ಕಾಂಗ್ರೆಸ್ ತತ್ವ, ಸಿದ್ಧಾಂತಗಳನ್ನು ಒಪ್ಪಿಕೊಂಡು ಸೇರ್ಪಡೆ: ಜಗದೀಶ್ ಶೆಟ್ಟರ್
ಬೆಂಗಳೂರು, ಏ. ೧೭: ಬಿಜೆಪಿ ಪಕ್ಷದಲ್ಲಿ ವ್ಯವಸ್ಥಿತವಾಗಿ ಸಂಚು ನಡೆಸಿ ನನಗೆ ಈ ಬಾರಿ ಚುನಾವಣೆಗೆ ಟಿಕೆಟ್ ನಿರಾಕರಿಸಲಾಗಿದೆ. ಕರ್ನಾಟಕದ ಕೆಲವು ನಾಯಕರಿಂದ ನನಗೆ ತೊಂದರೆಯಾಗಿದೆ, ಅವಮಾನವಾಗಿದೆ. ರಾಜ್ಯ ಬಿಜೆಪಿಯಲ್ಲಿ ಪರಿಸ್ಥಿತಿ ಸರಿಯಿಲ್ಲ, ಆ ಪಕ್ಷದಲ್ಲಿ ನನ್ನನ್ನು ನಡೆಸಿಕೊಂಡ ರೀತಿಯಿಂದ ಬೇಸತ್ತು ಹೊರಬಂದು ಸಂತೋಷ, ಸಮಾಧಾನದಿಂದ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಜೆಪಿಯಿಂದ ಬಂಡಾಯವೆದ್ದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಿಂದ ಪಕ್ಷದ ಬಾವುಟವನ್ನು ಸ್ವೀಕರಿಸಿ ಅಧಿಕೃತವಾಗಿ ಸೇರ್ಪಡೆಯಾದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕರ್ನಾಟಕದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದವರಲ್ಲಿ ನಾನು ಪ್ರಮುಖ. ನಾನು ಜನಸಂಘ, ಸಂಘ ಪರಿವಾರದಿಂದ ಬಂದ ವ್ಯಕ್ತಿ, ಬಿಜೆಪಿ ಪಕ್ಷಕ್ಕಾಗಿ ಹಗಲಿರುಳು ದುಡಿದಿದ್ದೇನೆ. ಹಲವಾರು ತಿಂಗಳ ಹಿಂದೆ ಹಿರಿಯ ನಾಯಕನಾಗಿ ನನಗೆ ಏನು ವೇದನೆ ಆಗಿದೆ ಅದು ಯಾರ ಗಮನಕ್ಕೂ ಬರಲಿಲ್ಲ ಎಂದು ನೋವು ತೋಡಿಕೊಂಡರು. ನಾನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ದಿವಂಗತ ಮಾಜಿ ಸಂಸದ ಅನಂತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದೇನೆ. ಬಿಜೆಪಿ ಎಲ್ಲ ರೀತಿ ಗೌರವ ಸ್ಥಾನಮಾನ ನೀಡಿದೆ. ಅದಕ್ಕೆ ಪ್ರತಿಯಾಗಿ ನಾನೂ ಬಿಜೆಪಿ ಕಟ್ಟಿ ಬೆಳೆಸುವ ಕೆಲಸ ಮಾಡಿದ್ದೇನೆ. ಕೊನೆಗೆ ಪಕ್ಷ ಬಿಡುತ್ತೇನೆಂದಾಗ ಕೇಂದ್ರದಲ್ಲಿ ಹುದ್ದೆ ನೀಡುತ್ತೇವೆ ಎಂದು ಆಫರ್ ಕೊಟ್ಟರು. ಅದನ್ನು ಆರಂಭದಲ್ಲಿಯೇ ಹೇಳಬಹುದಾಗಿತ್ತಲ್ಲವೇ ಎಂದು ಜಗದೀಶ್ ಶೆಟ್ಟರ್ ಪ್ರಶ್ನಿಸಿದರು. ಸ್ಥಳೀಯ ನಾಯಕರು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ: ಬಿಜೆಪಿಯ ಸ್ಥಳೀಯ ನಾಯಕರಲ್ಲಿ ಸಮಸ್ಯೆಯಿದೆ. ರಾಜ್ಯ ಬಿಜೆಪಿ ಬೆಳವಣಿಗೆ ವರಿಷ್ಠರ ಗಮನಕ್ಕೆ ಬಂದಿಲ್ಲ ಅನ್ನಿಸುತ್ತೆ. ನನಗೆ ಜೆಪಿ ನಡ್ಡಾ, ಅಮಿತ್ ಶಾ ಅವರ ಬಗ್ಗೆ ಸಮಸ್ಯೆಯಿಲ್ಲ, ಅವರನ್ನು ನಾನು ಆರೋಪ ಮಾಡುತ್ತಿಲ್ಲ. ರಾಜ್ಯ ಬಿಜೆಪಿ ಕೆಲವೇ ಕೆಲವು ವ್ಯಕ್ತಿಗಳ ಕಂಟ್ರೋಲ್ನಲ್ಲಿ ಇದೆ. ರಾಜ್ಯ ಬಿಜೆಪಿ ಕೆಲವು ವ್ಯಕ್ತಿಗಳ ಹಿಡಿತದಲ್ಲಿದೆ. ಕೆಲ ಬಿಜೆಪಿ ನಾಯಕರು ತಮ್ಮ ಹಿತಾಸಕ್ತಿಗಾಗಿ ಕೆಲಸ ಮಾಡ್ತಿದ್ದಾರೆ ಎಂದರು. