ಜಗದೀಶ್ ಶೆಟ್ಟರ್ ರಾಜೀನಾಮೆ

ಶಿರಸಿ, ಏ. ೧೬: ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಇಂದು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯ ನಾಯಕರು, ಪಕ್ಷದ ವರಿಷ್ಠರು ನನ್ನಲ್ಲಿರುವ ಮಿಸ್ಟೇಕ್ಸ್ ಹೇಳಿ, ನನಗೆ ಟಿಕೆಟ್ ತಪ್ಪಲು ಕಾರಣ ಏನು ಎಂಬುದನ್ನು ತಿಳಿಸಬೇಕು ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ರಾಜೀನಾಮೆ ಸಲ್ಲಿಸಿದ ನಂತರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬೊಮ್ಮಾಯಿ, ಪ್ರಹ್ಲಾದ್ ಜೋಶಿ, ಧರ್ಮೇದ್ರ ಪ್ರಧಾನ ಜೊತೆ ಶನಿವಾರ ನಡೆದ ಸಂಧಾನ ಸಫಲವಾಗದ ಕಾರಣ ರಾಜೀನಾಮೆ ಸಲ್ಲಿಸಿದ್ದೇನೆ. ಕ್ಷೇತ್ರದ ಮತದಾರರು, ಬೆಂಬಲಿಗರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದರು. ನಾನು ದೊಡ್ಡ ಹುದ್ದೆಯ ಆಕಾಂಕ್ಷಿಯಲ್ಲ. ವಯಸ್ಸಿದೆ, ಅನಾರೋಗ್ಯವಿಲ್ಲ, ಸಿಡಿ ವಿಚಾರ ಇಲ್ಲ, ೩೦ ವರ್ಷದಿಂದ ಪಕ್ಷ ಕಟ್ಟಿದ್ದೇನೆ. ಪಕ್ಷ ಬೆಳವಣಿಗೆಗೆ ಕೊಡುಗೆ ನೀಡಿದ್ದೇನೆ. ನನಗೆ ಶಾಸಕನಾಗಿ ಕೆಲಸ ಮಾಡೋ ಅವಕಾಶ ಕೊಟ್ಟರೆ ಸಾಕಿತ್ತು. ಆದರೆ, ಯಾವುದೇ ಮುನ್ಸೂಚನೆ ಇಲ್ಲದೇ ಈ ರೀತಿ ಮಾಡಿರೋದು ಬೇಸರ ತರಿಸಿದೆ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇಡೀ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಬೆಳವಣಿಗೆಗೆ ಅವಕಾಶ ಮಾಡಿಕೊಟ್ಟಿದ್ದೇನೆ. ಇಂತಹ ಸಂದರ್ಭದಲ್ಲಿ ಮೂಲ ಬಿಜೆಪಿಗರನ್ನು ಪಕ್ಷದಿಂದ ಹೊರದಬ್ಬಿದ್ದಾರೆ. ಇದು ಮಾನಸಿಕವಾಗಿ ಬೇಸರ ತರಿಸಿದೆ. ನಮ್ಮ ಮನೆಯಿಂದಲೇ ನಾವು ಹೊರ ನಡೆಯುತ್ತಿದ್ದೇವೆ. ನನ್ನ ಮನೆಯಿಂದಲೇ ನನ್ನ ಹೊರಬಿದ್ದಿದ್ದಾರೆ ಎಂದರು. ೨ ವರ್ಷದಿಂದ ಯಾವುದೇ ಮಂತ್ರಿಯಾಗದೆ ಕಾರ್ಯ ಮಾಡಿದ್ದೇನೆ. ಕೆಲವೊಂದು ವ್ಯಕ್ತಿಗಳ ಸ್ವಹಿತಾಸಕ್ತಿಯ ಕಾರಣದಿಂದ ಹೀಗಾಗಿದೆ ಎಂದ ಅವರು, ಕಾಂಗ್ರೆಸ್ ಸೇರ್ಪಡೆ ವಿಚಾರ ಪ್ರಶ್ನೆಗೆ ಇನ್ನೂ ಆ ಬಗ್ಗೆ ತೀರ್ಮಾನಿಸಿಲ್ಲ ಎಂದರು.

