ಕಣಿವೆ, ಏ. ೧೮: ಕೊಡಗು ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರೂ ಆಗಿದ್ದ ಕೂಡಿಗೆ ಭಾಗದ ಹೆಗ್ಗಡಹಳ್ಳಿ ನಿವಾಸಿ ಎಸ್.ಎನ್.ರಾಜಾರಾವ್ (೬೮) ದೈವಾಧೀನರಾದರು. ಅನಾರೋಗ್ಯದಿಂದಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜಾರಾವ್ ಸೋಮವಾರ ರಾತ್ರಿ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಸೀಗೆಹೊಸೂರಿನ ಅವರ ತೋಟದಲ್ಲಿ ನೆರವೇರಿತು. ಮೃತರು ಪತ್ನಿ ಸೇರಿದಂತೆ ಮೂವರು ಪುತ್ರರು ಹಾಗೂ ಈರ್ವರು ಪುತ್ರಿಯರನ್ನು ಅಗಲಿದ್ದಾರೆ.
(ಮೊದಲ ಪುಟದಿಂದ) ಕೂಡಿಗೆ ಮಂಡಲ ಪ್ರಧಾನರಾಗಿ ರಾಜಕಾರಣ ಆರಂಭಿಸಿದ ರಾಜಾರಾವ್ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯಿತಿ ಸದಸ್ಯ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಬಸವನಹಳ್ಳಿಯ ವಿವಿಧೋದ್ದೇಶ ಗಿರಿಜನ ಸಹಕಾರ ಸಂಘ ಸೇರಿದಂತೆ ಕೂಡಿಗೆಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹಾಗೂ ವೀರಾಜಪೇಟೆ ತಾಲೂಕಿನ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಸದಾ ಕಾಲ ಶ್ವೇತ ವಸ್ತçಧಾರಿ ಯಾಗಿಯೇ ರಾಜಕಾರಣದಲ್ಲಿ ದಿನಗಳೆದ ರಾಜಾರಾವ್ ಆರಂಭದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿ ಕೊಂಡಿದ್ದರು. ಬಳಿಕ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದರು. ನಂತರ ನಡೆದ ಬೆಳವಣಿಗೆಯಲ್ಲಿ ಭಾರತೀಯ ಜನತಾ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರು.
ಮೃತರ ಅಂತ್ಯಕ್ರಿಯೆಯಲ್ಲಿ ಶಾಸಕ ಅಪ್ಪಚ್ಚು ರಂಜನ್, ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಥರ್‌ಗೌಡ, ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ, ವಕೀಲ ಹೆಚ್.ಎಸ್. ಚಂದ್ರಮೌಳಿ , ವೀರಾಜಪೇಟೆ ಅಭ್ಯರ್ಥಿ ಎ.ಎಸ್.ಪೊನ್ನಣ್ಣ, ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಕೂಡಿಗೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತಕುಮಾರ್, ಉಪಾಧ್ಯಕ್ಷ ಟಿ.ಪಿ.ಹಮೀದ್ ಸೇರಿದಂತೆ ಅಪಾರ ಮಂದಿ ಆಗಮಿಸಿ ಅಂತಿಮ ದರ್ಶನ ಪಡೆದರು.
ಕೂಡಿಗೆ ಬಂದ್
ಕೂಡಿಗೆ: ಎಸ್.ಎನ್. ರಾಜಾರಾವ್ ಪಾರ್ಥಿವ ಶರೀರವನ್ನು ಕೂಡಿಗೆ ಸರ್ಕಲ್‌ನಲ್ಲಿ ಒಂದು ಗಂಟೆಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಸಾವಿರಾರು ಅಭಿಮಾನಿಗಳು ಬಂದು ರಾಜಾರಾವ್‌ನವರ ದರ್ಶನ ಪಡೆದರು. ಕೂಡಿಗೆ ಸರ್ಕಲ್‌ನ ಎಲ್ಲಾ ಅಂಗಡಿ ಮತ್ತು ಹೊಟೇಲ್ ಮಾಲೀಕರು ಮೂರು ಗಂಟೆಗಳ ಕಾಲ ತಮ್ಮ ವ್ಯಾಪಾರ ವ್ಯವಹಾರಗಳನ್ನು ಸ್ಥಗಿತಗೊಳಿಸಿ ಗೌರವ ಸಲ್ಲಿಸಿದರು.
ಕಸಾಪ ಸಂತಾಪ
ಕಣಿವೆ : ಎಸ್.ಎನ್.ರಾಜಾರಾವ್ ನಿಧನಕ್ಕೆ ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ ಸಂತಾಪ ಸೂಚಿಸಿದೆ.