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಸ್ಥಾನ ನೀಡಿ ಬಿ ಫಾರಂನ್ನು ಕೂಡ ಇದೇ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೀಡಿದರು. ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್ ೨೦ ಕೊನೆಯ ದಿನವಾಗಿದೆ. ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ ಕೇಂದ್ರ ಕ್ಷೇತ್ರದಿಂದ ಕಾಂಗ್ರೆಸ್ನಿAದ ಸ್ಪರ್ಧಿಸಲಿದ್ದಾರೆ.
ಬಿಜೆಪಿ ೩ನೇ ಪಟ್ಟಿ ಪ್ರಕಟ : ಲಿಂಬಾವಳಿ, ರಾಮದಾಸ್ಗೆ ಕೈ ತಪ್ಪಿದ ಟಿಕೆಟ್
ಬೆಂಗಳೂರು, ಏ. ೧೭: ರಾಜ್ಯ ವಿಧಾನಸಭೆ ಚುನಾವಣೆ ಹಿನೆÀ್ನಲೆ ಬಿಜೆಪಿ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ೧೦ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಈ ಬಾರಿ ಅರವಿಂದ್ ಲಿಂಬಾವಳಿ ಬದಲಿಗೆ ಅವರ ಪತ್ನಿ ಮಂಜುಳ ಅರವಿಂದ್ ಲಿಂಬಾವಳಿ ಅವರಿಗೆ ಮಹದೇವಪುರದಿಂದ ಟಿಕೆಟ್ ನೀಡಲಾಗಿದೆ. ಇನ್ನು ಕೃಷ್ಣರಾಜ ಕ್ಷೇತ್ರದಿಂದ ರಾಮದಾಸ್ಗೆ ಟಿಕೆಟ್ ಕೈತಪ್ಪಿದ್ದು, ಶ್ರೀವತ್ಸ ಎಂಬವರಿಗೆ ಟಿಕೆಟ್ ನೀಡಲಾಗಿದೆ. ಜಗದೀಶ್ ಶೆಟ್ಟರ್ ಪಕ್ಷ ಬಿಡಲು ಕಾರಣವಾದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಅನ್ನು ಮಹೇಶ್ ತೆಂಗಿನಕಾಯಿಗೆ ನೀಡಲಾಗಿದೆ. ಹೆಬ್ಬಾಳದಿಂದ ಕಟ್ಟಾ ಜಗದೀಶ್, ನಾಗ್ತಾನ್ ನಿಂದ ಸಂಜೀವ್ ಐಹೊಳೆ, ಸೆಡಂನಿAದ ರಾಜಕುಮಾರ್ ಪಾಟೀಲ್, ಕೊಪ್ಪಳದಿಂದ ಮಂಜುಳಾ ಅಂಬರೀಶ್, ರೋಣಾದಿಂದ ಕಳಕಪ್ಪ ಬಂಡಿ, ಹಗರಿ ಬೊಮ್ಮನಹಳ್ಳಿಯಿಂದ ಬಿ. ರಾಮಣ್ಣ, ಗೋವಿಂದರಾಜನಗರದಿAದ ಉಮೇಶ್ ಶೆಟ್ಟಿ ಹೆಸರು ಘೋಷಣೆಯಾಗಿದೆ. ಒಟ್ಟಾರೆ ೨೨೪ ಕ್ಷೇತ್ರಗಳ ಪೈಕಿ ೨೨೨ ಕ್ಷೇತ್ರಗಳ ಟಿಕೆಟ್ ಘೋಷಣೆಯಾಗಿದ್ದು ಇನ್ನು ಶಿವಮೊಗ್ಗ ನಗರ ಮತ್ತು ಮಾನ್ವಿ ಕ್ಷೇತ್ರದ ಟಿಕೆಟ್ ಘೋಷಣೆ ಬಾಕಿ ಇದೆ.