ಸAಬಲ್ಪುರ ಹಿಂಸಾಚಾರ: ೭೯ ಮಂದಿ ಬಂಧನ

ಸAಬಲ್ಪುರ, ಏ. ೧೬: ಹನುಮ ಜಯಂತಿ ಆಚರಣೆ ವೇಳೆ ಒಡಿಶಾದ ಸಂಬಲ್ಪುರ ನಗರದಲ್ಲಿ ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ೭೯ ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ನಗರದಲ್ಲಿ ಪರಿಸ್ಥಿತಿ ಕ್ರಮೇಣ ಸಹಜ ಸ್ಥಿತಿಗೆ ಮರಳುತ್ತಿದೆ, ಇಂಟರ್ನೆಟ್ ಸ್ಥಗಿತ ಜೊತೆಗೆ ಕರ್ಫ್ಯೂ ಇನ್ನೂ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ. ಶನಿವಾರ ಮುಂಜಾನೆ ಕರ್ಫ್ಯೂ ಘೋಷಿಸಿದಾಗಿನಿಂದ ಯಾವುದೇ ಅಹಿತಕರ ಘಟನೆ ನಡೆದ ವರದಿಯಾಗಿಲ್ಲ ಎಂದು ಸಂಬಲ್‌ಪುರ ಎಸ್ಪಿ ಬಿ ಗಂಗಾಧರ್ ತಿಳಿಸಿದ್ದಾರೆ. ಇನ್ನೂ ಹಲವು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಏಪ್ರಿಲ್ ೧೨ ರಂದು ಬೈಕ್ ರ‍್ಯಾಲಿ ವೇಳೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬAಧಿಸಿದAತೆ ೨೬ ಜನರನ್ನು ಬಂಧಿಸಿದ್ದರೆ, ಏಪ್ರಿಲ್ ೧೪ ರಂದು ಮೆರವಣಿಗೆಯಲ್ಲಿ ಹಿಂಸಾಚಾರ ಮತ್ತು ಬೆಂಕಿ ಹಚ್ಚಿದ ಆರೋಪದಲ್ಲಿ ೫೩ ಜನರನ್ನು ಬಂಧಿಸಲಾಗಿದೆ. ಸಂಬಲ್ಪುರ ಜಿಲ್ಲೆಯಲ್ಲಿ ಏಪ್ರಿಲ್ ೧೭ ರ ಬೆಳಿಗ್ಗೆ ೧೦ ರವರೆಗೆ ರಾಜ್ಯ ಸರ್ಕಾರ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಒಡಿಶಾ ಡಿಜಿಪಿ ಸುನಿಲ್ ಕೆ. ಬನ್ಸಾಲ್ ಹೇಳಿದ್ದಾರೆ. ಆದಾಗ್ಯೂ, ನಿಷೇಧಿತ ಆದೇಶಗಳನ್ನು ಭಾನುವಾರ ವಿವಿಧ ನೇಮಕಾತಿ ಪರೀಕ್ಷೆಗಳ ಅಭ್ಯರ್ಥಿಗಳಿಗೆ ಸಡಿಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದಲ್ಲಿ ಯಾರು ಬೇಕಾದರೂ ಸಿಎಂ ಆಗಲಿ, ಆ ಹುದ್ದೆ ನನಗೆ ಬೇಡ: ಮಲ್ಲಿಕಾರ್ಜುನ ಖರ್ಗೆ

