ಸುಂಟಿಕೊಪ್ಪ, ಏ. ೧೫: ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವಕ್ಕೆ ವಿಶೇಷ ಪೂಜಾ ವಿಧಿ ವಿಧಾನಗಳೊಂದಿಗೆ ಶನಿವಾರ ಧ್ವಜಾರೋಹಣವನ್ನು ದೇವಸ್ಥಾನ ಸಮಿತಿ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀಮುತ್ತಪ್ಪ ದೇವಸ್ಥಾನದ ಅರ್ಚಕರಾದ ಮಂಜುನಾಥ ಉಡುಪ ಹಾಗೂ ಮುತ್ತಪ್ಪ ದೇವಸ್ಥಾನ ಪೂಜಾರಿ ಶಿವರಾಂ ಅವರುಗಳು ಗಣಪತಿ ಹವನ ೭.೧೫ ಗಂಟೆಗೆ ಶುದ್ಧಿ ಪುಣ್ಯಾಹ, ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಿದರು.
ಸಂಜೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವಿಕೆ, ಶ್ರೀಮುತ್ತಪ್ಪ ವೆಳ್ಳಾಟಂ, ೮ ಗಂಟೆಗೆ ಚಂಡೆಮೇಳ ನಡೆಯಿತು.
ಈ ಸಂದರ್ಭ ದೇವಸ್ಥಾನ ಸಮಿತಿ ಕಾರ್ಯದರ್ಶಿ ಶಶಿಕಾಂತರೈ, ಖಜಾಂಜಿ ಎಸ್.ಜಿ. ಶ್ರೀನಿವಾಸ್, ಕೆ.ಪಿ. ಜಗನ್ನಾಥ್, ಎ.ಶ್ರೀಧರ್ ಕುಮಾರ್, ಸುರೇಶ್ ಗೋಪಿ, ಎ.ಶ್ರೀಧರನ್, ಧನುಕಾವೇರಪ್ಪ, ಫೃಥ್ವಿರಾಜ್, ಸುರೇಶ್ ಚಂದು, ದಿನು ದೇವಯ್ಯ, ರಮೇಶ್ ಪಿಳ್ಳೆ, ವಿ.ಎ.ಸಂತೋಷ್ ಕುಮಾರ್, ವಿನೋದ್ ಮತ್ತಿತರರು ಇದ್ದರು.
ತಾ. ೧೬ ರಂದು (ಇಂದು) ಬೆಳಿಗ್ಗೆ ೭ ಗಂಟೆಗೆ ವಾದ್ಯಮೇಳ, ಮಧ್ಯಾಹ್ನ ೧೨ ಗಂಟೆಗೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವಿಕೆ ೨ ಗಂಟೆಗೆ ಶ್ರೀಶಾಸ್ತಪ್ಪ ವೆಳ್ಳಾಟಂ, ೩ ಗಂಟೆಗೆ ಶ್ರೀ ಗುಳಿಗನ ವೆಳ್ಳಾಟಂ, ಸಂಜೆ ೪ ಗಂಟೆಗೆ ಮೆರವಣಿಗೆ, ೫ ಗಂಟೆಗೆ ಶ್ರೀ ಮುತ್ತಪ್ಪ ವೆಳ್ಳಾಟಂ, ೬ ಗಂಟೆಗೆ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ರಕ್ತ ಚಾಮುಂಡಿ ವೆಳ್ಳಾಟಂ, ರಾತ್ರಿ ೭. ಗಂಟೆಗೆ ಶ್ರೀ ವಸೂರಿಮಾಲೆ ಸ್ನಾನಕ್ಕೆ ಹೊರಡುವುದು, ೮ ಗಂಟೆಗೆ ಶ್ರೀ ವಿಷ್ಣುಮೂರ್ತಿ ವೆಳ್ಳಾಟಂ, ೧೦ ಗಂಟೆಗೆ ಶ್ರೀ ವಸೂರಿಮಾಲೆ ಮೆರವಣಿಗೆ, ೧೧ ಗಂಟೆಗೆ ಕಳಿಗಪಾಟ್, ವಳ್ಳಕಟ್ಟ್, ೧ ಗಂಟೆಗೆ ಶ್ರೀ ಗುಳಿಗನ ಕೋಲ, ೨ ಗಂಟೆಗೆ ಶ್ರೀ ಶಾಸ್ತಪ್ಪ ಕೋಲ ಸೋಮವಾರ ಬೆಳಗ್ಗಿನ ಜಾವ ೪ ಗಂಟೆಗೆ ಶ್ರೀ ತಿರುವಪ್ಪನ ಕೋಲ, ೫ ಗಂಟೆಗೆ ಗಂಭೀರ ಪಟಾಕಿ.
ತಾ. ೧೭ ರಂದು ಬೆಳಿಗ್ಗೆ ೭ ಗಂಟೆಗೆ ಶ್ರೀ ರಕ್ತ ಚಾಮುಂಡಿಕೋಲ, ೮ ಗಂಟೆಗೆ ಶ್ರೀ ಮುತ್ತಪ್ಪ ಮತ್ತು ಶ್ರೀ ತಿರುವಪ್ಪ ದೇವರ ಪಳ್ಳಿವೇಟ, ೯ ಗಂಟೆಗೆ ಶ್ರೀ ವಿಷ್ಣುಮೂರ್ತಿಕೋಲ, ೧೦ ಗಂಟೆಗೆ ಶ್ರೀ ಚಾಮುಂಡೇಶ್ವರಿ ಕೋಲ, ೧೧ ಗಂಟೆಗೆ ಶ್ರೀ ವಸೂರಿ ಮಾಲೆ ಕೋಲ, ಮಧ್ಯಾಹ್ನ ೧೨ ಗಂಟೆಗೆ ಗುರುಶ್ರೀ ದರ್ಪಣ, ಅಪರಾಹ್ನ ೨ ಗಂಟೆಗೆ ಬಾವುಟ ಇಳಿಸಲಾಗುವುದು.