ಮಡಿಕೇರಿ, ಏ. ೧೫: ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಹಂತಹAತವಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನಾಂಗದ ಪ್ರತಿಯೊಬ್ಬರು ಕೂಡಾ ಸಂಘದ ಜತೆಗೆ ಕೈಜೋಡಿಸುವಂತೆ ಸಂಘದ ಜಿಲ್ಲಾಧ್ಯಕ್ಷ ಬಿ.ಡಿ. ಜಗದೀಶ್ ರೈ ಮನವಿ ಮಾಡಿದರು.
ಮಡಿಕೇರಿಯ ಗಾಂಧಿ ಮೈದಾನ ಬಳಿಯಿರುವ ಖಾಸಗಿ ಕಟ್ಟಡದಲ್ಲಿ ಶನಿವಾರ ನಡೆದ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತುಳು ಭಾಷಿಕರ ಹೊಸ ವರ್ಷವಾದ ಬಿಸು ಹಬ್ಬವನ್ನು ಮುಂದಿನ ವರ್ಷದಿಂದ ಸಂಘದ ನೇತೃತ್ವದಲ್ಲಿ ಸಂಭ್ರಮದಿAದ ಆಚರಿಸುವ ಉದ್ದೇಶವಿದೆ. ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಬಿಂಬಿಸುವ ಆಚರಣೆಯಾಗಿ ಎಲ್ಲರೂ ಸಂಭ್ರಮಿಸುವ ರೀತಿಯ ಕಾರ್ಯಕ್ರಮ ಮಾಡಲಾಗುವುದು ಎಂದರು.
ಜಿಲ್ಲಾ ಬಂಟರ ಸಂಘದ ಜತೆಗೆ ತಾಲೂಕು ಘಟಕ, ನಗರ ಮಹಿಳಾ ಘಟಕ, ಯುವ ಬಂಟ್ಸ್ ಅಸೋಸಿಯೇಷನ್ ಕಾರ್ಯಚಟುವಟಿಕೆಗಳಿಗೆ ಈ ಕಚೇರಿಯನ್ನು ಬಳಸಿಕೊಳ್ಳಬಹುದು. ಸಂಘದ ಕಾರ್ಯಚಟುವಟಿಕೆಗಳು ಜಿಲ್ಲಾ ಬಂಟರ ಭವನದಲ್ಲಿ ಆಗಬೇಕೆಂಬ ಕನಸು ಜನಾಂಗ ಬಾಂಧವರಲ್ಲಿದೆ. ಅದು ಈಡೇರಬೇಕಾದರೆ ಎಲ್ಲರ ಸಹಕಾರ ಅಗತ್ಯ ಎಂದರು.
ಕಾರ್ಯದರ್ಶಿ ರವೀಂದ್ರ ವಿ. ರೈ ಮಾತನಾಡಿ, ನೂತನ ಕಚೇರಿ ಕಾರ್ಯಾರಂಭದೊAದಿಗೆ ಬಂಟರ ಸಂಘದಲ್ಲಿ ಸುವರ್ಣ ಯುಗ ಶುರುವಾಗಿದೆ. ಮುಂದಿನ ಪೀಳಿಗೆಗೆ ಒಳ್ಳೆಯ ಅಡಿಪಾಯವನ್ನು ನಾವು ಹಾಕಿಕೊಡಬೇಕು. ಭವಿಷ್ಯದ ಬಗ್ಗೆ ಉತ್ತಮ ಯೋಜನೆಗಳನ್ನು ಹಾಕಿಕೊಂಡು ಸಂಘ ಮುನ್ನಡೆಯಬೇಕೆಂದರು. ಸಂಘದ ಗೌರವಾಧ್ಯಕ್ಷ ಬಿ.ಬಿ. ಐತಪ್ಪ ರೈ ನೂತನ ಕಚೇರಿ ಉದ್ಘಾಟನೆ ಮಾಡಿ ಶುಭಕೋರಿದರು. ಕಚೇರಿ ಉದ್ಘಾಟನೆ ಅಂಗವಾಗಿ ಗಣಪತಿ ಹೋಮ, ಹಬ್ಬದ ಪ್ರಯುಕ್ತ ಬಿಸು ಕಣಿ ಪೂಜೆ ನೆರವೇರಿತು. ಮಡಿಕೇರಿ ತಾಲೂಕು ಅಧ್ಯಕ್ಷ ರಮೇಶ್ ರೈ, ವೀರಾಜಪೇಟೆ ತಾಲೂಕು ಅಧ್ಯಕ್ಷ ಲೀಲಾಧರ ರೈ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಜನಾರ್ಧನ ಶೆಟ್ಟಿ, ನಗರ ಮಹಿಳಾ ಘಟಕ ಅಧ್ಯಕ್ಷೆ ಸೌಮ್ಯ ಶೆಟ್ಟಿ, ಹಿರಿಯರಾದ ಕೊರಗಪ್ಪ ರೈ, ಸಂಘದ ಪದಾಧಿಕಾರಿಗಳು, ಸದಸ್ಯರು ಈ ಸಂದರ್ಭ ಇದ್ದರು.