ಕೋಲಾರ, ಏ. ೧೬: ಮುಖ್ಯಮಂತ್ರಿ ಹುದ್ದೆಗಾಗಿ ಗಲಾಟೆ ಮಾಡುವುದನ್ನು ಮೊದಲು ನಿಲ್ಲಿಸಿ. ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ. ಆ ಪಟ್ಟ ನನಗೆ ಬೇಡ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಅಷ್ಟೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಹೇಳಿದ್ದಾರೆ. ಕೋಲಾರದಲ್ಲಿ ನಡೆದ ಕಾಂಗ್ರೆಸ್ ನ ‘ಜೈ ಭಾರತ’ ಸಮಾವೇಶದಲ್ಲಿ ಮಾತನಾಡಿದ ಖರ್ಗೆ, ಸಿಎಂ ಯಾರಾಗಬೇಕೆಂದು ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಳ್ಳಬೇಡಿ. ರಾಜ್ಯದ ಜನರ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳಿ. ಪಕ್ಷಕ್ಕೆ ಬಹುಮತ ಬಂದಾಗ ಸಿಎಂ ಬಗ್ಗೆ ಶಾಸಕರು ನಿರ್ಧರಿಸುತ್ತಾರೆ ಎಂದರು. ರಾಜ್ಯ ಕಾಂಗ್ರೆಸ್‌ನ ಎಲ್ಲಾ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ಚುನಾವಣೆಯಲ್ಲಿ ೧೩೦ ರಿಂದ ೧೪೦ ಸೀಟು ಗೆಲ್ಲಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಖಡಕ್ ಸಂದೇಶ ನೀಡಿದ್ದಾರೆ. ಇದೇ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ, ಡಬಲ್ ಇಂಜಿನ್ ಸರ್ಕಾರ ಅಂತಾರೆ, ಹೊಸ ಯೋಜನೆ ತಂದಿಲ್ಲ. ಹಳೇ ಡಬ್ಬಿಗೆ ಹೊಸ ಇಂಜಿನ್ ಕಲರ್ ಹಚ್ಚುತ್ತಿದ್ದಾರೆ. ಈ ಬಿಜೆಪಿ ಸರ್ಕಾರ ತೆಗೆಯದಿದ್ದರೆ ಯಾವುದೇ ಅಭಿವೃದ್ಧಿ ಆಗಲ್ಲ ಎಂದರು.

