ಮಡಿಕೇರಿ, ಏ. ೧೬: ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಮಂಥರ್ ಗೌಡ ಅವರು ತಾ. ೧೭ರಂದು (ಇಂದು) ಬೆಳಿಗ್ಗೆ ೧೧.೩೦ ಗಂಟೆಗೆ ಚೌಡೇಶ್ವರಿ ದೇವಾಲಯ ಬಳಿಯಿಂದ ಮೆರವಣಿಗೆ ಮೂಲಕ ತೆರಳಿ ಚುನಾವಣಾಧಿಕಾರಿ ಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಮಧ್ಯಾಹ್ನ ೨ ಗಂಟೆಗೆ ಗಾಂಧಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಸಮಾವೇಶವನ್ನುದ್ದೇಶಿಸಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಹಿರಿಯ ನಾಯಕರು ಮಾತನಾಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.