ದಾವಣಗೆರೆ ದಕ್ಷಿಣ ಗೆಲ್ಲಲು ಬಿಜೆಪಿ ತುಡಿತ: ವಯಸ್ಸು ೯೨ ಆದರೂ ಕ್ಷೇತ್ರದ ಮೇಲೆ ತಗ್ಗಿಲ್ಲ ‘ಮುತ್ಸದ್ದಿ ಶಾಮನೂರು' ಹಿಡಿತ!
ದಾವಣಗೆರೆ, ಏ. ೧೭: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಡಲಿದೆ. ರಾಜ್ಯದ ಅತ್ಯಂತ ಹಿರಿಯ ರಾಜಕಾರಣಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ೯೨ ವರ್ಷ ವಯಸ್ಸಾಗಿದ್ದು, ಕಳೆದ ಆರು ಚುನಾವಣೆಗಳಲ್ಲಿ ಸತತವಾಗಿ ಈ ಕ್ಷೇತ್ರದಲ್ಲಿ ಪ್ರಾಬಲ್ಯ ಸ್ಥಾಪಿಸಿದ್ದಾರೆ. ಶಿವಶಂಕರಪ್ಪ ವಿರುದ್ಧ ಸತತವಾಗಿ ಯಶವಂತರಾವ್ ಜಾದವ್ ಅವರನ್ನು ಕಣಕ್ಕಿಳಿಸುತ್ತಾ ಬಂದಿದ್ದ ಬಿಜೆಪಿ ಈ ಬಾರಿ ತನ್ನ ಅಭ್ಯರ್ಥಿಯನ್ನು ಬದಲಿಸಿ ಮಾಜಿ ಮೇಯರ್ ಬಿ.ಜೆ.ಅಜಯಕುಮಾರ್ ಅವರಿಗೆ ಟಿಕೆಟ್ ನೀಡಿ ಕಾಂಗ್ರೆಸ್ ವಿರುದ್ಧ ತೀವ್ರ ಪೈಪೋಟಿ ಒಡ್ಡಿದೆ. ದಾವಣಗೆರೆ ಉತ್ತರ ಕ್ಷೇತ್ರಕ್ಕೆ ಅಜಯ್ಕುಮಾರ್ ಬೇಡಿಕೆ ಇಟ್ಟಿದ್ದರೂ, ದಕ್ಷಿಣ ಕ್ಷೇತ್ರದಿಂದ ಅನುಭವಿ ಶಿವಶಂಕರಪ್ಪ ವಿರುದ್ಧ ಸ್ಪರ್ಧಿಸುವಂತೆ ಮಾಡಿದೆ.
ಯೋಧರ ಹತ್ಯೆ ಸಂಬAಧ ಯೋಧನೋರ್ವನ ಬಂಧನ
ಬಟಿAಡಾ, ಏ. ೧೭: ಪಂಜಾಬ್ನ ಬಟಿಂಡಾ ಸೇನಾ ನೆಲೆಯಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬAಧಿಸಿದAತೆ ಓರ್ವ ಯೋಧನನ್ನು ಬಂಧಿಸಲಾಗಿದೆ. ಬಟಿಂಡಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗುಲ್ನೀತ್ ಸಿಂಗ್ ಖುರಾನಾ ಅವರು ಬಂಧಿತ ಯೋಧನನ್ನು ದೇಸಾಯಿ ಮೋಹನ್ ಎಂದು ಗುರುತಿಸಿದ್ದಾರೆ. ಘಟನೆಯ ಹಿಂದಿನ ಉದ್ದೇಶವು ವೈಯಕ್ತಿಕವಾಗಿದೆ. ಆತ ಆ ಯೋಧರೊಂದಿಗೆ ಹಗೆತನ ಹೊಂದಿದ್ದ. ಏಪ್ರಿಲ್ ೧೨ ರಂದು, ಬಟಿಂಡಾದ ಸೇನಾ ಠಾಣೆಯೊಳಗೆ ಮಲಗಿದ್ದ ನಾಲ್ವರು ಯೋಧರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಪಂಜಾಬ್ ಪೊಲೀಸರ ಪ್ರಕಾರ, ಬಂಧಿತನನ್ನು ಸೇನೆಯ ಗನ್ನರ್ ಎಂದು ಹೇಳಲಾಗುತ್ತಿದೆ. ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಪಂಜಾಬ್ ಪೊಲೀಸ್ ಹಿರಿಯ ಅಧಿಕಾರಿ ಈ ಮಾಹಿತಿ ನೀಡಿದ್ದಾರೆ. ಪರಸ್ಪರ ವಾಗ್ವಾದದಲ್ಲಿ ಸೇನಾ ನೆಲೆಯಲ್ಲಿ ಗುಂಡಿನ ದಾಳಿ ನಡೆದಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ ೩೦೨ (ಕೊಲೆ) ಮತ್ತು ಶಸ್ತಾçಸ್ತç ಕಾಯ್ದೆಯ ಸಂಬAಧಿತ ಸೆಕ್ಷನ್ಗಳ ಅಡಿಯಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಬಟಿಂಡಾ ಕಂಟೋನ್ಮೆAಟ್ ಪೊಲೀಸ್ ಠಾಣೆಯಲ್ಲಿ ಈ ಸಂಬAಧ ಎಫ್ಐಆರ್ ದಾಖಲಿಸಲಾಗಿದೆ.
೧೦ ಲಕ್ಷ ರೂ.ಗಿಂತ ಹೆಚ್ಚು ನಗದು ಸಿಕ್ಕರೆ ಐಟಿ ತನಿಖೆ!
ಬೆಂಗಳೂರು, ಏ. ೧೭: ವಿಧಾನಸಭೆ ಚುನಾವಣೆ ನಡೆಯುತ್ತಿರುವ ಕರ್ನಾಟಕದಲ್ಲಿ ಹಣದ ಹೊಳೆಯ ಭೀತಿ ಎದುರಾಗಿದ್ದು, ಈ ಬಗ್ಗೆ ಕಣ್ಣಿಟ್ಟಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ೧೦ ಲಕ್ಷಕ್ಕಿಂತ ಹೆಚ್ಚು ನಗದು ಸಿಕ್ಕರೆ ತನಿಖೆ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ೨೦೨೩ಕ್ಕೆ ಮಾರ್ಚ್ ೨೯ರಂದು ವೇಳಾಪಟ್ಟಿ ಪ್ರಕಟವಾಗಿದೆ. ಏಪ್ರಿಲ್ ೧೩ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಿದ್ದು, ಏಪ್ರಿಲ್ ೨೦ರ ತನಕ ನಾಮಪತ್ರ ಸಲ್ಲಿಕೆ ಮಾಡಲು ಅವಕಾಶವಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ರಾಜ್ಯದಲ್ಲಿ ಹಣದ ಹರಿವಿನ ಬಗ್ಗೆ ವಿಶೇಷ ಗಮನ ನೀಡಲಾಗಿದೆ. ಮೇ ೧೦ರಂದು ನಡೆಯುವ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ. ಅಭ್ಯರ್ಥಿಗಳು, ಅವರ ಬೆಂಬಲಿಗರು ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಚುನಾವಣಾ ವೆಚ್ಚ ವೀಕ್ಷಕರು, ಯಾವುದೇ ಅಕ್ರಮ ನಡೆಯದಂತೆ ಮತ್ತು ನೀತಿ ಸಂಹಿತೆ ಉಲ್ಲಂಘನೆಯಾಗದAತೆ ಎಚ್ಚರವಹಿಸಿದ್ದಾರೆ. ಚುನಾವಣಾ ಸಮಯದಲ್ಲಿನ ಹಣ ಹಂಚಿಕೆ, ಹಣ ಸಾಗಣೆ ಮೇಲೆ ಪೊಲೀಸರು ಮತ್ತು ಚುನಾವಣಾ ಆಯೋಗದ ಅಧಿಕಾರಿಗಳು ಕಣ್ಗಾವಲು ವಹಿಸಿದ್ದಾರೆ. ಒಂದು ವೇಳೆ ೧೦ ಲಕ್ಷಕ್ಕಿಂತ ಅಧಿಕ ಹಣ ಸಾಗಣೆ ಪ್ರಕರಣಗಳು ಬೆಳಕಿಗೆ ಬಂದರೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಣದ ಮೂಲದ ಬಗ್ಗೆ ತನಿಖೆ ನಡೆಸಲಿದ್ದಾರೆ.