ಶೆಟ್ಟರ್, ಸವದಿಯನ್ನು ಈ ರಾಜ್ಯದ ಜನ ಕ್ಷಮಿಸುವುದಿಲ್ಲ : ಬಿಎಸ್‌ವೈ

ಬೆಂಗಳೂರು, ಏ. ೧೬: ಪಕ್ಷ ಹಲವು ಅವಕಾಶಗಳು, ಸ್ಥಾನಮಾನಗಳನ್ನು ನೀಡಿದ್ದರೂ ಇಂದು ಪಕ್ಷಕ್ಕೆ ಮರ್ಯಾದೆ, ಗೌರವ ನೀಡದೆ, ಸಿದ್ಧಾಂತವನ್ನು ಮರೆತು ಹೋಗಿರುವುದು ಅಕ್ಷಮ್ಯ ಅಪರಾಧ, ಈ ನಾಡಿನ ಜನತೆ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿಯವರನ್ನು ಕ್ಷಮಿಸುವುದಿಲ್ಲ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಬ್ಬರು ನಾಯಕರ ವಿರುದ್ಧವೂ ವಾಗ್ದಾಳಿ ನಡೆಸಿದರು. ಅಲ್ಲದೆ ತಾವು ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಿ ಈ ಬಾರಿ ೧೩೦ರಿಂದ ೧೪೦ ಸ್ಥಾನಗಳನ್ನು ಪಡೆದು ಸ್ವಂತ ಬಲದಿಂದ ಅಧಿಕಾರಕ್ಕೆ ತರಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜಗದೀಶ್ ಶೆಟ್ಟರ್ ಅವರು ಜನಸಂಘದ ಕಾಲದಿಂದಲೂ ಬಿಜೆಪಿಯಲ್ಲಿದ್ದರು. ಜಗದೀಶ್ ಶೆಟ್ಟರ್ ಅವರನ್ನು ಶಾಸಕ, ಮಂತ್ರಿ, ಸಿಎಂ ಮಾಡಿದ್ದೆವು. ಜಗದೀಶ್ ಶೆಟ್ಟರ್ ಅವರಿಗೆ ನಾನು, ಅನಂತಕುಮಾರ್ ಕಾವಲಾಗಿದ್ದೆವು. ನನ್ನ ಜತೆ ಹೆಜ್ಜೆ ಹಾಕುವ ಜವಾಬ್ದಾರಿ ಜಗದೀಶ್ ಶೆಟ್ಟರ್‌ಗೆ ಇತ್ತು. ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಜಗತ್ತಿನಾದ್ಯಂತ ಗೌರವ ಇದೆ. ಇಂಥ ಸಂದರ್ಭದಲ್ಲಿ ಶೆಟ್ಟರ್ ಹೇಳಿಕೆ, ನಿರ್ಧಾರ ಅವರು ನಂಬಿದ ವಿಚಾರಕ್ಕೆ ತದ್ವಿರುದ್ಧ ಇದೆ. ಸ್ಥಾನಮಾನ ಸಿಗಲಿ ಸಿಗದಿರಲಿ. ದೇಶಕ್ಕಾಗಿ ಕೆಲಸ ಮಾಡಬೇಕಿರೋದು ನಾವು ನಡೆದುಕೊಂಡು ಬಂದ ದಾರಿ. ಪಕ್ಷದ ಸಹಕಾರ ಇಲ್ಲದಿದ್ದರೇ ವ್ಯಕ್ತಿ ಎತ್ತರಕ್ಕೆ ಬೆಳೆಯಲ್ಲ. ಪಕ್ಷದ ಸಹಕಾರ ಇಲ್ಲದಿದ್ರೆ ವ್ಯಕ್ತಿ ಸಿಎಂ ಆಗಲಾರ ಎಂದು ಹೇಳಿದರು.

ಗ್ಯಾಂಗ್ ಸ್ಟಾರ್ ಅತೀಕ್ ಹಂತಕರಿಗೆ ೧೪ ದಿನಗಳ ನ್ಯಾಯಾಂಗ ಬಂಧನ

ಪ್ರಯಾಗ್ ರಾಜ್, ಏ. ೧೬: ದರೋಡೆಕೋರ- ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಕೊಂದ ಮೂವರು ದುಷ್ಕರ್ಮಿಗಳನ್ನು ಪ್ರಯಾಗರಾಜ್‌ನ ನ್ಯಾಯಾಲಯ ಭಾನುವಾರ ೧೪ ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಶನಿವಾರ ರಾತ್ರಿ ಪ್ರಯಾಗರಾಜ್‌ನ ಶಾಹಗಂಜ್ ಪ್ರದೇಶದ ಆಸ್ಪತ್ರೆಯೊಂದರ ಹೊರಗೆ ಅತೀಕ್ ಮತ್ತು ಅವನ ಸಹೋದರನನ್ನು ಗುಂಡಿಕ್ಕಿ ಹತ್ಯೆಗೈದ ನಂತರ ಹಂತಕರಾದ ಬಂಡಾದ ಲುವ್ಲೇಶ್ ತಿವಾರಿ (೨೨) ಹಮೀರ್‌ಪುರದ ಮೋಹಿತ್ (೨೩) ಅಲಿಯಾಸ್ ಸನ್ನಿ (೨೩) ಮತ್ತು ಕಾಸ್ಗಂಜ್‌ನ ಅರುಣ್ ಕುಮಾರ್ ಮೌರ್ಯ (೧೮) ಸ್ಥಳದಲ್ಲೇ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದರು.