪರಾಧಿ ಎಂದು ಹೇಳಿದ್ದರು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ವಿನಾಯಿತಿ ನೀಡಬಾರದು ಎಂದು ಕುಂಟೆ ಇತ್ತೀಚೆಗೆ ಆಗ್ರಹಿಸಿದ್ದರು.
ಪುಲ್ವಾಮಾ ದಾಳಿ: ತನಿಖೆ ಎಲ್ಲಿಗೆ ಬಂದು ತಲುಪಿದೆ? ಮಲ್ಲಿಕ್
ವರದಿ ಕುರಿತು ಪ್ರತಿಕ್ರಿಯಿಸುವಂತೆ ಕಾಂಗ್ರೆಸ್ ಒತ್ತಾಯ
ನವದೆಹಲಿ, ಏ. ೧೫: ೨೦೧೯ರ ಪುಲ್ವಾಮಾ ಘಟನೆಯಲ್ಲಿ ೪೦ ಸಿಆರ್ ಪಿಎಫ್ ಯೋಧರನ್ನು ಹತ್ಯೆಗೈದ ಪ್ರಕರಣದ ತನಿಖೆಯ ಫಲಿತಾಂಶ ಕುರಿತು ಕಾಂಗ್ರೆಸ್ ಶನಿವಾರ ಕೇಂದ್ರದಿAದ ಉತ್ತರವನ್ನು ಕೇಳಿದೆ. ಉಗ್ರರ ದಾಳಿ ಬೆದರಿಕೆಯ ಹೊರತಾಗಿಯೂ ಸಿಆರ್ಪಿಎಫ್ ಸಿಬ್ಬಂದಿಗೆ ವಿಮಾನ ನಿರಾಕರಿಸಿ, ರಸ್ತೆ ಮೂಲಕ ಸಂಚರಿಸುವAತೆ ಏಕೆ ಮಾಡಲಾಗಿತ್ತು ಎಂದು ಪ್ರಶ್ನಿಸಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ‘ಕನಿಷ್ಟ ಆಡಳಿತ ಮತ್ತು ಗರಿಷ್ಠ ಮೌನ' ಎಂದು ಆರೋಪಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಘಟನೆ ಕುರಿತು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ವರದಿಯಲ್ಲಿನ ಮಾಹಿತಿ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಳಿದರು. ಸರ್ಕಾರ ಕನಿಷ್ಟ ಆಡಳಿತ ಮತ್ತು ಗರಿಷ್ಠ ಮೌನದ ತತ್ವದಲ್ಲಿ ನಂಬಿಕೆಯಿಟ್ಟಿದೆ. ಪ್ರತಿಪಕ್ಷಗಳು ಎತ್ತುವ ಪ್ರಶ್ನೆಗಳಿಗೆ ಉತ್ತರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ರಾಷ್ಟಿçÃಯ ಭದ್ರತೆಗೆ ಸಂಬAಧಿಸಿದ ವಿಷಯದ ಬಗ್ಗೆ ಕಾಂಗ್ರೆಸ್ ಪ್ರಶ್ನೆ ಕೇಳುವುದನ್ನು ಮುಂದುವರಿಸುತ್ತದೆ ಎಂದರು. ಪಕ್ಷದ ಮುಖಂಡರಾದ ಪವನ್ ಖೇರಾ ಮತ್ತು ಸುಪ್ರಿಯಾ ಶ್ರಿನಾಟೆ ಜೊತೆಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೈರಾಮ್ ರಮೇಶ್, ಸರ್ಕಾರ ಪ್ರಜಾಪ್ರಭುತ್ವದ ಸಂಕೇತಗಳಾಗಿ ಕಟ್ಟಡಗಳನ್ನು ಸ್ಥಾಪಿಸುತ್ತಿದೆ. ಆದರೆ ಪ್ರಜಾಪ್ರಭುತ್ವ ಕಾಣೆಯಾಗಿದೆ. "ಸಿಆರ್ಪಿಎಫ್ ಸಿಬ್ಬಂದಿಗೆ ವಿಮಾನ ಏಕೆ ನಿರಾಕರಿಸಲಾಯಿತು? ಅವರನ್ನು ಏಕೆ ಏರ್ಲಿಫ್ಟ್ ಮಾಡಲಿಲ್ಲ? ಎಂದು ಶ್ರೀನೇಟ್ ಕೇಳಿದರು. ಜೈಶ್ ಬೆದರಿಕೆಗಳನ್ನು ಏಕೆ ನಿರ್ಲಕ್ಷಿಸಲಾಗಿದೆ? ಜನವರಿ ೨ ೨೦೧೯ ಮತ್ತು ೧೩ ಫೆಬ್ರವರಿ ೨೦೧೯ ರ ನಡುವೆ ಭಯೋತ್ಪಾದಕ ದಾಳಿಯ ಎಚ್ಚರಿಕೆ ನೀಡಿದ್ದ ೧೧ ಗುಪ್ತಚರ ಮಾಹಿತಿಗಳನ್ನು ಏಕೆ ನಿರ್ಲಕ್ಷಿಸಲಾಗಿದೆ. ಹೇಗೆ ಉಗ್ರರು ೩೦೦ ಕೆಜಿ ಆರ್ ಡಿಎಕ್ಸ್ ಸಂಗ್ರಹಿಸಿದರು. ನಾಲ್ಕು ವರ್ಷಗಳ ಅವಧಿಯ ನಂತರ, ಪುಲ್ವಾಮಾ ಉಗ್ರ ದಾಳಿಯ ವಿಚಾರಣೆ ಎಲ್ಲಿಗೆ ತಲುಪಿದೆ? ರಾಷ್ಟಿçÃಯ ಭದ್ರತೆ ಸಲಹೆಗಾರ ಅಜಿತ್ ದೋವಲ್ ಮತ್ತು ಆಗಿನ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಹೊಣೆಗಾರಿಕೆಗೆ ಯಾರು, ಯಾವಾಗ ಕ್ರಮ ಕೈಗೊಳ್ಳುತ್ತಾರೆ ಎಂದು ಅವರು ಪ್ರಶ್ನಿಸಿದರು.