ಕೂಡಿಗೆ, ಏ. ೧೫: ಹಾಸನ ಹೆದ್ದಾರಿಗೆ ಹೊಂದಿಕೊAಡAತೆ ಇರುವ ಹೆಬ್ಬಾಲೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಅಭಿವೃದ್ಧಿ ಕಾಮಗಾರಿಯು ಸಂಸ್ಥೆಯ ವತಿಯಿಂದ ರೂ. ೫೯ ಲಕ್ಷ ವೆಚ್ಚದಲ್ಲಿ ನಡೆಯುತ್ತಿದೆ.
ಬಸ್ ನಿಲ್ದಾಣಕ್ಕೆ ಚಾವಣಿ ಅಳವಡಿಕೆ, ನಿಲ್ದಾಣ ಮುಂಭಾಗದಲ್ಲಿ ಕಾಂಕ್ರಿಟ್ ರಸ್ತೆ, ತಡೆಗೋಡೆ, ಶೌಚಾಲಯಗಳ ದುರಸ್ತಿ ಸೇರಿದಂತೆ ಕಟ್ಟಡದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗಿದೆ. ಶೇ. ೮೦ ರಷ್ಟು ಕಾಮಗಾರಿ ಪೂರ್ಣಗೊಂಡಿದೆ.
ಸಾರಿಗೆ ಸಂಸ್ಥೆಯ ನಿಯಮಾನುಸಾರ ಜಿಲ್ಲೆಯ ವಿವಿಧ ಬಸ್ ನಿಲ್ದಾಣಗಳ ಅಭಿವೃದ್ಧಿ ಪಡಿಸುವ ಮತ್ತು ಪ್ರಯಾಣಿಕರಿಗೆ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆಯೊಂದಿಗೆ ಪ್ರಯಾಣಿಕರಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಂಸ್ಥೆಯ ಕಾರ್ಯಪಾಲಕ ಅಭಿಯಂತರ ಗುಡಿಗಾರ್ ತಿಳಿಸಿದ್ದಾರೆ. -ಕೆ.ಕೆ. ನಾಗರಾಜಶೆಟ್ಟಿ