ಕನ್ನಡ ಸಾಹಿತ್ಯ ಪ್ರೇಮಿಯೂ ಆಗಿದ್ದ ರಾಜಾರಾವ್ ಕಳೆದ ಐದು ವರ್ಷಗಳ ಹಿಂದೆ ಕೂಡಿಗೆಯಲ್ಲಿ ಎರಡು ದಿನಗಳ ನಡೆದ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಸಂಪೂರ್ಣ ಖರ್ಚು ವೆಚ್ಚಗಳನ್ನು ಸ್ವತಃ ತಾವೊಬ್ಬರೇ ಭರಿಸುವ ಮೂಲಕ ಅಪಾರ ಸಾಹಿತ್ಯ ಪ್ರೇಮವನ್ನು ಮೈಗೂಡಿಸಿಗೊಂಡಿದ್ದನ್ನು ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ಸ್ಮರಿಸುವ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.ಎಸ್.ಎನ್. ರಾಜಾರಾವ್ ವಿಧಿವಶ
ಕಣಿವೆ, ಏ. ೧೮: ಕೊಡಗು ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರೂ ಆಗಿದ್ದ ಕೂಡಿಗೆ ಭಾಗದ ಹೆಗ್ಗಡಹಳ್ಳಿ ನಿವಾಸಿ ಎಸ್.ಎನ್.ರಾಜಾರಾವ್ (೬೮) ದೈವಾಧೀನರಾದರು. ಅನಾರೋಗ್ಯದಿಂದಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜಾರಾವ್ ಸೋಮವಾರ ರಾತ್ರಿ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಸೀಗೆಹೊಸೂರಿನ ಅವರ ತೋಟದಲ್ಲಿ ನೆರವೇರಿತು. ಮೃತರು ಪತ್ನಿ ಸೇರಿದಂತೆ ಮೂವರು ಪುತ್ರರು ಹಾಗೂ ಈರ್ವರು ಪುತ್ರಿಯರನ್ನು ಅಗಲಿದ್ದಾರೆ.
(ಮೊದಲ ಪುಟದಿಂದ) ಕೂಡಿಗೆ ಮಂಡಲ ಪ್ರಧಾನರಾಗಿ ರಾಜಕಾರಣ ಆರಂಭಿಸಿದ ರಾಜಾರಾವ್ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯಿತಿ ಸದಸ್ಯ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಬಸವನಹಳ್ಳಿಯ ವಿವಿಧೋದ್ದೇಶ ಗಿರಿಜನ ಸಹಕಾರ ಸಂಘ ಸೇರಿದಂತೆ ಕೂಡಿಗೆಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹಾಗೂ ವೀರಾಜಪೇಟೆ ತಾಲೂಕಿನ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಸದಾ ಕಾಲ ಶ್ವೇತ ವಸ್ತçಧಾರಿ ಯಾಗಿಯೇ ರಾಜಕಾರಣದಲ್ಲಿ ದಿನಗಳೆದ ರಾಜಾರಾವ್ ಆರಂಭದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿ ಕೊಂಡಿದ್ದರು. ಬಳಿಕ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದರು. ನಂತರ ನಡೆದ ಬೆಳವಣಿಗೆಯಲ್ಲಿ ಭಾರತೀಯ ಜನತಾ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರು.
ಮೃತರ ಅಂತ್ಯಕ್ರಿಯೆಯಲ್ಲಿ ಶಾಸಕ ಅಪ್ಪಚ್ಚು ರಂಜನ್, ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಥರ್‌ಗೌಡ, ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ, ವಕೀಲ ಹೆಚ್.ಎಸ್. ಚಂದ್ರಮೌಳಿ , ವೀರಾಜಪೇಟೆ ಅಭ್ಯರ್ಥಿ ಎ.ಎಸ್.ಪೊನ್ನಣ್ಣ, ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಕೂಡಿಗೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತಕುಮಾರ್, ಉಪಾಧ್ಯಕ್ಷ ಟಿ.ಪಿ.ಹಮೀದ್ ಸೇರಿದಂತೆ ಅಪಾರ ಮಂದಿ ಆಗಮಿಸಿ ಅಂತಿಮ ದರ್ಶನ ಪಡೆದರು.
ಕೂಡಿಗೆ ಬಂದ್
ಕೂಡಿಗೆ: ಎಸ್.ಎನ್. ರಾಜಾರಾವ್ ಪಾರ್ಥಿವ ಶರೀರವನ್ನು ಕೂಡಿಗೆ ಸರ್ಕಲ್‌ನಲ್ಲಿ ಒಂದು ಗಂಟೆಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಸಾವಿರಾರು ಅಭಿಮಾನಿಗಳು ಬಂದು ರಾಜಾರಾವ್‌ನವರ ದರ್ಶನ ಪಡೆದರು. ಕೂಡಿಗೆ ಸರ್ಕಲ್‌ನ ಎಲ್ಲಾ ಅಂಗಡಿ ಮತ್ತು ಹೊಟೇಲ್ ಮಾಲೀಕರು ಮೂರು ಗಂಟೆಗಳ ಕಾಲ ತಮ್ಮ ವ್ಯಾಪಾರ ವ್ಯವಹಾರಗಳನ್ನು ಸ್ಥಗಿತಗೊಳಿಸಿ ಗೌರವ ಸಲ್ಲಿಸಿದರು.
ಕಸಾಪ ಸಂತಾಪ
ಕಣಿವೆ : ಎಸ್.ಎನ್.ರಾಜಾರಾವ್ ನಿಧನಕ್ಕೆ ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ ಸಂತಾಪ ಸೂಚಿಸಿದೆ.
ಕನ್ನಡ ಸಾಹಿತ್ಯ ಪ್ರೇಮಿಯೂ ಆಗಿದ್ದ ರಾಜಾರಾವ್ ಕಳೆದ ಐದು ವರ್ಷಗಳ ಹಿಂದೆ ಕೂಡಿಗೆಯಲ್ಲಿ ಎರಡು ದಿನಗಳ ನಡೆದ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಸಂಪೂರ್ಣ ಖರ್ಚು ವೆಚ್ಚಗಳನ್ನು ಸ್ವತಃ ತಾವೊಬ್ಬರೇ ಭರಿಸುವ ಮೂಲಕ ಅಪಾರ ಸಾಹಿತ್ಯ ಪ್ರೇಮವನ್ನು ಮೈಗೂಡಿಸಿಗೊಂಡಿದ್ದನ್ನು ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ಸ್ಮರಿಸುವ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.